ಪಾಕಿಸ್ತಾನ ವಿರುದ್ಧದ ಟೆಸ್ಟ್ ಸರಣಿಗೆ 18 ಆಟಗಾರರ ತಂಡ ಪ್ರಕಟಿಸಿದ ಶ್ರೀಲಂಕಾ

ಇತ್ತೀಚೆಗಷ್ಟೇ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದ ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಪೈಪೋಟಿ ನೀಡಿ ಉತ್ತಮ ಪ್ರದರ್ಶನ ತೋರಿದ್ದ ಶ್ರೀಲಂಕಾ ಇದೀಗ ತನ್ನ ಮುಂದಿನ ಟೆಸ್ಟ್ ಸರಣಿಯಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ.
ಪಾಕಿಸ್ತಾನ ಮತ್ತು ಶ್ರೀಲಂಕಾ ತಂಡಗಳ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿ ಜುಲೈ 16ರಂದು ಆರಂಭಗೊಳ್ಳುತ್ತಿದ್ದು, ಈ ಸರಣಿಗಾಗಿ ಶ್ರೀಲಂಕಾ 18 ಆಟಗಾರರನ್ನೊಳಗೊಂಡ ತಂಡವನ್ನು ಪ್ರಕಟಿಸಿದೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ದಿಮುತ್ ಕರುಣರತ್ನೆ ಪಾಕಿಸ್ತಾನ ವಿರುದ್ಧದ ಟೆಸ್ಟ್ ಸರಣಿಯಲ್ಲಿಯೂ ಕೂಡಾ ಶ್ರೀಲಂಕಾ ತಂಡವನ್ನು ಮುನ್ನಡೆಸಲಿದ್ದು, ಪ್ರಕಟವಾಗಿರುವ ತಂಡ ಪ್ರವಾಸಿ ಪಾಕಿಸ್ತಾನದ ವಿರುದ್ಧ ಆಸ್ಟ್ರೇಲಿಯಾಗೆ ನೀಡಿದ ರೀತಿಯ ಪೈಪೋಟಿಯನ್ನು ನೀಡುವ ಸಾಧ್ಯತೆಗಳು ಗೋಚರಿಸುತ್ತಿವೆ.
ಪಾಕಿಸ್ತಾನ ವಿರುದ್ಧದ ಟೆಸ್ಟ್ ಸರಣಿಗೆ ಪ್ರಕಟವಾಗಿರುವ ಶ್ರೀಲಂಕಾ ತಂಡ ಮತ್ತು ಇತ್ತಂಡಗಳ ನಡುವೆ ನಡೆಯಲಿರುವ ಪಂದ್ಯದ ದಿನಾಂಕಗಳ ಕುರಿತಾದ ಮಾಹಿತಿ ಮುಂದೆ ಇದೆ ಓದಿ.

ಪ್ರಕಟವಾಗಿರುವ ಶ್ರೀಲಂಕಾ ತಂಡ
ದಿಮುತ್ ಕರುಣಾರತ್ನ (ನಾಯಕ), ಪಾತುಮ್ ನಿಸ್ಸಾಂಕ, ಓಷಾದ ಫೆರ್ನಾಂಡೋ, ಏಂಜೆಲೊ ಮ್ಯಾಥ್ಯೂಸ್, ಕುಸಲ್ ಮೆಂಡಿಸ್, ಧನಂಜಯ ಡಿ ಸಿಲ್ವಾ, ಕಮಿಂದು ಮೆಂಡಿಸ್, ನಿರೋಶನ್ ಡಿಕ್ವೆಲ್ಲಾ (ವಿಕೆಟ್ ಕೀಪರ್), ದಿನೇಶ್ ಚಂಡಿಮಲ್, ರಮೇಶ್ ಮೆಂಡಿಸ್, ಮಹೀಶ್ ತೀಕ್ಷಣ, ಕಸುನ್ ರಜಿತ, ಡಿಶ್ವ ಫೆರ್ನಾನ್ಡೊ, ಡಿಶ್ವ ಫೆರ್ನಾನ್ಡೊ, ಡಿ. ಮಧುಶಂಕ, ಪ್ರಭಾತ್ ಜಯಸೂರ್ಯ, ದುನಿತ್ ವೆಲ್ಲಲಾಗೆ, ಜೆಫ್ರಿ ವಾಂಡರ್ಸೆ

ತಂಡದಲ್ಲಿ ಕೆಲ ಬದಲಾವಣೆ
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿದಿದ್ದ ಪ್ರವೀಣ್ ಜಯವಿಕ್ರಮ, ಲಸಿತ್ ಎಂಬುಲ್ದೆನಿಯಾ, ಲಸಿತ್ ಮನಸಿಂಗೆ ಮತ್ತು ಚಾಮಿಕ ಕರುಣಾರತ್ನೆ ಇದೀಗ ಪಾಕಿಸ್ತಾನ ವಿರುದ್ಧದ ಟೆಸ್ಟ್ ಸರಣಿಗೆ ಪ್ರಕಟವಾಗಿರುವ ತಂಡದಿಂದ ಸ್ಥಾನ ಕಳೆದುಕೊಂಡು ಹೊರಬಿದ್ದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ 2 ಬಾರಿ 6 ವಿಕೆಟ್‍ಗಳ ಗೊಂಚಲನ್ನು ಪಡೆದ ಪ್ರಬತ್ ಜಯಸೂರ್ಯ ಮತ್ತೊಮ್ಮೆ ಅವಕಾಶ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಆಡುವ ಅವಕಾಶ ಸಿಗದ ದುನಿತ್ ವೆಲ್ಲಲಾ ಪಾಕಿಸ್ತಾನ ವಿರುದ್ಧ ಪ್ರಕಟವಾಗಿರುವ ತಂಡದಲ್ಲಿಯೂ ಕೂಡ ಅವಕಾಶ ಪಡೆದುಕೊಂಡಿದ್ದಾರೆ.

ಪಾಕಿಸ್ತಾನ ಮತ್ತು ಶ್ರೀಲಂಕಾ ನಡುವಿನ ಪಂದ್ಯಗಳ ವೇಳಾಪಟ್ಟಿ
ಜುಲೈ 11ರಿಂದ ಪಾಕಿಸ್ತಾನ ಮತ್ತು ಶ್ರೀಲಂಕಾ ತಂಡಗಳ ನಡುವೆ 3 ದಿನಗಳ ಅಭ್ಯಾಸ ಪಂದ್ಯ ನಡೆದಿದ್ದು ಈ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಹಾಗೂ ಇತ್ತಂಡಗಳ ನಡುವಿನ ಪ್ರಥಮ ಟೆಸ್ಟ್ ಪಂದ್ಯ ಜುಲೈ 16ರಿಂದ ಜುಲೈ 20ರವರೆಗೆ ಗಾಲೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ ಹಾಗೂ ಎರಡನೇ ಟೆಸ್ಟ್ ಪಂದ್ಯ ಜುಲೈ 24ರಿಂದ ಜುಲೈ 28ರವರೆಗೆ ಕೊಲಂಬೊದ ಪ್ರೇಮದಾಸ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications