Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

PAK vs SL: ಪಾಕಿಸ್ತಾನ vs ಶ್ರೀಲಂಕಾ ಟೆಸ್ಟ್ ಸರಣಿಯ ವೇಳಾಪಟ್ಟಿ ಪ್ರಕಟ

ಜುಲೈ 16ರಿಂದ ಪ್ರಾರಂಭವಾಗುವ ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ಬಾಬರ್ ಅಜಂ ನಾಯಕತ್ವದ ಪಾಕಿಸ್ತಾನ ತಂಡ ಶ್ರೀಲಂಕಾಕ್ಕೆ ಪ್ರಯಾಣಿಸಲಿದೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮಂಗಳವಾರ, ಜೂನ್ 20ರಂದು ತಿಳಿಸಿದೆ.

ಪಾಕಿಸ್ತಾನ ಮತ್ತು ಶ್ರೀಲಂಕಾ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯ ಜುಲೈ 16ರಂದು ಗಾಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಆರಂಭವಾಗಲಿದೆ. ನಂತರ ಕೊಲಂಬೊದ ಸಿಂಘಾಲೀಸ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಜುಲೈ 24ರಿಂದ 28ರವರೆಗೆ ಎರಡನೇ ಟೆಸ್ಟ್ ಪಂದ್ಯ ನಡೆಯಲಿದೆ.

PAK vs SL Test Series: Pakistan vs Sri Lanka Test Series Schedule Announced

ಬಾಬರ್ ಅಜಂ ನಾಯಕತ್ವದ ಪಾಕಿಸ್ತಾನ ತಂಡವು ಜುಲೈ 9ರಂದು ಶ್ರೀಲಂಕಾಕ್ಕೆ ಆಗಮಿಸಲಿದೆ. ಆ ಬಳಿಕ ಜುಲೈ 11ರಂದು ಎರಡು ದಿನಗಳ ಅಭ್ಯಾಸ ಪಂದ್ಯವನ್ನು ಆಡಲಿದೆ. ಪಿಸಿಬಿ ಬಿಡುಗಡೆಯ ಪ್ರಕಾರ, ಅಭ್ಯಾಸ ಪಂದ್ಯಕ್ಕೆ ಸ್ಥಳವನ್ನು ಇನ್ನೂ ನಿಗದಿಪಡಿಸಿಲ್ಲ.

ಈ ಹಿಂದೆ 2022ರಲ್ಲಿ ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ಪಾಕಿಸ್ತಾನ ತಂಡ ಶ್ರೀಲಂಕಾ ಪ್ರವಾಸದ ಸಂದರ್ಭದಲ್ಲಿ, ಅತ್ಯುತ್ತಮ ರನ್ ಚೇಸ್ ಮಾಡಿದ್ದು, 342 ರನ್‌ಗಳ ಗುರಿಯನ್ನು ಬೆನ್ನಟ್ಟಿತ್ತು ಹಾಗೂ ಮೊದಲ ಟೆಸ್ಟ್ ಪಂದ್ಯವನ್ನು ನಾಲ್ಕು ವಿಕೆಟ್‌ಗಳಿಂದ ಗೆದ್ದಿತು.

ಎರಡನೇ ಟೆಸ್ಟ್‌ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ 246 ರನ್‌ಗಳ ಗೆಲುವಿನೊಂದಿಗೆ ಸರಣಿಯನ್ನು ಸಮಬಲಗೊಳಿಸಿದರು, ಈ ಮೂಲಕ ಎರಡು ಪಂದ್ಯಗಳ ಟೆಸ್ಟ್ ಸರಣಿ 1-1 ಅಂತರದಲ್ಲಿ ಡ್ರಾ ಗೊಂಡಿತು.

ಪಾಕಿಸ್ತಾನ ತಂಡ ಕೊನೆಯದಾಗಿ 2014ರಲ್ಲಿ ಕೊಲಂಬೊದ ಸಿಂಘಲೀಸ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಟೆಸ್ಟ್ ಪಂದ್ಯವನ್ನಾಡಿದೆ. ಪಾಕ್ ತಂಡ ಆ ಮೈದಾನದಲ್ಲಿ ಆರು ಟೆಸ್ಟ್‌ ಪಂದ್ಯಗಳನ್ನು ಆಡಿದ್ದು, ಒಂದನ್ನು ಗೆದ್ದಿದ್ದಾರೆ ಮತ್ತು ನಾಲ್ಕು ಪಂದ್ಯಗಳು ಡ್ರಾದಲ್ಲಿ ಅಂತ್ಯಗೊಂಡಿವೆ.

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ 2023-25ರ ಚಕ್ರದಲ್ಲಿ ಶ್ರೀಲಂಕಾ ಪ್ರವಾಸವು ಪಾಕಿಸ್ತಾನ ತಂಡದ ಮೊದಲ ಸರಣಿಯು ನಿಯೋಜನೆಯಾಗಿದೆ.

ಮುಂಬರುವ ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಬಾಬರ್ ಅಜಂ ನಾಯಕತ್ವದ ಪಾಕಿಸ್ತಾನ ತಂಡವನ್ನು ಶನಿವಾರ, ಜೂನ್ 17ರಂದು ಪ್ರಕಟಿಸಲಾಗಿದೆ.

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಪಾಕಿಸ್ತಾನ ತಂಡ

ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ಉಪ ನಾಯಕ/ ವಿಕೆಟ್ ಕೀಪರ್), ಅಮರ್ ಜಮಾಲ್, ಅಬ್ದುಲ್ಲಾ ಶಫೀಕ್, ಅಬ್ರಾರ್ ಅಹ್ಮದ್, ಹಸನ್ ಅಲಿ, ಇಮಾಮ್-ಉಲ್-ಹಕ್, ಮೊಹಮ್ಮದ್ ಹುರೈರಾ, ಮೊಹಮ್ಮದ್ ನವಾಜ್, ನಸೀಮ್ ಶಾ, ನೋಮನ್ ಅಲಿ, ಸಲ್ಮಾನ್ ಅಲಿ ಅಘಾ, ಸರ್ಫರಾಜ್ ಅಹ್ಮದ್ (ವಿಕೆಟ್ ಕೀಪರ್), ಸೌದ್ ಶಕೀಲ್, ಶಾಹೀನ್ ಶಾ ಅಫ್ರಿದಿ, ಶಾನ್ ಮಸೂದ್.

Story first published: Tuesday, June 20, 2023, 19:45 [IST]
Other articles published on Jun 20, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+