PAK vs WI: ಮೊದಲ ಏಕದಿನ ಪಂದ್ಯದ ಟಾಸ್, ಆಡುವ ಬಳಗ ಮತ್ತು ಲೈವ್ ಸ್ಕೋರ್

ಇಂಡಿಯನ್ ಪ್ರೀಮಿಯರ್ ಲೀಗ್ ಹದಿನೈದನೇ ಆವೃತ್ತಿ ಮುಕ್ತಾಯವಾದ ನಂತರ ಅಂತರರಾಷ್ಟ್ರೀಯ ಕ್ರಿಕೆಟ್ ಸರಣಿಗಳು ಸಾಲು ಸಾಲಾಗಿ ಆಯೋಜನೆಯಾಗಿದ್ದು, ಕಳೆದ ವರ್ಷ ನಡೆಯಬೇಕಿದ್ದ ಪಾಕಿಸ್ತಾನ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವಿನ ಏಕದಿನ ಸರಣಿ ಮರು ಆಯೋಜನೆಯಾಗಿದೆ. ಹೌದು, ಕಳೆದ ವರ್ಷದ ಡಿಸೆಂಬರ್ ತಿಂಗಳಿನಲ್ಲಿ ಪಾಕಿಸ್ತಾನ ಪ್ರವಾಸವನ್ನು ಕೈಗೊಂಡಿದ್ದ ವೆಸ್ಟ್ ಇಂಡೀಸ್ ಮೂರು ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಭಾಗವಹಿಸಿ ವೈಟ್ ವಾಷ್ ಮುಖಭಂಗಕ್ಕೊಳಗಾಗಿತ್ತು ಹಾಗೂ ನಂತರ ಆಯೋಜನೆಯಾಗಿದ್ದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಕಣಕ್ಕಿಳಿಯಬೇಕಿತ್ತು. ಆದರೆ, ಕ್ಯಾಂಪ್‌ನಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡ ಕಾರಣ ಇತ್ತಂಡಗಳ ನಡುವಿನ ಈ ಸರಣಿ ಮುಂದೂಡಲ್ಪಟ್ಟಿತ್ತು.
ಈ ಸರಣಿ ಇದೀಗ ಪುನರಾರಂಭವಾಗಿದ್ದು, ಇಂದು ( ಜೂನ್ 8 ) ಇತ್ತಂಡಗಳ ನಡುವಿನ ಮೊದಲ ಏಕದಿನ ಪಂದ್ಯ ರಾವಲ್ಪಿಂಡಿಯ ಮುಲ್ತಾನ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡದ ನೂತನ ನಾಯಕ ನಿಕೋಲಸ್ ಪೂರನ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಪಂದ್ಯ ಈಗಾಗಲೇ ಆರಂಭಗೊಂಡಿದ್ದು, ಕಣಕ್ಕಿಳಿದಿರುವ ಆಡುವ ಬಳಗ ಮತ್ತು ಲೈವ್ ಸ್ಕೋರ್ ಮಾಹಿತಿ ಈ ಕೆಳಕಂಡಂತಿದೆ ಓದಿ..
ಲೈವ್ ಸ್ಕೋರ್:
ಆಡುವ ಬಳಗಗಳು:
ಪಾಕಿಸ್ತಾನ ಆಡುವ ಬಳಗ: ಫಖರ್ ಜಮಾನ್, ಇಮಾಮ್-ಉಲ್-ಹಕ್, ಬಾಬರ್ ಆಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಮೊಹಮ್ಮದ್ ಹ್ಯಾರಿಸ್, ಖುಶ್ದಿಲ್ ಶಾ, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಹಾರಿಸ್ ರೌಫ್
ವೆಸ್ಟ್ ಇಂಡೀಸ್ ಆಡುವ ಬಳಗ: ಶಾಯ್ ಹೋಪ್ (ವಿಕೆಟ್ ಕೀಪರ್), ಶಮರ್ ಬ್ರೂಕ್ಸ್, ನಿಕೋಲಸ್ ಪೂರನ್ (ನಾಯಕ), ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ರೋವ್‌ಮನ್ ಪೊವೆಲ್, ಅಕೆಲ್ ಹೊಸೈನ್, ರೊಮಾರಿಯೋ ಶೆಫರ್ಡ್, ಅಲ್ಜಾರಿ ಜೋಸೆಫ್, ಜೇಡನ್ ಸೀಲ್ಸ್, ಹೇಡನ್ ವಾಲ್ಷ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications