ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

NZ T20 Tri-Series: ಬಾಂಗ್ಲಾದೇಶವನ್ನು ಸೋಲಿಸುವ ಮೂಲಕ ಶುಭಾರಂಭ ಮಾಡಿದ ಪಾಕಿಸ್ತಾನ

Pakistan Beat Bangladesh By 21 Runs In NZ T20 Tri-Series Opening Game

ನ್ಯೂಜಿಲೆಂಡ್ ಟಿ20 ತ್ರಿಕೋನ ಸರಣಿಯ ಮೊದಲನೇ ಪಂದ್ಯದಲ್ಲಿ ಪಾಕಿಸ್ತಾನ ಬಾಂಗ್ಲಾದೇಶವನ್ನು 21 ರನ್‌ಗಳಿಂದ ಸೋಲಿಸುವ ಮೂಲಕ ಶುಭಾರಂಭ ಮಾಡಿದೆ. ನ್ಯೂಜಿಲೆಂಡ್‌ನ ಕ್ರಿಸ್ಟ್‌ಚರ್ಚ್‌ನ ಹಾಗ್ಲೆ ಓವಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ, 168 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಬಾಂಗ್ಲಾದೇಶ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 146 ರನ್ ಗಳಿಸಲಷ್ಟೇ ಶಕ್ತವಾಯಿತು.

ನಾಯಿಗಳು ಬೊಗಳುತ್ತವೇ ಎಂದು ಕಲ್ಲು ಹೊಡೆಯುತ್ತಾ ನಿಲ್ಲಲಾರೆ: ಟೀಕಾಕಾರರ ಬಾಯಿ ಮುಚ್ಚಿಸಿದ ಜಸ್ಪ್ರೀತ್ ಬುಮ್ರಾ!ನಾಯಿಗಳು ಬೊಗಳುತ್ತವೇ ಎಂದು ಕಲ್ಲು ಹೊಡೆಯುತ್ತಾ ನಿಲ್ಲಲಾರೆ: ಟೀಕಾಕಾರರ ಬಾಯಿ ಮುಚ್ಚಿಸಿದ ಜಸ್ಪ್ರೀತ್ ಬುಮ್ರಾ!

ಟಾಸ್ ಗೆದ್ದ ಬಾಂಗ್ಲಾದೇಶ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡಕ್ಕೆ ಮೊಹಮ್ಮದ್ ರಿಜ್ವಾನ್‌ ಮತ್ತು ನಾಯಕ ಬಾಬರ್ ಅಜಂ ಉತ್ತಮ ಆರಂಭ ನೀಡಿದರು. 7.1 ಓವರ್‌ಗಳಲ್ಲಿ ಈ ಜೋಡಿ 52 ರನ್ ಕಲೆಹಾಕಿತು.

ನಾಯಕ ಬಾಬರ್ ಅಜಂ 25 ಎಸೆತಗಳಲ್ಲಿ 22 ರನ್ ಗಳಿಸಿ ಔಟಾದರು, ನಂತರ ಬಂದ ಶಾನ್ ಮಸೂದ್ 22 ಎಸೆತಗಳಲ್ಲಿ 4 ಬೌಂಡರಿ 1 ಸಿಕ್ಸರ್ ಸಹಿತ 31 ರನ್ ಗಳಿಸುವ ಮೂಲಕ ಪಾಕಿಸ್ತಾನ ತಂಡದ ರನ್‌ ಗಳಿಕೆಗೆ ವೇಗ ನೀಡಿದರು. ಮತ್ತೊಮ್ಮೆ ಪಾಕಿಸ್ತಾನದ ಮಧ್ಯಮ ಕ್ರಮಾಂಕದ ಬ್ಯಾಟರ್ ಗಳು ಉತ್ತಮ ರನ್ ಗಳಿಸುವಲ್ಲಿ ವಿಫಲವಾದರು.

ಮೊಹಮ್ಮದ್ ರಿಜ್ವಾನ್ ಅರ್ಧಶತಕ

ಮೊಹಮ್ಮದ್ ರಿಜ್ವಾನ್ ಅರ್ಧಶತಕ

ಸದ್ಯ ಟಿ20 ಕ್ರಿಕೆಟ್‌ನಲ್ಲಿ ನಂಬರ್ 1 ಬ್ಯಾಟರ್ ಆಗಿರುವ ಮೊಹಮ್ಮದ್ ರಿಜ್ವಾನ್ ತಮ್ಮ ಉತ್ತಮ ಫಾರ್ಮ್‌ ಅನ್ನು ಮುಂದುವರೆಸಿದರು. ಒಂದು ಕಡೆ ವಿಕೆಟ್ ಬೀಳುತ್ತಿದ್ದರು, ಅವರು ಕೊನೆಯವರೆಗೂ ಅಜೇಯರಾಗಿ ಉಳಿಯುವ ಮೂಲಕ ಪಾಕಿಸ್ತಾನ ಉತ್ತಮ ರನ್ ಕಲೆಹಾಕುವಲ್ಲಿ ಸಹಾಯ ಮಾಡಿದರು.

50 ಎಸೆತಗಳಲ್ಲಿ 7 ಬೌಂಡರಿ 2 ಸಿಕ್ಸರ್ ಸಹಿತವಾಗಿ ಅಜೇಯ 78 ರನ್ ಗಳಿಸಿದ ಮೊಹಮ್ಮದ್ ರಿಜ್ವಾನ್ ಪಾಕಿಸ್ತಾನ 167 ರನ್ ಕಲೆ ಹಾಕುವಲ್ಲಿ ಮಹತ್ವದ ಕೊಡುಗೆ ನೀಡಿದರು. ತಮ್ಮ ಉತ್ತಮ ಬ್ಯಾಟಿಂಗ್ ಪ್ರದರ್ಶನಕ್ಕಾಗಿ ರಿಜ್ವಾನ್ ಪಂದ್ಯದ ಆಟಗಾರ ಪ್ರಶಸ್ತಿಗೆ ಭಾಜನರಾದರು. ಅಂತಿಮವಾಗಿ ಪಾಕಿಸ್ತಾನ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 167 ರನ್ ಕಲೆಹಾಕಿತು.

ಬಾಂಗ್ಲಾ ಪರವಾಗಿ ಟಸ್ಕಿನ್ ಅಹಮದ್ 4 ಓವರ್‌ಗಳಲ್ಲಿ 25 ರನ್ ನೀಡಿ 2 ವಿಕೆಟ್ ಪಡೆದರು. ನಸುಮ್ ಅಹ್ಮದ್ 4 ಓವರ್‌ಗಳಲ್ಲಿ 22 ರನ್ ನೀಡಿ 1 ವಿಕೆಟ್ ಪಡೆದರು

Ind vs SA 1st ODI: ದ. ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಸೋಲಿಗೆ 4 ಪ್ರಮುಖ ಕಾರಣಗಳು

ಬಾಂಗ್ಲಾದೇಶ ಬ್ಯಾಟರ್‌ಗಳು ವಿಫಲ

ಬಾಂಗ್ಲಾದೇಶ ಬ್ಯಾಟರ್‌ಗಳು ವಿಫಲ

168 ರನ್‌ಗಳ ಗುರಿಯನ್ನು ಬೆನ್ನತ್ತಿದ ಬಾಂಗ್ಲಾ ತಂಡಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. ಮೆಹದಿ ಹಸನ್ ಮೀರಜ್ 11 ಎಸೆತಗಳಲ್ಲಿ 10 ರನ್ ಗಳಿಸಿ ಔಟಾದರು, ಅವರ ಬೆನ್ನಲ್ಲೇ ಸಬ್ಬೀರ್ ರೆಹಮಾನ್ 18 ಎಸೆತಗಳಲ್ಲಿ 14 ರನ್ ಗಳಿಸಿ ವಿಕೆಟ್ ಒಪ್ಪಿಸುವ ಮೂಲಕ ಬಾಂಗ್ಲಾ ಆರಂಭದಲ್ಲೇ ಒತ್ತಡಕ್ಕೆ ಸಿಲುಕಿತು.

ನಂತರ ಬಂದ ಲಿಟ್ಟನ್ ದಾಸ್ 26 ಎಸೆತಗಳಲ್ಲಿ 35 ರನ್ ಗಳಿಸಿ ಬಾಂಗ್ಲಾದೇಶಕ್ಕೆ ಸ್ವಲ್ಪ ಚೇತರಿಕೆ ನೀಡಿದರು, ಆಫಿಫ್ ಹೊಸೆನ್ 23 ಎಸೆತಗಳಲ್ಲಿ 25 ರನ್ ಗಳಿಸಿದರು. ಮೊಸದ್ದಿಕ್ ಹೊಸೈನ್ ಶೂನ್ಯಕ್ಕೆ ಔಟಾದರೆ, ಬಾಂಗ್ಲಾದೇಶದ ನಾಯಕ ನೂರುಲ್ ಹೊಸೈನ್ 8 ರನ್ ಗಳಿಸಿ ನಿರಾಸೆ ಅನುಭವಿಸಿದರು.

ಯಾಸಿರ್ ಅಲಿ ಮಾತ್ರ 21 ಎಸೆತಗಳಲ್ಲಿ 42 ರನ್ ಹೊಡೆಯುವ ಮೂಲಕ ಪಾಕಿಸ್ತಾನ ಬೌಲರ್ ಗಳನ್ನು ಸಮರ್ಥವಾಗಿ ಎದುರಿಸಿದರು. ಅಂತಿಮವಾಗಿ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 146 ರನ್ ಗಳಿಸುವ ಮೂಲಕ 21 ರನ್‌ಗಳ ಸೋಲನುಭವಿಸಿತು.

ಪಾಕಿಸ್ತಾನ ಬೌಲರ್ ಗಳ ಉತ್ತಮ ಪ್ರದರ್ಶನ

ಪಾಕಿಸ್ತಾನ ಬೌಲರ್ ಗಳ ಉತ್ತಮ ಪ್ರದರ್ಶನ

ಪಾಕಿಸ್ತಾನದ ಬೌಲರ್‌ಗಳು ಉತ್ತಮ ಪ್ರದರ್ಶನ ನೀಡುವ ಮೂಲಕ ಬಾಂಗ್ಲಾದೇಶದ ಮೇಲೆ ಇನ್ನಿಂಗ್ಸ್ ಆರಂಭದಿಂದಲೇ ಒತ್ತಡ ಹಾಕಿದರು. ಮೊಹಮ್ಮದ್ ವಾಸೀಂ ಜೂನಿಯರ್ 4 ಓವರ್‌ಗಳಲ್ಲಿ 24 ರನ್ ನೀಡಿ 3 ವಿಕೆಟ್ ಪಡೆದರು. ಮೊಹಮ್ಮದ್ ನವಾಜ್ 4 ಓವರ್‌ಗಳಲ್ಲಿ 25 ರನ್ ನೀಡಿ 2 ವಿಕೆಟ್ ಪಡೆದರು.

ಉಳಿದಂತೆ ಶಹನವಾಜ್ ದಹಲಿ, ಹ್ಯಾರಿಸ್‌ ರೌಫ್, ಶದಾಬ್ ಖಾನ್ ತಲಾ 1 ವಿಕೆಟ್ ಪಡೆಯುವ ಮೂಲಕ ಬಾಂಗ್ಲಾದೇಶದ ರನ್‌ ಗಳಿಕೆಗೆ ಕಡಿವಾಣ ಹಾಕಿದರು. ಟಿ20 ವಿಶ್ವಕಪ್‌ಗೂ ಮುನ್ನ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ನ್ಯೂಜಿಲೆಂಡ್‌ನಲ್ಲಿ ತ್ರಿಕೋನ ಸರಣಿ ಆಡಲಿವೆ. ಒಟ್ಟು 7 ಪಂದ್ಯಗಳು ನಡೆಯಲಿದ್ದು, ಎರಡನೇ ಪಂದ್ಯದಲ್ಲಿ ಅಕ್ಟೋಬರ್ 8 ರಂದು ಪಾಕಿಸ್ತಾನ-ನ್ಯೂಜಿಲೆಂಡ್ ಮುಖಾಮುಖಿಯಾಗಲಿದೆ.

ಬಾಂಗ್ಲಾದೇಶ, ಪಾಕಿಸ್ತಾನ ಪ್ಲೇಯಿಂಗ್ ಇಲೆವೆನ್

ಬಾಂಗ್ಲಾದೇಶ, ಪಾಕಿಸ್ತಾನ ಪ್ಲೇಯಿಂಗ್ ಇಲೆವೆನ್

ಬಾಂಗ್ಲಾದೇಶ: ಮೆಹಿದಿ ಹಸನ್ ಮಿರಾಜ್, ಸಬ್ಬಿರ್ ರೆಹಮಾನ್, ಅಫೀಫ್ ಹೊಸೈನ್, ಮೊಸದ್ದೆಕ್ ಹೊಸೈನ್, ಲಿಟ್ಟನ್ ದಾಸ್, ಯಾಸಿರ್ ಅಲಿ, ನೂರುಲ್ ಹಸನ್ (ನಾಯಕ), ತಸ್ಕಿನ್ ಅಹ್ಮದ್, ಹಸನ್ ಮಹ್ಮದ್, ಮುಸ್ತಫಿಜುರ್ ರೆಹಮಾನ್, ನಸುಮ್ ಅಹ್ಮದ್

ಪಾಕಿಸ್ತಾನ: ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ , ಶಾನ್ ಮಸೂದ್, ಹೈದರ್ ಅಲಿ, ಇಫ್ತಿಕರ್ ಅಹ್ಮದ್, ಆಸಿಫ್ ಅಲಿ, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಮ್ ಜೂನಿಯರ್, ಹ್ಯಾರಿಸ್ ರೌಫ್, ಶಾನವಾಜ್ ದಹಾನಿ

Story first published: Friday, October 7, 2022, 12:32 [IST]
Other articles published on Oct 7, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X