ಪಾಕಿಸ್ತಾನ ತಂಡ ಈ ಬಾರಿ ವಿಶ್ವಕಪ್ ಟ್ರೋಫಿ ಗೆದ್ದೇ ಗೆಲ್ಲುತ್ತಂತೆ!

ಲಂಡನ್, ಜೂನ್ 03: ಸರ್ಫರಾಝ್ ಅಹ್ಮದ್ ನಾಯಕತ್ವದ ಪಾಕಿಸ್ತಾನ ಕ್ರಿಕೆಟ್ ತಂಡ ಈ ಬಾರಿ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುತ್ತದೆ ಎಂದು ಪಾಕಿಸ್ತಾನದ ಮಾಜಿ ಆಲ್‌ರೌಂಡರ್ ಹಾಗೂ ನಾಯಕ ಶಾಹಿದ್ ಅಫ್ರಿದಿ ಹೇಳಿದ್ದಾರೆ.
ವಿಶ್ವಕಪ್ ವೇಳಾಪಟ್ಟಿ / ಮುಖಾಮುಖಿ ದಾಖಲೆಗಳು
ಇಂಗ್ಲೆಂಡ್ ಮತ್ತು ವೇಲ್ಸ್ ಆತಿಥ್ಯದಲ್ಲಿ ನಡೆಯುತ್ತಿರುವ 12ನೇ ಆಔರತ್ತಿಯ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡ ತನ್ನ ಮೊದಲ ಪಂದ್ಯದಲ್ಲೇ 105 ರನ್‌ಗಳಿಗೆ ಆಲ್‌ಔಟ್ ಆಗುವ ಮೂಲಕ ವೆಸ್ಟ್ ಇಂಡೀಸ್ ವಿರುದ್ಧ 7 ವಿಕೆಟ್‌ಗಳ ಹೀನಾಯ ಸೋಲನುಭವಿಸಿತ್ತು.
ಇದಾದ ಬಳಿಕ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡಿರುವ ಮಾಜಿ ಆಲ್‌ರೌಂಡರ್ ಅಫ್ರಿದಿ, ತಂಡ ಆತ್ಮವಿಶ್ವಾಸ ಮರಳಿ ಕಂಡುಕೊಳ್ಳುವ ಮೂಲಕ ಇಂಗ್ಲೆಂಡ್ ವಿರುದ್ಧದ ಎರಡನೇ ಪಂದ್ಯದಲ್ಲಿ ಜಯ ದಾಖಲಿಸುವಂತೆ ಪ್ರೇರೇಪಿಸಿದ್ದಾರೆ.
"ನಮ್ಮ ತಂಡದ ಮೇಲೆ ಸಂಪೂರ್ಣ ವಿಶ್ವಾಸವಿದ್ದು, ಈ ಬಾರಿ ಪ್ರಶಸ್ತಿ ಗೆದ್ದೇ ಗೆಲ್ಲುತ್ತದೆ ಎಂಬ ನಂಬಿಕೆ ಇದೆ. ಸರ್ಫರಾಝ್ ಅಹ್ಮದ್ ಮತ್ತು ತಂಡಕ್ಕೆ ಶುಭವಾಗಲಿ ಎಂದು ಹಾರೈಸುತ್ತೇನೆ. ಟೂರ್ನಿಯಲ್ಲಿ ಆರಂಭಿಕ ಪಂದ್ಯಗಳನ್ನು ಗೆಲ್ಲುವ ಮೂಲಕ ಆತ್ಮವಿಶ್ವಾಸ ಮತ್ತು ಜಯದ ಲಯ ಕಾಯ್ದುಕೊಳ್ಳುವುದು ಮುಖ್ಯ. ಇಂಗ್ಲೆಂಡ್ ವಿರುದ್ಧ ಗೆಲ್ಲುವ ಕಡೆಗೆ ಪ್ರಯತ್ನಿಸಬೇಕು,'' ಎಂದು ಅಫ್ರಿದಿ ಟ್ವೀಟ್ ಮಾಡಿದ್ದಾರೆ.
ಅಂತೆಯೇ ಇಂಗ್ಲೆಂಡ್ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ, ತನ್ನ ಪಾಲಿನ 50 ಓವರ್‌ಗಳಲ್ಲಿ 8 ವಿಕೆಟ್‌ಗೆ 348 ರನ್‌ಗಳ ಬೃಹತ್ ಮೊತ್ತವನ್ನು ದಾಖಲಿಸಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications