ಮೇ 15 ಬುಧವಾರ, ಮೂರು ಟಿ20 ಪಂದ್ಯಗಳ ಸರಣಿಗಾಗಿ ಪಾಕಿಸ್ತಾನ ತಂಡ ಐರ್ಲೆಂಡ್ ಪ್ರವಾಸ ಕೈಗೊಂಡಿತ್ತು. ಐರ್ಲೆಂಡ್ ವಿರುದ್ಧ ಅಂತಿಮ ಟಿ20 ಪಂದ್ಯವನ್ನು ನಡೆದ 2-1 ಅಂತರದಿಂದ ಪಾಕ್ ಗೆಲ್ಲುವ ಮೂಲಕ ಸರಣಿಯನ್ನು ಕೈ ವಶ ಮಾಡಿಕೊಂಡಿದೆ.
ಮೊದಲ ಪಂದ್ಯದಲ್ಲಿ ಪಾಕ್ ಎದುರು ಐರ್ಲೆಂಡ್ ಗೆದ್ದು ಶಾಕ್ ನೀಡಿತ್ತು. ಬಳಿಕ ಎರಡನೇ ಪಂದ್ಯದಲ್ಲಿ ಐರ್ಲೆಂಡ್ ನೀಡಿದ ಬೃಹತ್ ಗುರಿಯನ್ನು ಪಾಕ್ ಬೆನ್ನಟ್ಟಿ ಗೆಲುವು ಸಾಧಿಸಿತ್ತು. ಹೀಗಾಗಿ ಅಂತಿಮ ಪಂದ್ಯ ಫೈನಲ್ ಆಗಿ ಏರ್ಪಟ್ಟು ಪಾಕ್ ಸರಣಿ ಗೆದ್ದಿದೆ.

ಈ ಪಂದ್ಯದಲ್ಲಿ ಪಾಕ್ ನಾಯಕ ಬಾಬರ್ ಆಜಮ್ ಅದ್ಬುತ ಇನ್ನಿಂಗ್ಸ್ ಆಡಿದರು. 42 ಎಸೆತಗಳಲ್ಲಿ 6 ಬೌಂಡರಿ ಮತ್ತು 5 ಸಿಕ್ಸರ್‌ಗಳೊಂದಿಗೆ 75 ರನ್ ಗಳಿಸಿದರು. ಈ ಮೂಲಕ ಬಾಬರ್ ತಮ್ಮ ಟಿ20 ವೃತ್ತಿಜೀವನದಲ್ಲಿ 39ನೇ ಬಾರಿಗೆ 50ಕ್ಕೂ ಹೆಚ್ಚು ರನ್ ಗಳಿಸಿದರು.
ಅಲ್ಲದೆ, ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ರೆಕಾರ್ಡ್ ಅನ್ನು ಬಾಬರ್ ಅಜಮ್ ಬ್ರೇಕ್ ಮಾಡಿದ್ದು, ಟಿ20 ಮಾದರಿಯಲ್ಲಿ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆಯನ್ನು ಮಾಡಿದ್ದಾರೆ.
ಹಾಗಾದರೆ ಈ ಸಾಧನೆಯ ಬಗ್ಗೆ ವಿವರವಾಗಿ ನೋಡುವುದಾರೆ, ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 50ಕ್ಕೂ ಹೆಚ್ಚು ರನ್ ಅನ್ನು 38 ಬಾರಿ ಗಳಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದರು. ಇದೀಗ ಬಾಬರ್ ಅಜಮ್ 39 ಬಾರಿ 50ಕ್ಕೂ ಹೆಚ್ಚು ರನ್ ಗಳಿಸಿದ ವಿಶ್ವದ ನಂಬರ್ ಒನ್ ಬ್ಯಾಟರ್ ಎನಿಸಿಕೊಂಡಿದ್ದಾರೆ.
1)ಬಾಬರ್ ಆಜಮ್ - 39
2)ವಿರಾಟ್ ಕೊಹ್ಲಿ - 38
3)ರೋಹಿತ್ ಶರ್ಮಾ - 34
4)ಮೊಹಮ್ಮದ್ ರಿಜ್ವಾನ್ - 29
5)ಡೇವಿಡ್ ವಾರ್ನರ್ - 27
2024ರ ಟಿ 20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ಮತ್ತು ಭಾರತವನ್ನು ಒಂದೇ ಗುಂಪಿನಲ್ಲಿ ಇರಿಸಲಾಗಿದೆ. ಜೂನ್ 9 ರಂದು ಈ ಎರಡು ತಂಡಗಳ ನಡುವೆ ಜಿದ್ದಾಜಿದ್ದಿನ ಪೈಪೋಟಿಯನ್ನು ಅಭಿಮಾನಿಗಳು ಕಣ್ತುಂಬಿಕೊಳ್ಳಲಿದ್ದಾರೆ. ಭಾರತ ಮತ್ತು ಪಾಕಿಸ್ತಾನಿ ಅಭಿಮಾನಿಗಳಲ್ಲದೆ, ವಿಶ್ವದಾದ್ಯಂತದ ಕ್ರಿಕೆಟ್ ಅಭಿಮಾನಿಗಳು ಸಹಾ ಉಭಯ ತಂಡಗಳ ಕ್ರಿಕೆಟ್ ಕದನಕ್ಕೆ ಕಾಯುತ್ತಿದ್ದಾರೆ.
ಭಾರತ ತಂಡ : ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿ.ಕೀ), ಸಂಜು ಸ್ಯಾಮ್ಸನ್ (ವಿ.ಕೀ), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶ್‌ದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.
ಪಾಕಿಸ್ತಾನ ತಂಡ : ಬಾಬರ್ ಆಜಮ್ (ನಾಯಕ) ಇಫ್ತಿಕರ್ ಅಹಮದ್, ಇಮಾದ್ ವಾಸಿಂ, ಸಲ್ಮಾನ್ ಅಲಿ ಅಘಾ, ಶದಾಬ್ ಖಾನ್, ಫಖರ್ ಜಮಾನ್, ಸೈಮ್ ಅಯೂಬ್, ಉಸ್ಮಾನ್ ಖಾನ್, ಅಬ್ರಾರ್ ಅಹಮದ್, ಹಾರಿಸ್ ರೌಫ್, ಹಸನ್ ಅಲಿ, ಅಬ್ಬಾಸ್ ಅಫ್ರಿದಿ, ಮೊಹಮ್ಮದ್ ಅಮೀರ್, ಇರ್ಫಾನ್ ಖಾನ್, ನಸೀಮ್ ಶಾ, ಶಾಹೀನ್ ಶಾ ಆಫ್ರಿದಿ, ಆಝಂ ಖಾನ್ (ವಿ.ಕೀ) ಮೊಹಮ್ಮದ್ ರಿಝ್ವಾನ್ (ವಿ.ಕೀ)