ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡ ಮೊದಲ ಎರಡು ಪಂದ್ಯಗಳಲ್ಲಿ ಸತತ ಗೆಲುವು ಸಾಧಿಸಿದ ಬಳಿಕ ಇದೀಗ ಸತತ ಎರಡನೇ ಸೋಲು ಅನುಭವಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪಾಕಿಸ್ತಾನ ತಂಡ ಆಸ್ಟ್ರೇಲಿಯಾ ವಿರುದ್ಧ 62 ರನ್‌ಗಳ ಅಂತರದ ಸೋಲು ಅನುಭವಿಸಿದೆ. ಹೈಸ್ಕೋರಿಂಗ್ ಪಂದ್ಯದಲ್ಲಿ ಆಸ್ಟ್ರೇಲಿಯಾ ನೀಡಿದ್ದ 368 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಪಾಕಿಸ್ತಾನ 305 ರನ್‌ಗಳನ್ನು ಗಳಿಸಿ ಶರಣಾಗಿದೆ.
ಈ ಸೋಲಿನ ಬಳಿಕ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ ಪ್ರತಿಕ್ರಿಯೆ ನೀಡಿದ್ದು ಸೋಲಿಗೆ ಕಾರಣ ಯಾರು ಎನ್ನುವುದನ್ನು ಹೇಳಿಕೊಂಡಿದ್ದಾರೆ. ಅಲ್ಲದೆ ಸತತ ಎರಡನೇ ಸೋಲಿನ ಬಳಿಕ ಪಾಕ್ ನಾಯಕ ಬಾಬರ್ ಅಜಂ ತಂಡದ ಕೆಲ ವಿಭಾಗದ ಪ್ರದರ್ಶನದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಂದಹಾಗೆ ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ ಪಾಕಿಸ್ತಾನ ತಂಡದ ಸೋಲಿಗೆ ಬೌಲರ್‌ಗಳು ಫೀಲ್ಡರ್‌ಗಳು ಕಾರಣ ಎಂದು ಬಾಬರ್ ಅಜಂ ದೂರಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ ಪಾಕಿಸ್ತಾನ ತಂಡದ ಆಟಗಾರರು ಮೂರು ಪ್ರಮುಖ ಕ್ಯಾಚ್‌ಗಳನ್ನು ಕೈಚೆಲ್ಲಿದ್ದರು. ಇದು ಆಸ್ಟ್ರೇಲಿಯಾ ತಂಡ ಈ ಪಂದ್ಯದಲ್ಲಿ ಬೃಹತ್ ಮೊತ್ತವನ್ನು ಗಳಿಸಲು ಕಾರಣವಾಯಿತು.
"ನಾವು ಬೌಲಿಂಗ್‌ನಲ್ಲಿ ನಿರೀಕ್ಷಿತ ಮಟ್ಟದಲ್ಲಿ ಪ್ರದರ್ಶನ ನೀಡಲಿಲ್ಲ. ಅಲ್ಲದೆ ನೀವು ವಾರ್ನರ್ ಅವರಂಥಾ ಆಟಗಾರರ ಕ್ಯಾಚನ್ನು ಕೈಚೆಲ್ಲಿದರೆ ಅವರು ನಿಮ್ಮಗೆ ಮತ್ತೆ ಅವಕಾಶ ನೀಡುವುದಿಲ್ಲ. ಇದು ದೊಡ್ಡ ರನ್‌ಗಳಿಸುವ ಮೈದಾನ. ಇಲ್ಲಿ ತಪ್ಪುಗಳನ್ನು ಮಾಡಲು ಬಹಳ ಕಡಿಮೆ ಅವಕಾಶವಿದೆ. ಹಾಗಿದ್ದರೂ ಕೊನೆಯ ಹಂತದಲ್ಲಿ ಪಂದ್ಯದಲ್ಲಿ ಅದ್ಭುತವಾಗಿ ಕಮ್‌ಬ್ಯಾಕ್ ಮಾಡಲು ಕಾರಣವಾದ ವೇಗುಗಳಿಗೆ ಹಾಗೂ ಸ್ಪಿನ್ನರ್‌ಗಳಿಗೆ ಅದರ ಶ್ರೇಯಸ್ಸು ದೊರೆಯಬೇಕು"
"ಸತತವಾಗಿ ವಿಕೆಟ್‌ಗೆ ಬಡಿಯುವಂತೆ ಬೌಲಿಂಗ್ ನಡೆಸಬೇಕು ಎನ್ನುವ ಸಂದೇಶ ಸ್ಪಷ್ಟವಾಗಿತ್ತು. ನಾವು ಅದನ್ನು ಈ ಹಿಂದೆ ಮಾಡಿದ್ದೆವು. ಇನ್ನು ಬ್ಯಾಟಿಂಗ್‌ನಲ್ಲಿ ಚೆನ್ನಾಗಿ ಬ್ಯಾಟ್‌ಗೆ ಬರುತ್ತಿದ್ದರೂ ಮಧ್ಯಮ ಓವರ್‌ಗಳಲ್ಲಿ ದೊಡ್ಡ ಜೊತೆಯಾಟ ಬಾರಲಿಲ್ಲ. ಬೌಲಿಂಗ್‌ನಲ್ಲಿ ಮೊದಲ ಹತ್ತು ಓವರ್‌ಗಳಲ್ಲಿ ಉತ್ತಮವಾಗಿ ಪ್ರದರ್ಶನ ನೀಡಬಹುದಾಗಿತ್ತು. ಬ್ಯಾಟಿಂಗ್‌ನಲ್ಲಿ ಮಧ್ಯಮ ಓವರ್‌ಗಳಲ್ಲಿ ಉತ್ತಮವಾಗಿ ಆಟಬೇಕಾಗಿತ್ತು" ಎಂದಿದ್ದಾರೆ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ.
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಶೇನ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯ್ನಿಸ್, ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್
ಬೆಂಚ್: ಶಾನ್ ಅಬಾಟ್, ಟ್ರಾವಿಸ್ ಹೆಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್
ಪಾಕಿಸ್ತಾನ: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಹಾರಿಸ್ ರೌಫ್
ಬೆಂಚ್: ಅಘಾ ಸಲ್ಮಾನ್, ಫಖರ್ ಜಮಾನ್, ಮೊಹಮ್ಮದ್ ವಾಸಿಂ ಜೂನಿಯರ್, ಶಾದಾಬ್ ಖಾನ್