ವಿಶ್ವಕಪ್‌ನಲ್ಲಿ ಪಾಕಿಸ್ತಾನದ ಕಳಪೆ ಪ್ರದರ್ಶನಕ್ಕೆ ಬಿತ್ತು ಭಾರೀ ದೊಡ್ಡ ವಿಕೆಟ್!!
ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡ ಭಾರೀ ಅತ್ಯಂತ ಕಳಪೆ ಪ್ರದರ್ಶನ ನೀಡುವ ಮೂಲಕ ತೀವ್ರ ಮುಖಭಂಗಕ್ಕೆ ಒಳಗಾಗಿದೆ. ಬಾಬರ್ ಅಜಂ ನೇತೃತ್ವದ ಪಾಕಿಸ್ತಾನ ತಂಡ ಟೂರ್ನಿಯಲ್ಲಿ ಪೈಪೋಟಿ ನೀಡುವ ತಂಡಗಳ ಪೈಕಿ ಒಂದು ಎಂದು ಪರಿಗಣಿಸಲಾಗಿತ್ತು. ಆದರೆ ಆಡಿರುವ ಮೊದಲ ಆರು ಪಂದ್ಯಗಳಲ್ಲಿ ಪಾಕಿಸ್ತಾನ ತಂಡ ನಾಲ್ಕು ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಹೀಗಾಗಿ ಸೆಮಿಫೈನಲ್ ಸ್ಪರ್ಧೆಯಿಂದ ಪಾಕಿಸ್ತಾನ ತಂಡ ಬಹುತೇಕ ಹೊರಬಿದ್ದಿದೆ.
ಪಾಕಿಸ್ತಾನ ತಂಡದ ಈ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ ಅವರನ್ನು ನಾಯಕತ್ವದಿಂದ ಕೆಳಕ್ಕಿಳಿಸಬೇಕು ಎನ್ನುವ ಕೂಗು ಜೋರಾಗಿದೆ. ಇದರ ಬೆನ್ನಲ್ಲೇ ಪಾಕಿಸ್ತಾನ ಕ್ರಿಕೆಟ್‌ನ ತಂಡದ ಆಯ್ಕೆ ಮಂಡಳಿಯ ಮುಖ್ಯಸ್ಥ ಇನ್‌ಜಮಾಮ್ ಉಲ್ ಹಕ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ವಿಶ್ವಕಪ್‌ನಲ್ಲಿನ ಪಾಕಿಸ್ತಾನದ ಕಳಪೆ ಪ್ರದರ್ಶನಕ್ಕೆ ಮೊದಲ ವಿಕೆಟ್ ಪತನವಾಗಿದೆ.

ಐಸಿಸಿ ಪುರುಷರ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನ ಸತತ ನಾಲ್ಕು ಪಂದ್ಯಗಳಲ್ಲಿ ಸೋಲು ಅನುಭವಿಸಿದ ಬಳಿಕ ಇಂಜಮಾಮ್ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮುಖ್ಯಸ್ಥ ಝಕಾ ಅಶ್ರಫ್ ಅವರಿಗೆ ರಾಜೀನಾಮೆ ಪತ್ರವನ್ನು ಕಳುಹಿಸಿದ್ದಾರೆ.
ಇನ್ನು ಇದರ ಬೆನ್ನಲ್ಲೇ ಪಾಕಿಸ್ತಾನ ಕ್ರಿಕೆಟ್ ತಂಡದ ಆಯ್ಕೆ ವಿಚಾರವಾಗಿ ಕೇಲಿಬಂದಿರುವ ಆರೋಪಗಳ ತನಿಖೆಗೆ ಐವರು ಸದಸ್ಯರ ಸತ್ಯಶೋಧನಾ ಸಮಿತಿಯನ್ನು ರಚಿಸಲಾಗಿದೆ ಎಂದು ಪಿಸಿಬಿ ತಿಳಿಸಿದೆ. ಪಾಕಿಸ್ತಾನ ತಂಡದಲ್ಲಿ ಕೆಲ ಆಟಗಾರರನ್ನು ಸ್ವಹಿತಾಸಕ್ತಿಯ ಕಾರಣಕ್ಕಾಗಿ ಆಯ್ಕೆ ಮಾಡಲಾಗಿದೆ ಎನ್ನುವ ಆರೋಪಗಳು ಕೇಳಿ ಬಂದಿದ್ದವು. ಕೆಲ ಮಾಜಿ ಕ್ರಿಕೆಟಿಗರು ಕೂಡ ಇದನ್ನೇ ಉಲ್ಲೇಖಿಸಿದ್ದರು.
ಮತ್ತೊಂದೆಡೆ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ ಕೂಡ ಈ ವಿಶ್ವಕಪ್‌ನ ಬೆನ್ನಲ್ಲೇ ನಾಯಕತ್ವದಿಂದ ಕೆಳಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಬಾಬರ್ ಅಜಂ ಅವರ ನಾಯಕತ್ವದ ಬಗ್ಗೆಯೂ ಸಾಕಷ್ಟು ಟೀಕೆಗಳು ಕೇಳಿಬರುತ್ತಿವೆ. ವಿಶ್ವಕಪ್‌ನಂಥಾ ಟೂರ್ನಿಯಲ್ಲಿ ಬಾಬರ್ ಅಜಂ ಸಮರ್ಥವಾಗಿ ಮುನ್ನಡೆಸಲು ವಿಫಲವಾಗಿದ್ದು ಇದು ಕೂಡ ಹೀಗಾಗಿ ವೈಟ್‌ಬಾಲ್ ಮಾದರಿಯಿಂದ ಬಾಬರ್ ನಾಯಕತ್ವ ಕಳೆದುಕೊಳ್ಳಲಿದ್ದಾರೆ ಎನ್ನಲಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications