Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

End Vs Pak: 3 ರನ್‌ಗಳ ಅಂತರದಲ್ಲಿ ಇಂಗ್ಲೆಂಡ್‌ ವಿರುದ್ಧ ರೋಚಕ ಗೆಲುವು ಸಾಧಿಸಿದ ಪಾಕಿಸ್ತಾನ

ಇಂಗ್ಲೆಂಡ್ ವಿರುದ್ಧದ ಸರಣಿಯ 4ನೇ ಪಂದ್ಯದಲ್ಲಿ ಪಾಕಿಸ್ತಾನ ಇಂಗ್ಲೆಂಡ್ ವಿರುದ್ಧ ರೋಚಕ 3 ರನ್‌ಗಳ ಜಯ ಸಾಧಿಸಿದೆ. ಗೆಲುವಿಗಾಗಿ 10 ಎಸೆತಗಳಲ್ಲಿ 5 ರನ್ ಬೇಕಿದ್ದ ಇಂಗ್ಲೆಂಡ್ ಇನ್ನೊಂದು ರನ್ ಗಳಿಸುವಷ್ಟರಲ್ಲಿ ಉಳಿದ ಮೂರು ವಿಕೆಟ್ ಕಳೆದುಕೊಂಡು 3 ರನ್‌ಗಳ ಸೋಲನುಭವಿಸಿತು.

ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನವನ್ನು 4 ವಿಕೆಟ್ ಕಳೆದುಕೊಂಡು 166 ರನ್ ಗಳಿಸಿತು. ಮೊಹಮ್ಮದ್ ರಿಜ್ವಾನ್ 67 ಎಸೆತಗಳಲ್ಲಿ 88 ರನ್ ಗಳಿಸಿದರು. ಬಾಬರ್ ಅಜಮ್ 27 ಎಸೆತಗಳಲ್ಲಿ 36 ರನ್ ಗಳಿಸಿ ಲಿಯಾಮ್ ಡಾಸನ್ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್‌ಗೆ ಕ್ಯಾಚ್ ನೀಡಿದರು.

19ನೇ ಓವರ್ ಬೌಲಿಂಗ್ ಮಾಡಿದ ಹ್ಯಾರಿಸ್‌ ರೌಫ್ ಎರಡು ಬಾಲ್‌ಗಳಲ್ಲಿ ಎರಡು ವಿಕೆಟ್ ಪಡೆಯುವ ಮೂಲಕ ಇಂಗ್ಲೆಂಡ್ ತಂಡಕ್ಕೆ ಆಘಾತ ನೀಡಿದರು. ಅಂತಿಮವಾಗಿ ಟೋಪ್ಲೆ ರನೌಟ್‌ ಆಗುವ ಮೂಲಕ ರೋಚಕ ಪಂದ್ಯದಲ್ಲಿ ಪಾಕಿಸ್ತಾನ ಜಯ ಗಳಿಸಿತು. ಈ ಮೂಲಕ 7 ಪಂದ್ಯಗಳ ಟಿ20 ಸರಣಿಯನ್ನು 2-2ರಲ್ಲಿ ಸಮವಾಗಿಸಿದೆ.

Pakistan defeated England By 3 Runs in a thrilling fourth T20I in Karachi

ಎರಡು ತಂಡಗಳ ಪ್ಲೇಯಿಂಗ್ ಇಲೆವೆನ್

ಪಾಕಿಸ್ತಾನ (ಪ್ಲೇಯಿಂಗ್ XI): ಮೊಹಮ್ಮದ್ ರಿಜ್ವಾನ್ , ಬಾಬರ್ ಆಜಮ್ (ನಾಯಕ), ಶಾನ್ ಮಸೂದ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಆಸಿಫ್ ಅಲಿ, ಉಸ್ಮಾನ್ ಖಾದಿರ್, ಹ್ಯಾರಿಸ್ ರೌಫ್, ಮೊಹಮ್ಮದ್ ಹಸ್ನೇನ್, ಮೊಹಮ್ಮದ್ ವಾಸಿಂ ಜೂನಿಯರ್

ಇಂಗ್ಲೆಂಡ್ (ಪ್ಲೇಯಿಂಗ್ XI): ಅಲೆಕ್ಸ್ ಹೇಲ್ಸ್, ಫಿಲಿಪ್ ಸಾಲ್ಟ್ , ವಿಲ್ ಜ್ಯಾಕ್ಸ್, ಬೆನ್ ಡಕೆಟ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ (ನಾಯಕ), ಡೇವಿಡ್ ವಿಲ್ಲಿ, ಲಿಯಾಮ್ ಡಾಸನ್, ಆದಿಲ್ ರಶೀದ್, ಓಲಿ ಸ್ಟೋನ್, ರೀಸ್ ಟೋಪ್ಲಿ

Story first published: Sunday, September 25, 2022, 23:50 [IST]
Other articles published on Sep 25, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+