Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WTC: ಡಬ್ಲ್ಯೂಟಿಸಿ ಅಂಕಪಟ್ಟಿಯಲ್ಲಿ ಪಾತಾಳ ಸೇರಿದ ಪಾಕಿಸ್ತಾನ; ಫೈನಲ್ ತಲುಪಲು ಭಾರತದ ಲೆಕ್ಕಚಾರವೇನು?

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಸೋಲಿನ ನಂತರ ಪಾಕಿಸ್ತಾನ ಕ್ರಿಕೆಟ್ ತಂಡವು ಭಾರೀ ಟೀಕೆಗೆ ಗುರಿಯಾಗುತ್ತಿದೆ. ಇತ್ತೀಚೆಗೆ ತವರಿನಲ್ಲಿ ಪಾಕಿಸ್ತಾನ ತಂಡ ಬಾಂಗ್ಲಾದೇಶ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಸೋತಿತ್ತು. ಇದೀಗ ಪಾಕಿಸ್ತಾನ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯೂಟಿಸಿ) ಅಂಕಪಟ್ಟಿಯಲ್ಲಿ ಪಾಕಿಸ್ತಾನ ತಂಡ ಭಾರೀ ಹಿನ್ನಡೆ ಅನುಭವಿಸಿದೆ. ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಸೋಲಿನ ಬಳಿಕ ಪಾಕಿಸ್ತಾನ ತಂಡ ಡಬ್ಲ್ಯೂಟಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ತಲುಪಿದೆ. ಭರ್ಜರಿ ಜಯ ದಾಖಲಿಸಿರುವ ಇಂಗ್ಲೆಂಡ್ ತಂಡ ಅಂಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಜಿಗಿದಿದೆ. ಪಾಕಿಸ್ತಾನ ಸೋಲು, ಇಂಗ್ಲೆಂಡ್ ಗೆಲುವಿನಿಂದ ಡಬ್ಲ್ಯೂಟಿಸಿ ಅಂಕಪಟ್ಟಿಯಲ್ಲಿ ಭಾರತ ತಂಡದ ಸ್ಥಿತಿಗತಿಯಲ್ಲಿ ಬದಲಾವಣೆಯಾಗಿದೆಯೇ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

Pakistan dropped in WTC rankings after losing against England

ಕಮರಿದ ಕನಸು

ಇಂಗ್ಲೆಂಡ್ ವಿರುದ್ಧದ ಸೋಲು ಡಬ್ಲ್ಯೂಟಿಸಿ ಫೈನಲ್ ತಲುಪುವ ಪಾಕಿಸ್ತಾನದ ಆಸೆಯನ್ನು ಬಹುತೇಕ ಅಂತ್ಯಗೊಳಿಸಿದೆ. ಪಾಕಿಸ್ತಾನಕ್ಕೆ ಡಬ್ಲ್ಯೂಟಿಸಿ ಫೈನಲ್‌ಗೆ ಅರ್ಹತೆ ಪಡೆಯಲು ಉತ್ತಮ ಅವಕಾಶವಿತ್ತು. ತವರಿನಲ್ಲಿ ಪಾಕಿಸ್ತಾನ ಕೊನೆಯ 7 ಟೆಸ್ಟ್‌ ಪಂದ್ಯಗಳಲ್ಲಿ 5ರಲ್ಲಿ ಗೆಲುವು ಸಾಧಿಸಬೇಕಿತ್ತು. ಆದರೆ ಪಾಕಿಸ್ತಾನ ಸತತ ಸೋಲಿನಿಂದ ಈ ಅವಕಾಶವನ್ನು ಕಳೆದುಕೊಂಡಿದೆ. ಪ್ರಸ್ತುತ ಪಾಕಿಸ್ತಾನ ಡಬ್ಲ್ಯೂಟಿಸಿ ಅಂಕಪಟ್ಟಿಯಲ್ಲಿ 9ನೇ (ಕೊನೆಯ) ಸ್ಥಾನಕ್ಕೆ ತಲುಪಿದೆ. ಹೀಗಾಗಿ ಪಾಕಿಸ್ತಾನಕ್ಕೆ ಡಬ್ಲ್ಯೂಟಿಸಿ ಫೈನಲ್ ತಲುಪುವುದು ಅಸಾಧ್ಯವಾಗಿದೆ.

ಮತ್ತೊಂದೆಡೆ ಪಾಕಿಸ್ತಾನ ವಿರುದ್ಧದ ಗೆಲುವಿನ ಬಳಿಕ ಇಂಗ್ಲೆಂಡ್ ಅಂಕಪಟ್ಟಿಯಲ್ಲಿ ಮುನ್ನಡೆ ಸಾಧಿಸಿದ್ದು, ನಾಲ್ಕನೇ ಸ್ಥಾನಕ್ಕೆ ತಲುಪಿದೆ. ಇದಾದ ನಂತರವೂ ಇಂಗ್ಲೆಂಡ್‌ ಡಬ್ಲ್ಯೂಟಿಸಿ ಫೈನಲ್‌ಗೆ ತಲುಪುವ ಸಾಧ್ಯತೆಗಳು ಬಹುತೇಕ ಮುಗಿದಂತೆ ಕಂಡುಬರುತ್ತಿದೆ. ಇನ್ನುಳಿದ ಎಲ್ಲ ಪಂದ್ಯಗಳನ್ನು ಗೆದ್ದರೂ ಇಂಗ್ಲೆಂಡ್ ಅಗ್ರ-2 ಸ್ಥಾನಕ್ಕೇರುವುದು ಕಷ್ಟ.

ಭಾರತಕ್ಕೆ ನಷ್ಟವಾಗಿದೆಯೇ?

ಪಾಕಿಸ್ತಾನ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಫಲಿತಾಂಶದಿಂದ
ಭಾರತಕ್ಕೆ ಡಬ್ಲ್ಯೂಟಿಸಿ ಅಂಕಪಟ್ಟಿಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಟೀಮ್ ಇಂಡಿಯಾ ಡಬ್ಲ್ಯೂಟಿಸಿ ಅಂಕಪಟ್ಟಿಯಲ್ಲಿ 8 ಗೆಲುವು ಮತ್ತು 2 ಸೋಲುಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಅಕ್ಟೋಬರ್ 16 ರಿಂದ ಶುರುವಾಗಲಿರುವ ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಗೆಲ್ಲುವ ಮೂಲಕ ಭಾರತ ಡಬ್ಲ್ಯೂಟಿಸಿ ಫೈನಲ್‌ಗೆ ಲಗ್ಗೆ ಇಡುವುದು ಬಹುತೇಕ ಖಚಿತ.

ಸದ್ಯ ಡಬ್ಲ್ಯೂಟಿಸಿ ಅಂಕಪಟ್ಟಿಯಲ್ಲಿ ಭಾರತದ ನಂತರ ಆಸ್ಟ್ರೇಲಿಯಾ ಎರಡನೇ ಸ್ಥಾನದಲ್ಲಿದೆ. ಶ್ರೀಲಂಕಾ ತಂಡ ಮೂರನೇ ಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇಂಗ್ಲೆಂಡ್ ನಾಲ್ಕನೇ ಸ್ಥಾನದಲ್ಲಿದ್ದು, ದಕ್ಷಿಣ ಆಫ್ರಿಕಾ 5ನೇ ಸ್ಥಾನವನ್ನು ಆಕ್ರಮಿಸಿಕೊಂಡಿದೆ. ನ್ಯೂಜಿಲೆಂಡ್ ಆರನೇ ಮತ್ತು ಬಾಂಗ್ಲಾದೇಶ ಏಳನೇ ಸ್ಥಾನದಲ್ಲಿದೆ. ವೆಸ್ಟ್ ಇಂಡೀಸ್ ತಂಡ ಎಂಟನೇ ಸ್ಥಾನಕ್ಕೆ ಸೀಮಿತವಾಗಿದೆ.

Story first published: Friday, October 11, 2024, 20:35 [IST]
Other articles published on Oct 11, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+