ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ತವರಿನಲ್ಲಿ ಆಡಿದ ಅನುಭವ ನೀಡಿತು ಸಿಡ್ನಿ: ಗೆಲುವಿನ ಬಳಿಕ ಬಾಬರ್ ಅಜಂ ಪ್ರತಿಕ್ರಿಯೆ

Pakistan enter Final: Babar Azam thanks Sydney crowd after win against New Zealand in semi Final match

ನ್ಯೂಜಿಲೆಂಡ್ ವಿರುದ್ಧ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡ ಭರ್ಜರಿ ಗೆಲುವು ಸಾಧಿಸುವಲ್ಲಿ ಯಶಸ್ವುಯಾಗಿದೆ. ಈ ಗೆಲುವಿನಿಂದಿಗೆ ನ್ಯೂಜಿಲೆಂಡ್ ಸೆಮಿಫೈನಲ್‌ಗೆ ಹೋರಾಟವನ್ನು ಅಂತ್ಯಗೊಳಿಸಿದರೆ ಪಾಕಿಸ್ತಾನ ಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ. ಈ ಮೂಲಕ ಸುದೀರ್ಘ 13 ವರ್ಷಗಳ ಬಳಿಕ ಪಾಕಿಸ್ತಾನ ಟಿ20 ವಿಶ್ವಕಪ್‌ನಲ್ಲಿ ಫೈನಲ್ ಹಂತಕ್ಕೆ ಪ್ರವೇಶ ಪಡೆದುಕೊಂಡಂತಾಗಿದೆ.

ನ್ಯೂಜಿಲೆಂಡ್ ವಿರುದ್ಧದ ಈ ಗೆಲುವಿನಿಂದಾಗಿ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ ಸಹಜವಾಗಿಯೇ ಹರ್ಷಗೊಂಡಿದ್ದಾರೆ. ಈ ಗೆಲುವಿನ ಬಳಿಕ ಮಾತನಾಡಿದ ಬಾಬರ್ ಅಜಂ ಸಿಡ್ನಿ ಸ್ಟೇಡಿಯಂನಲ್ಲಿ ನೆರೆದಿದ್ದ ಕ್ರಿಕೆಟ್ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದರು. ಸಿಡ್ನಿಯಲ್ಲಿ ನೆರೆದಿದ್ದ ಅಪಾರ ಪ್ರಮಾಣದ ಅಭಿಮಾನಿಗಳು ತಮಗೆ ತವರಿನಲ್ಲಿ ಆಡಿದ ಅನುಭವ ನೀಡಿದ್ದಾರೆ ಎಂದಿದ್ದಾರೆ ಬಾಬರ್ ಅಜಂ.

FIFA World Cup 2022: ನೇಮರ್ ನಾಯಕತ್ವದ 5 ಬಾರಿಯ ಚಾಂಪಿಯನ್ ಬ್ರೆಜಿಲ್ ತಂಡ ಪ್ರಕಟFIFA World Cup 2022: ನೇಮರ್ ನಾಯಕತ್ವದ 5 ಬಾರಿಯ ಚಾಂಪಿಯನ್ ಬ್ರೆಜಿಲ್ ತಂಡ ಪ್ರಕಟ

"ಇಲ್ಲಿ ನೆರೆದ ಅಭಿಮಾನಿಗಳಿಗೆ ನಾನು ಧನ್ಯವಾದ ಸಲ್ಲಿಸುತ್ತೇನೆ. ಇಲ್ಲಿ ಆಡಿದಾಗ ನಮಗೆ ತವರಿನಲ್ಲಿ ಆಡಿದ ಅನುಭವ ದೊರೆತಿದೆ. ಬೌಲಿಂಗ್‌ನಲ್ಲಿ ಮೊದಲ 6 ಓವರ್‌ನಲ್ಲಿ ನಮಗೆ ಉತ್ತಮ ಆರಂಭ ದೊರೆಯಿತು. ಬಳಿಕ ಬೆಂಡು ಉತ್ತವಾಗು ಬರುತ್ತಿರಲಿಲ್ಲ. ಹಾಗಿದ್ದರೂ ನಮ್ಮ ತಂಡದ ವೇಗಿಗಳು ಉತ್ತಮ ಪ್ರದರ್ಶನ ನೀಡಿದ್ದಾರೆ. ನಂತರ ಪವರ್‌ಪ್ಲೇನಲ್ಲಿ ಉತ್ತಮ ಪ್ರದರ್ಶನ ನಿಡುವುದು ನಮ್ಮ ಯೋಜನೆಯಾಗಿತ್ತು" ಎಂದಿದ್ದಾರೆ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ.

ಯುವ ಆಟಗಾರನನ್ನು ಹೊಗಳಿದ ಬಾಬರ್: ಇನ್ನು ಇದೇ ಸಂದರ್ಭದಲ್ಲಿ ಪಾಕಿಸ್ತಾನದ ಪರವಾಗಿ ಮತ್ತೊಮ್ಮೆ ಅದ್ಭುತ ಪ್ರದರ್ಶನ ನೀಡಿದ ಮೊಹಮ್ಮದ್ ಹ್ಯಾರಿಸ್ ಬಗ್ಗೆ ಬಾಬರ್ ಅಜಂ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. "ಆತ ನಮ್ಮ ಯುವ ಆಟಗಾರ, ಅದ್ಭುತವಾದ ಆಕ್ರಮಣಕಾರಿತನವನ್ನು ತೋರಿಸಿದ್ದಾರೆ. ಅವರು ಅದ್ಭುತವಾಗಿ ಪ್ರದರ್ಶನ ನೀಡುತ್ತಿದ್ದಾರೆ. ಈ ಹಂತವನ್ನು ನಾವು ಬಹಳ ಆನಂದಿಸುತ್ತಿದ್ದೇವೆ. ಆದರೆ ಫೈನಲ್ ಪಂದ್ಯದ ಮೇಲೆ ನಾವು ಚಿತ್ತ ಹರಿಸಬೇಕಿದೆ" ಎಂದಿದ್ದಾರೆ ಬಾಬರ್ ಅಜಂ.

ನ್ಯೂಜಿಲೆಂಡ್ ವಿರುದ್ದದ ಪಂದ್ಯದಲ್ಲಿ ಪಾಕಿಸ್ತಾನ ಬ್ಯಾಟಿಂಗ್ ಬೌಲಿಂಗ್ ಹಾಗೂ ಫಿಲ್ಡಿಂಗ್ ಮೂರು ವಿಭಾಗದಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಯಿತು. ಮೊದಲಿಗೆ ಸಾಧಾರಣ ಮೊತ್ತಕ್ಕೆ ನ್ಯೂಜಿಲೆಂಡ್ ತಂಡವನ್ನು ಕಟ್ಟಿ ಹಾಕಿದ ಪಾಕಿಸ್ತಾನ ತಂಡ ಬಳಿಕ ರನ್ ಬೆನ್ನಟ್ಟುವಾದ ಆರಂಭಿಕರಾದ ಬಾಬರ್ ಅಜಂ ಹಾಗೂ ಮೊಹಮ್ಮದ್ ರಿಜ್ವಾನ್ ಅವರ ಭರ್ಜರಿ ಬ್ಯಾಟಿಂಗ್‌ನಿಂದಾಗಿ ಪಾಕ್ ಪಡೆ ಭರ್ಜರಿಯಾಗಿ ರನ್ ಬೆನ್ನಟ್ಟುವಲ್ಲಿ ಯಶಸ್ವಿಯಾಯಿತು.

ನ್ಯೂಜಿಲೆಂಡ್ ಆಡುವ ಬಳಗ : ಫಿನ್ ಅಲೆನ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಇಶ್ ಸೋಧಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್
ಬೆಂಚ್: ಮಾರ್ಟಿನ್ ಗಪ್ಟಿಲ್, ಆಡಮ್ ಮಿಲ್ನೆ, ಮೈಕೆಲ್ ಬ್ರೇಸ್ವೆಲ್, ಮಾರ್ಕ್ ಚಾಪ್ಮನ್

ಪಾಕಿಸ್ತಾನ ಆಡುವ ಬಳಗ: ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಬಾಬರ್ ಅಜಮ್ (ನಾಯಕ), ಮೊಹಮ್ಮದ್ ಹ್ಯಾರಿಸ್, ಶಾನ್ ಮಸೂದ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ನಸೀಮ್ ಶಾ, ಹ್ಯಾರಿಸ್ ರೌಫ್, ಶಾಹೀನ್ ಅಫ್ರಿದಿ
ಬೆಂಚ್: ಖುಷ್ದಿಲ್ ಶಾ, ಮೊಹಮ್ಮದ್ ಹಸ್ನೈನ್, ಹೈದರ್ ಅಲಿ, ಆಸಿಫ್ ಅಲಿ

Story first published: Wednesday, November 9, 2022, 18:31 [IST]
Other articles published on Nov 9, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X