ICCಯ ನೂತನ ಜನರಲ್ ಮ್ಯಾನೇಜರ್ ಆಗಿ ಪಾಕ್‌ನ ಮಾಜಿ ಕ್ರಿಕೆಟಿಗ ವಾಸಿಂ ಖಾನ್ ಆಯ್ಕೆ

ಪಾಕಿಸ್ತಾನದ ಮಾಜಿ ಕ್ರಿಕೆಟಿಗ ವಾಸಿಂ ಖಾನ್ ಐಸಿಸಿಯ ಪ್ರಧಾನ ವ್ಯವಸ್ಥಾಪಕರಾಗಿ ಆಯ್ಕೆಯಾಗಿದ್ದಾರೆ. ಎಂಟು ವರ್ಷಗಳ ಕಾಲ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಜಿಯೋಫ್ ಅಲ್ಲಾರ್ಡಿಸ್ ಅವರಿಂದ ಅಧಿಕಾರವನ್ನು ಪಡೆದುಕೊಂಡಿದ್ದಾರೆ ಎಂದು ಶುಕ್ರವಾರ ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ ತಿಳಿಸಿದೆ.
ಖಾನ್ ಅವರು ಈ ಹಿಂದೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮತ್ತು ಲೀಸೆಸ್ಟರ್‌ಶೈರ್ ಕೌಂಟಿ ಕ್ರಿಕೆಟ್ ಕ್ಲಬ್್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಮುಂದಿನ ತಿಂಗಳಿನಿಂದ ಜನರಲ್ ಮ್ಯಾನೇಜರ್ ಹುದ್ದೆಯನ್ನು ವಹಿಸಿಕೊಳ್ಳಲಿದ್ದಾರೆ.
ಅಧಿಕಾರ ವಹಿಸಿಕೊಂಡ ನಂತರ ಮಾತನಾಡಿದ ಖಾನ್, ಮಹಿಳಾ ಕ್ರಿಕೆಟ್ ಅನ್ನು ಬೆಳೆಸಲು ಆಡಳಿತ ಮಂಡಳಿಯು ಬದ್ಧವಾಗಿರುವುದಾಗಿ ತಿಳಿಸಿದ್ದಾರೆ. ಈ ಅವಧಿಯಲ್ಲಿ ಮಹಿಳಾ ಕ್ರಿಕೆಟ್ ಆಟದ ಬೆಳವಣಿಗೆಗೆ ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಿದ ಖಾನ್ ಐಸಿಸಿಗೆ ಸೇರಿಕೊಂಡಿರುವುದಕ್ಕೆ ಹೆಮ್ಮೆಯಾಗಿದೆ. ಕ್ರೀಡೆಯನ್ನು ಬಲಪಡಿಸಲು ಮತ್ತು ಬೆಳೆಸಲು ಐಸಿಸಿ ಸದಸ್ಯರೊಂದಿಗೆ ಕೆಲಸ ಮಾಡಲು ನಾನು ಉತ್ಸುಕನಾಗಿದ್ದೇನೆ ಎಂದು ಹೇಳಿದರು.
2017 ರಲ್ಲಿ ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ ಪಂದ್ಯಗಳನ್ನು ಆಯೋಜಿಸಲು ಅದೃಷ್ಟಶಾಲಿಗಳಾಗಿದ್ದೆವು, ಇದು ಆಟದ ಇತಿಹಾಸದ ಪುಟದಲ್ಲಿ ಮಹತ್ವದ ಕ್ಷಣವಾಗಿದೆ. ಮುಂದಿನ ದಿನಗಳಲ್ಲಿ ಕಾರ್ಯದ ವೇಗವನ್ನು ಇಮ್ಮಡಿಗೊಳಿಸಿ ನಮ್ಮ ಪಾತ್ರವನ್ನು ಉತ್ತಮವಾಗಿ ನಿರ್ವಹಿಸಲು ಸಿದ್ಧವಾಗಿರುವೆ ಎಂದು ಹೇಳಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications