For Quick Alerts
ALLOW NOTIFICATIONS  
For Daily Alerts
 

ಪಾಕ್ vs ಆಸ್ಟ್ರೇಲಿಯಾ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹವಾ; ವಿಭಿನ್ನ ಬೇಡಿಕೆ ಇಟ್ಟ ಪಾಕ್ ಪ್ರೇಕ್ಷಕ

Pakistan fan makes special request to Virat Kohli during AUS vs PAK first test and pic goes viral

ಸದ್ಯ ಟೀಮ್ ಇಂಡಿಯಾ ಭಾರತ ಪ್ರವಾಸವನ್ನು ಕೈಗೊಂಡಿರುವ ಶ್ರೀಲಂಕಾ ವಿರುದ್ಧ ಟಿ ಟ್ವೆಂಟಿ ಹಾಗೂ ಟೆಸ್ಟ್ ಸರಣಿಗಳಲ್ಲಿ ಭಾಗವಹಿಸುತ್ತಿದೆ. ಇತ್ತಂಡಗಳ ನಡುವೆ ಈಗಾಗಲೇ ಟಿ ಟ್ವೆಂಟಿ ಸರಣಿ ಮುಕ್ತಾಯಗೊಂಡಿದ್ದು ಈ ಸರಣಿಯ ಎಲ್ಲಾ 3 ಪಂದ್ಯಗಳಲ್ಲಿಯೂ ಜಯ ಗಳಿಸಿರುವ ಟೀಮ್ ಇಂಡಿಯಾ ಪ್ರವಾಸಿ ಶ್ರೀಲಂಕಾಗೆ ವೈಟ್ ವಾಶ್ ಬಳಿದಿದೆ. ಹಾಗೂ ನಂತರ ಆರಂಭವಾದ ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಯ ಪ್ರಥಮ ಪಂದ್ಯದ ಈಗಾಗಲೇ ಮುಕ್ತಾಯಗೊಂಡಿದ್ದು, ಈ ಪಂದ್ಯದಲ್ಲಿ 222 ರನ್‌ಗಳ ಇನ್ನಿಂಗ್ಸ್ ಜಯ ಸಾಧಿಸಿರುವ ಟೀಮ್ ಇಂಡಿಯಾ ಸರಣಿಯಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವಿನ ಟಿ ಟ್ವೆಂಟಿ ಸರಣಿಯಿಂದ ವಿಶ್ರಾಂತಿಗೆಂದು ಹೊರಗುಳಿದಿದ್ದ ವಿರಾಟ್ ಕೊಹ್ಲಿ ಸದ್ಯ ಶ್ರೀಲಂಕಾ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದ ಮೂಲಕ ಮರಳಿ ಟೀಮ್ ಇಂಡಿಯಾ ಸೇರಿದ್ದು, ಈ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‍ನಲ್ಲಿ 100 ಪಂದ್ಯಗಳ ಗಡಿಯನ್ನು ದಾಟಿದ್ದಾರೆ.

ಹೌದು, ಶ್ರೀಲಂಕಾ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯ ವಿರಾಟ್ ಕೊಹ್ಲಿ ಆಡಿದ ನೂರನೇ ಟೆಸ್ಟ್ ಪಂದ್ಯವಾಗಿದ್ದು, ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 45 ರನ್ ಬಾರಿಸುವುದರ ಮೂಲಕ ಈ ಬಾರಿಯೂ ಕೂಡ ಶತಕ ಬಾರಿಸುವ ಯತ್ನದಲ್ಲಿ ವಿಫಲರಾಗಿದ್ದಾರೆ. ಕೊನೆಯದಾಗಿ 2019ರಲ್ಲಿ ಶತಕ ಬಾರಿಸಿದ್ದ ವಿರಾಟ್ ಕೊಹ್ಲಿ ಇಲ್ಲಿಯವರೆಗೂ ಕೂಡ ಶತಕ ಬಾರಿಸಲಾಗದೇ ಪದೇ ಪದೇ ವಿಫಲರಾಗುತ್ತಿದ್ದಾರೆ. ಇನ್ನು ವಿರಾಟ್ ಕೊಹ್ಲಿ 70 ಶತಕಗಳನ್ನು ಪೂರೈಸಿದ್ದು, 71ನೇ ಶತಕವನ್ನು ಯಾವಾಗ ಬಾರಿಸಲಿದ್ದಾರೆ ಎಂಬ ಪ್ರಶ್ನೆ ಮೂಡಿದೆ. ಹಾಗೂ ವಿರಾಟ್ ಕೊಹ್ಲಿಯ ಈ ಶತಕಕ್ಕೆ ಕೇವಲ ಭಾರತದಲ್ಲಿ ಮಾತ್ರವಲ್ಲದೇ ವಿಶ್ವದಾದ್ಯಂತ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದು, ಇದಕ್ಕೆ ಸದ್ಯ ನಡೆಯುತ್ತಿರುವ ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಟೆಸ್ಟ್ ಸರಣಿಯಲ್ಲಿ ಅಭಿಮಾನಿಯೋರ್ವ ವಿರಾಟ್ ಕೊಹ್ಲಿ 71ನೇ ಶತಕದ ಕುರಿತಾಗಿ ಬರೆದುಕೊಂಡಿದ್ದ ಸಾಲುಗಳೇ ಸಾಕ್ಷಿ ಎನ್ನಬಹುದು.

ಹೌದು, ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಟೆಸ್ಟ್ ಸರಣಿ ಸದ್ಯ ಪಾಕಿಸ್ತಾನದಲ್ಲಿ ನಡೆಯುತ್ತಿದ್ದು, ಈ ಸರಣಿಯ ಪ್ರಥಮ ಪಂದ್ಯ ರಾವಲ್ಪಿಂಡಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದೆ. ಈ ಪಂದ್ಯದ ವೇಳೆ ಪಾಕಿಸ್ತಾನದ ಕ್ರಿಕೆಟ್ ಅಭಿಮಾನಿಗಳು ವಿರಾಟ್ ಕೊಹ್ಲಿ 71ನೇ ಶತಕವನ್ನು ಪಾಕಿಸ್ತಾನದ ನೆಲದಲ್ಲಿ ಬಾರಿಸಬೇಕು ಎಂದು ಬರೆದುಕೊಂಡಿರುವ ಬ್ಯಾನರ್ ಪ್ರದರ್ಶಿಸಿದ್ದಾರೆ. ಸದ್ಯ ಈ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಸಾಂಪ್ರದಾಯಿಕ ಎದುರಾಳಿಯ ನೆಲದಲ್ಲಿ ನಡೆಯುತ್ತಿರುವ ಬೇರೆ 2 ತಂಡಗಳ ನಡುವಿನ ಪಂದ್ಯದಲ್ಲಿ ಭಾರತೀಯ ಕ್ರಿಕೆಟಿಗನ ಶತಕ ಒಂದರ ಕುರಿತು ಈ ರೀತಿಯ ಕ್ರೇಜ್ ಇರುವುದು ಸಾಮಾನ್ಯವಲ್ಲ ಎಂದು ನೆಟ್ಟಿಗರು ಹೇಳುತ್ತಿದ್ದಾರೆ.

ಇನ್ನು ಇದೇ ವೇಳೆ ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಅಕ್ಟೋಬರ್ 23ರಂದು ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯ ಅತಿದೊಡ್ಡ ಪಂದ್ಯವಾಗಿರಲಿದ್ದು, ರೋಹಿತ್ ಶರ್ಮಾ ಮತ್ತು ಶಾಹಿನ್ ಅಫ್ರಿದಿ ನಡುವೆ ಹೋರಾಟ ನಡೆಯಲಿದೆ ಎಂದು ಮತ್ತೋರ್ವ ಪಾಕ್ ಅಭಿಮಾನಿ ಬರೆದುಕೊಂಡಿದ್ದಾನೆ.

ಸ್ಪಿನ್ ಮಾಂತ್ರಿಕನ ನಿಧನಕ್ಕೆ ಶೋಕ ಸಾಗರದಲ್ಲಿ ಕ್ರೀಡಾ ಜಗತ್ತು!! | Oneindia Kannada

Story first published: Tuesday, March 8, 2022, 9:54 [IST]
Other articles published on Mar 8, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+