ಕೊಹ್ಲಿಗಿಂತ ವಿಲಿಯಮ್ಸನ್ ಬೆಸ್ಟ್ ಎಂದ ವಾನ್‌ಗೆ ಪಾಕ್ ಮಾಜಿ ಕ್ರಿಕೆಟಿಗನಿಂದ ತರಾಟೆ

ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ನಾಯಕ ಮೈಕಲ್ ವಾನ್ ಇತ್ತೀಚೆಗೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗಿಂತ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಶ್ರೇಷ್ಠ ಎಂಬ ಅರ್ಥದ ಹೇಳಿಕೆಯನ್ನು ನೀಡಿದ್ದರು. ಅದಕ್ಕೆ ಅವರದ್ದೇ ರೀತಿಯ ಕಾರಣವನ್ನೂ ಮುಂದಿಟ್ಟಿದ್ದು ಮೈಕಲ್ ವಾನ್. ಈ ಹೋಲಿಕೆಗೆ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಸಲ್ಮಾನ್ ಬಟ್ ಪ್ರತಿಕ್ರಿಯಿಸಿದ್ದು ಮೈಕಲ್ ವಾನ್ ಹೇಳಿಕೆಗೆ ಅಸಮ್ಮತಿ ಸೂಚಿಸಿದ್ದಾರೆ.

ಸಲ್ಮಾನ್ ಬಟ್ ಈ ಹೋಲಿಕೆಯ ಬಗ್ಗೆ ಮಾತನಾಡಿತ್ತಾ ವಿರಾಟ್ ಕೊಹ್ಲಿ ಕ್ರಿಕೆಟ್‌ನಲ್ಲಿ ಮಾಡಿದ ಸಾಧನೆಯ ಅಂಕಿಅಂಶಗಳೇ ಆತನ ಶ್ರೇಷ್ಠತೆಯನ್ನು ತೋರಿಸುತ್ತದೆ. ಕೇನ್ ವಿಲಿಯಮ್ಸನ್ ಅವರೊಂದಿಗೆ ವಿರಾಟ್ ಕೊಹ್ಲಿಯನ್ನು ಹೋಲಿಸುವುದು ಸಮಯವನ್ನು ವ್ಯರ್ಥ ಮಾಡಿದಂತೆ ಎಂದು ಹೇಳಿದ್ದಾರೆ.

ಟೆಸ್ಟ್‌ ವೃತ್ತಿ ಬದುಕಿನ ಗಾಳಿಸುದ್ದಿಗೆ ಖಾರವಾಗಿ ಪ್ರತಿಕ್ರಿಯಿಸಿದ ಭುವನೇಶ್ವರ್

ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ದೇಶವನ್ನು ಪ್ರತಿನಿಧಿಸುತ್ತಿರುವ ಕಾರಣ ವಿರಾಟ್ ಕೊಹ್ಲಿ ಹೆಚ್ಚು ಅಭಿಮಾನಿಗಳನ್ನು ಹೊಂದಿದ್ದಾರೆ. ಹೀಗಾಗಿ ಅಭಿಮಾನಿಗಳಿಂದ ಅವರು ಶ್ರೇಷ್ಠ ಎಂದು ಕರೆಸಿಕೊಳ್ಳುತ್ತಾರೆ. ಕೇನ್ ವಿಲಿಯಮ್ಸನ್ ಭಾರತವನ್ನು ಪ್ರತಿನಿಧಿಸುತ್ತಿದ್ದರೆ ಕೊಹ್ಲಿಗಿಂತ ಶ್ರೇಷ್ಠ ಎನಿಸುತ್ತಿದ್ದರು ಎಂಬ ಮಾತುಗಳನ್ನು ಮೈಕಲ್ ವಾನ್ ಆಡಿದ್ದರು.

ಇದಕ್ಕೆ ಸಲ್ಮಾನ್ ಬಟ್ "ವಿರಾಟ್ ಕೊಹ್ಲಿ ದೊಡ್ಡ ಜನಸಂಖ್ಯೆಯನ್ನು ಪ್ರತಿನಿಧಿಸುವ ದೇಶದಿಂದ ಬಂದಿದ್ದಾರೆ. ಖಂಡಿತಾ ಅವರು ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಅದೆಲ್ದಕ್ಕಿಂತ ಹೆಚ್ಚಾಗಿ ಆತನ ಪ್ರದರ್ಶನ ಕೂಡ ಅತ್ಯುತ್ತಮವಾಗಿದೆ. ಈ ಸಂದರ್ಭದಲ್ಲಿ ವಿರಾಟ್ ಕೊಹ್ಲಿ 70 ಅಂತಾರಾಷ್ಟ್ರೀಯ ಶತಕಗಳನ್ನು ಹೊಂದಿದ್ದಾರೆ. ಈ ಕಾಲದ ಯಾವ ಬ್ಯಾಟ್ಸ್‌ಮನ್ ಕೂಡ ಈ ಸಾಧನೆ ಮಾಡಿಲ್ಲ" ಎಂದಿದ್ದಾರೆ.

ಇನ್ನು ಇದೇ ಸಂದರ್ಭದಲ್ಲಿ ವಿಲಿಯಮ್ಸನ್ ಬಗ್ಗೆಯೂ ಪ್ರಶಂಸೆಯ ಮಾತುಗಳನ್ನು ಆಡಿದ್ದಾರೆ ಸಲ್ಮಾನ್ ಬಟ್. "ವಿಲಿಯಮ್ಸನ್ ಕೂಡ ಶ್ರೇಷ್ಠ ಆಟಗಾರ. ಆತ ಉತ್ಕೃಷ್ಟ ದರ್ಜೆಯ ಬ್ಯಾಟ್ಸ್‌ಮನ್. ಅದರಲ್ಲಿ ಯಾವುದೇ ಅನುಮಾನವಿಲ್ಲ. ನಾಯಕತ್ವದಲ್ಲಿ ವಿಲಿಯಮ್ಸನ್ ಹೆಚ್ಚು ಅಂಕಗಳನ್ನು ಪಡೆಯಬಹುದು. ಆದರೆ ಮೈಕಲ್ ವಾನ್ ನಾಯಕತ್ವದ ಬಗ್ಗೆ ಮಾತನಾಡಿಲ್ಲ. ಪ್ರದರ್ಶನದ ವಿಚಾರದಲ್ಲಿ ಇಬ್ಬರ ಮಧ್ಯೆ ದೊಡ್ಡ ಅಂತರವಿದೆ" ಎಂದು ಸಲ್ಮಾನ್ ಬಟ್ ಪ್ರತಿಕ್ರಿಯಿಸಿದ್ದಾರೆ

For Quick Alerts
ALLOW NOTIFICATIONS
For Daily Alerts
Story first published: Sunday, May 16, 2021, 15:59 [IST]
Other articles published on May 16, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X