ಪಾಕ್ ಆತಿಥ್ಯದಲ್ಲಿ ಆಸೀಸ್ ಏಕದಿನ ಸರಣಿಯ ಎಲ್ಲಾ ಪಂದ್ಯಗಳು ಯುಎಇಯಲ್ಲಿ!

ಸಿಡ್ನಿ, ಫೆಬ್ರವರಿ 10: ಪಾಕಿಸ್ತಾನದಲ್ಲಿ ನಡೆಯಲಿದ್ದ ಪಾಕ್-ಆಸ್ಟ್ರೇಲಿಯಾ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲು ಆಸ್ಟ್ರೇಲಿಯಾ ನಿರಾಕರಿಸಿದೆ. ಹೀಗಾಗಿ ವಿಶ್ವಕಪ್‌ಗೂ ಮುನ್ನ ನಡೆಯಲಿದ್ದ ಏಕದಿನ ಸರಣಿಯ ಎಲ್ಲಾ ಪಂದ್ಯಗಳು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿ ನಡೆಯಲಿವೆ. ಟೂರ್ನಿಯ ಆತಿಥ್ಯವನ್ನು ಪಾಕಿಸ್ತಾನ ವಹಿಸಲಿದೆ.
ಐದು ಪಂದ್ಯಗಳ ಈ ಏಕದಿನ ಸರಣಿಯಿಂದ ಹಿಂದೆ ಸರಿದಿದ್ದಕ್ಕೆ ಭದ್ರತೆಯ ಕಾರಣವನ್ನು ಕ್ರಿಕೆಟ್ ಆಸ್ಟ್ರೇಲಿಯಾ ನೀಡಿದೆ. 1998ರ ಬಳಿಕ ಇದೇ ಮೊದಲಬಾರಿಗೆ ಪಾಕಿಸ್ತಾನದ ಕರಾಚಿಯಲ್ಲಿ ಒಂದು ಅಥವಾ ಎರಡು ಪಂದ್ಯಗಳನ್ನಾಡಲು ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಕ್ರಿಕೆಟ್ ಆಸ್ಟ್ರೇಲಿಯಾವನ್ನು ಆಹ್ವಾನಿಸಿತ್ತು, ಕೋರಿಕೊಂಡಿತ್ತು. ಆದರೆ ಪಾಕ್‌ಗೆ ನಿರೀಕ್ಷೆ ಹುಸಿಯಾಗಿದೆ.
'ಪಾಕಿಸ್ತಾನ್ ಸೂಪರ್ ಲೀಗ್ ಟಿ20 ಟೂರ್ನಿಯನ್ನು ಯಶಸ್ವಿಯಾಗಿ ನಡೆಸಿದ್ದರಿಂದ ಕೆಲ ಪಂದ್ಯಗಳನ್ನು ಪಾಕಿಸ್ತಾನದಲ್ಲಿ ನಡೆಸಲು ಆಸ್ಟ್ರೇಲಿಯಾ ಒಪ್ಪಬಹುದು ಎಂದು ನಂಬಿದ್ದೆವು' ಎಂದು ಪಿಸಿಬಿಯ ಅಂತಾರಾಷ್ಟ್ರೀಯ ಕ್ರಿಕೆಟ್ ನಿರ್ದೇಶಕ ಝಾಕಿರ್ ಖಾನ್ ತಿಳಿಸಿದ್ದಾರೆ. ಆಸ್ಟ್ರೇಲಿಯಾ ಏಕದಿನ ಸರಣಿ ಮಾರ್ಚ್ 22ರಿಂದ 31ರ ಅವಧಿಯಲ್ಲಿ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications