ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ ಪಾಕಿಸ್ತಾನದ ವೇಗಿ ಉಮರ್ ಗುಲ್

ಪಾಕಿಸ್ತಾನ ಕ್ರಿಕೆಟ್ ತಂಡದ ವೇಗಿ ಉಮರ್ ಗುಲ್ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯವನ್ನು ಘೋಷಿಸಿದ್ದಾರೆ. 36ರ ಹರೆಯದ ಉಮರ್ ಗುಲ್ ಶುಕ್ರವಾರ ಪಾಕಿಸ್ತಾನದ ದೇಶಿಯ ಪಾಲ್ಗೊಂಡು ತಮ್ಮ ತಂಡ ಹೊರ ಬಿದ್ದ ನಂತರ ಈ ವಿದಾಯವನ್ನು ಘೋಷಿಸಿದರು. ಈ ಮೂಲಕ ಸುಮಾರು ಒಂದೂವರೆ ದಶಕದ ತಮ್ಮ ಕ್ರಿಕೆಟ್ ವೃತ್ತಿ ಬದುಕಿನಿಂದ ನಿವೃತ್ತಿಯನ್ನು ಪಡೆದುಕೊಂಡಿದ್ದಾರೆ.
ಪಾಕಿಸ್ತಾನದ ಅನುಭವಿ ಕ್ರಿಕೆಟಿಗ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ 2003ರಲ್ಲಿ ಪದಾರ್ಪಣೆಯನ್ನು ಮಾಡಿದ್ದರು. ಬಾಂಗ್ಲಾದೇಶದ ವಿರುದ್ಧ ಏಕದಿನ ಕ್ರಿಕೆಟ್‌ಗೆ ಹಾಗೂ ಜಿಂಬಾಬ್ವೆ ವಿರುದ್ಧ ಟೆಸ್ಟ್ ಕ್ರಿಕೆಟ್ ಜೀವನವನ್ನು ಪ್ರಾರಂಭಿಸಿದ್ದರು. ಆದರೆ 2004ರಲ್ಲಿ ಭಾರತದ ವಿರುದ್ಧ ಪಾಕಿಸ್ತಾನದಲ್ಲಿ ನಡೆದ ಸರಣಿಯಲ್ಲಿ ಐದು ವಿಕೆಟ್‌ಗಳ ಗೊಂಚಲು ಪಡೆಯುವ ಮೂಲಕ ಗುಲ್ ಸ್ಟಾರ್ ಪಟ್ಟಕ್ಕೇರಿದರು. ಬಳಿಕ ಪಾಕ್ ತಂಡದ ಪರವಾಗಿ ಸಾಕಷ್ಟು ಸಾಧನೆಗಳನ್ನು ಮಾಡಿದ್ದಾರೆ.
ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಉಮರ್ ಗುಲ್ ಅದ್ಭುತ ಸಾಧನೆಯನ್ನು ಮಾಡಿದ್ದಾರೆ. ಅದರಲ್ಲೂ ಟಿ20 ಕ್ರಿಕೆಟ್‌ನಲ್ಲಿ ಗುಲ್ ಶ್ರೇಷ್ಠ ಬೌಲರ್ ಎನಿಸಿಕೊಂಡಿದ್ದಾರೆ. 2007 ಟಿ20 ವಿಶ್ವಕಪ್ ಹಾಗೂ 2009ರ ಟಿ20 ವಿಶ್ವಕಪ್ ಎರಡರಲ್ಲೂ ಉಮರ್ ಗುಲ್ ಅತಿ ಹೆಚ್ಚಿನ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲೊ ಉಮರ್ ಗುಲ್ ಪಾಕಿಸ್ತಾನ ತಂಡವನ್ನು 47 ಟೆಸ್ಟ್ ಪಂದ್ಯಗಳಲ್ಲಿ ಪ್ರತಿನಿಧಿಸಿದ್ದು 163 ವಿಕೆಟ್ ಪಡೆದುಕೊಂಡಿದ್ದಾರೆ. ಏಕದಿನ ಮಾದರಿಯಲ್ಲಿ 130 ಪಂದ್ಯಗಳಲ್ಲಿ ಪ್ರತಿನಿಧಿಸಿರುವ ಗುಲ್ 179 ವಿಕೆಟ್ ಪಡೆದಿದ್ದರೆ ಚುಟುಕು ಮಾದರಿಯ ಕ್ರಿಕೆಟ್‌ನಲ್ಲಿ 60 ಪಂದ್ಯಗಳಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿ 85 ವಿಕೆಟ್ ಪಡೆದುಕೊಂಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications