ಪಾಕ್ vs ಬಾಂಗ್ಲಾ: ಏಕದಿನ ಕ್ರಿಕೆಟ್‌ನಲ್ಲಿ ದಾಖಲೆ ಬರೆದ ಶಾಹೀನ್ ಶಾ ಅಫ್ರಿದಿ
ವಿಶ್ವಕಪ್‌ನಲ್ಲಿ ಇಂದು ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಪಾಕಿಸ್ತಾನ ತಂಡದ ಪ್ರಮುಖ ವೇಗದ ಬೌಲರ್ ಶಾಹೀನ್ ಶಾ ಅಫ್ರಿದಿ ಪ್ರಮುಖ ಮೈಲಿಗಲ್ಲೊಂದನ್ನು ದಾಟಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 100 ವಿಕೆಟ್‌ಗಳ ಮೈಲುಗಲ್ಲನ್ನು ದಾಟಿದ ಸಾಧನೆಯನ್ನು ಶಾಹೀನ್ ಶಾ ಅಫ್ರಿದಿ ಮಾಡಿದ್ದಾರೆ. ಇನ್ನು ಈ ದಾಖಲೆಯನ್ನು ಅತ್ಯಂತ ವೇಗವಾಗಿ ಸಾಧಿಸಿದ ಮೂರನೇ ಕ್ರಿಕೆಟಿಗ ಎನ್ನುವ ಹೆಗ್ಗಳಿಕೆಯನ್ನು ಅವರು ತಮ್ಮದಾಗಿಸಿಕೊಂಡಿದ್ದಾರೆ.
ಕೊಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆದ ಪಂದ್ಯದಲ್ಲಿ ಮೊದಲ ಓವರ್‌ನ ಐದನೇ ಎಸೆತದಲ್ಲಿ ತಂಜಿದ್ ಅವರನ್ನು ಔಟ್ ಮಾಡುವ ಮೂಲಕ ಈ ಸಾಧನೆ ಮಾಡಿದ್ದಾರೆ. ಕೇವಲ 51ನೇ ಪಂದ್ಯದಲ್ಲಿ ಈ ಮೈಲಿಗಲ್ಲನ್ನು ದಾಟಿದ್ದಾರೆ ಪಾಕಿಸ್ತಾನದ ವೇಗದ ಬೌಲಿಂಗ್ ಅಸ್ತ್ರ ಶಾಹೀನ್ ಅಫ್ರಿದಿ.

ಇನ್ನು ವೇಗದ ಬೌಲರ್‌ಗಳ ಪೈಕಿ ಅತ್ಯಂತ ವೇಗವಾಗಿ 100 ವಿಕೆಟ್ ಪಡೆದ ಬೌಲರ್ ಎನ್ನುವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಎರಡೇ ಸ್ಥಾನದಲ್ಲಿ ಮಿಚೆಲ್ ಸ್ಟಾರ್ಕ್ ಇದ್ದು 52 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದರು. ಇನ್ನು ಶೇನ್ ಬಾಂಡ್ ಹಾಗೂ ಮುಸ್ತಫಿಜುರ್ ರಹ್ಮಾನ್ 54 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರೆ ಬ್ರೇಟ್ ಲೀ 55 ಎಸೆತಗಳಲ್ಲಿ ಈ ದಾಖಲೆ ಬರೆದಿದ್ದರು.
ಇನ್ನು ಒಟ್ಟಾರೆಯಾಗಿ ಅತಿ ವೇಗವಾಗಿ 100 ಅಂತಾರಾಷ್ಟ್ರೀಯ ಏಕದಿನ ವಿಕೆಟ್ ಪಡೆದ ದಾಖಲೆ ಸಂದೀಪ್ ಲಮಿಚ್ಚಾನೆ ಹೆಸರಿನಲ್ಲಿದೆ. ಎರಡನೇ ಸ್ಥಾನದಲ್ಲಿ ಅಫ್ಘಾನಿಸ್ತಾನದ ಸ್ಪಿನ್ನರ್ ರಶೀದ್ ಖಾನ್ ಇದ್ದಾರೆ. ಈ ಇಬ್ಬರು ಸ್ಪಿನ್ನರ್‌ಗಳು ಕ್ರಮವಾಗಿ 42 ಮತ್ತು 44ನೇ ಸ್ಥಾನದಲ್ಲಿದ್ದಾರೆ.
ಇನ್ನು ಇದೇ ಪಂದ್ಯದಲ್ಲಿ ಶಾಹೀನ್ ಅಫ್ರಿದಿ ಪಾಕಿಸ್ತಾನದ ದಿಗ್ಗಜ ಸ್ಪಿನ್ನರ್ ಸಕ್ಲೇನ್ ಮುಷ್ತಾಕ್ ಅವರ 26 ವರ್ಷಗಳ ಹಿಂದಿನ ದಾಖಲೆಯನ್ನು ಮುರಿದಿದ್ದು ಏಕದಿನದಲ್ಲಿ ವೇಗವಾಗಿ 100 ವಿಕೆಟ್ ಪಡೆದ ಪಾಕಿಸ್ತಾನಿ ಬೌಲರ್ ಎನಿಸಿಕೊಂಡಿದ್ದಾರೆ. ಮೇ 12, 1997 ರಂದು ಗ್ವಾಲಿಯರ್‌ನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಸಕ್ಲೇನ್ ಮುಷ್ತಾಕ್ ಈ ದಾಖಲೆಯನ್ನು ಬರೆದಿದ್ದರು
ಇನ್ನು ಶಾಹೀನ್ ಅಫ್ರಿದಿ ಎಲ್ಲಾ ಮಾದರಿಯಲ್ಲಿಯೂ ಪಾಕಿಸ್ತಾನದ ತಂಡದ ಪ್ರಮುಖ ಬೌಲಿಂಗ್ ಅಸ್ತ್ರವಾಗಿ ಗುರುತಿಸಿಕೊಂಡಿದ್ದಾರೆ. 2018ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಬಳಿಕ ಟೆಸ್ಟ್ ಕ್ರಿಕೆಟ್‌ನಲ್ಲಿ 105 ವಿಕೆಟ್‌ಗಳನ್ನು ಕಬಳಿಸಿದ್ದರೆ ಟಿ20ಐ ಮಾದರಿಯಲ್ಲಿ 64 ವಿಕೆಟ್‌ಗಳನ್ನು ಪಡೆದಿದ್ದಾರೆ.
ಇನ್ನು ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡ ಆರಂಭಿಕ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದ ಬಳಿಕ ಸತತ ನಾಲ್ಕು ಪಂದ್ಯಗಳಲ್ಲಿ ಸೋಲು ಕಂಡಿದೆ. ಇದೀಗ ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಗೆಲುವು ಸಾಧಿಸಬೇಕಾದ ಒತ್ತಡದಲ್ಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications