ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ಪ್ರಮುಖ ದಾಖಲೆ ಸರಿಗಟ್ಟಿದ ಬಾಬರ್ ಅಜಂ

Pakistan skipper Babar Azam equals Virat Kohlis record of fastest batter to score 3000 T20I runs

ಪಾಕಿಸ್ತಾನ ಹಾಗೂ ಇಂಗ್ಲೆಂಡ್ ತಂಡಗಳು ಟಿ20 ಸರಣಿಯ 6ನೇ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿಯೂ ಪಾಕಿಸ್ತಾನದ ನಾಯಕ ಬಾಬರ್ ಅಜಂ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು ಅರ್ಧ ಶತಕ ಸಿಡಿಸಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಬಾಬರ್ ಅಜಂ ಮಹತ್ವದ ಮೈಲಿಗಲ್ಲೊಂದನ್ನು ಸಾಧಿಸಿದ್ದು ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ಪ್ರಮುಖ ದಾಖಲೆಯೊಂದನ್ನು ಸರಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿನ ಭರ್ಜರಿ ಅರ್ಧ ಶತಕದೊಂದಿಗೆ ಬಾಬರ್ ಅಜಂ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತ್ಯಂತ ವೇಗವಾಗಿ 3000 ರನ್‌ಗಳನ್ನು ಗಳಿಸಿದ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ದಾಖಲೆ ಈ ಮೊದಲು ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ 52 ರನ್‌ಗಳನ್ನು ಗಳಿಸಿದ್ದಾಗ ಈ ಮೈಲಿಗಲ್ಲನ್ನು ಸಾಧಿಸಿದ್ದಾರೆ ಬಾಬರ್ ಅಜಂ.

ಟಿ20 ಕ್ರಿಕೆಟ್‌ನ ಅತ್ಯುತ್ತಮ ಬೌಲರ್ ಬೂಮ್ರಾ: ಟಿ20 ವಿಶ್ವಕಪ್‌ಗೆ ಅಲಭ್ಯತೆ ಬಗ್ಗೆ ಪ್ರತಿಕ್ರಿಯಿಸಿದ ಆಸಿಸ್ ಸ್ಟಾರ್ಟಿ20 ಕ್ರಿಕೆಟ್‌ನ ಅತ್ಯುತ್ತಮ ಬೌಲರ್ ಬೂಮ್ರಾ: ಟಿ20 ವಿಶ್ವಕಪ್‌ಗೆ ಅಲಭ್ಯತೆ ಬಗ್ಗೆ ಪ್ರತಿಕ್ರಿಯಿಸಿದ ಆಸಿಸ್ ಸ್ಟಾರ್

ಭರ್ಜರಿ ಪ್ರದರ್ಶನ ನೀಡಿದ ಬಾಬರ್

ಭರ್ಜರಿ ಪ್ರದರ್ಶನ ನೀಡಿದ ಬಾಬರ್

ಲಾಹೋರ್‌ನ ಗಡಾಫಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟಿ20 ಸರಣಿಯ ಆರನೇ ಪಂದ್ಯದಲ್ಲಿ ಬಾಬರ್ ಅಜಂ ಈ ಮೈಲಿಗಲ್ಲಿ ಸಾಧಿಸಿದ್ದಾರೆ. ಈ ಪಂದ್ಯಕ್ಕೂ ಮುನ್ನ ಈ ಸಾಧನೆ ಮಾಡಲು ಬಾಬರ್ ಅಜಂಗೆ 52 ರನ್‌ಗಳ ಅಗತ್ಯವಿತ್ತು. ಈ ಪಂದ್ಯದಲ್ಲಿ ಮತ್ತೊಂದು ಭರ್ಜರಿ ಪ್ರದರ್ಶನ ನೀಡಿದ ಬಾಬರ್ ಅಜಂ 59 ಎಸೆತಗಳಲ್ಲಿ 87 ರನ್‌ಗಳನ್ನು ಬಾರಿಸಿ ಪಾಕಿಸ್ತಾನ ತಂಡ ಈ ಪಂದ್ಯದಲ್ಲಿ ಸವಾಲಿನ ಪ್ರದರ್ಶನ ನೀಡಲು ಸಾಧ್ಯವಾಯಿತು.

ಸವಾಲಿನ ಗುರಿ ನೀಡಿದ ಪಾಕಿಸ್ತಾನ

ಸವಾಲಿನ ಗುರಿ ನೀಡಿದ ಪಾಕಿಸ್ತಾನ

ಈ ಪಂದ್ಯದಲ್ಲಿ ಪಾಕಿಸ್ತಾನ ಇನ್‌ಫಾರ್ಮ್ ಆಟಗಾರ ಮೊಹಮ್ಮದ್ ರಿಜ್ವಾನ್‌ಗೆ ವಿಶ್ರಾಂತಿ ನೀಡಲಾಗಿತ್ತು. ಅವರ ಬದಲಿಗೆ ಮೊಹಮ್ಮದ್ ಹ್ಯಾರಿಸ್ ಆರಂಭಿಕನಾಗಿ ಕಣಕ್ಕಿಳಿಯುವ ಅವಕಾಶ ನೀಡಲಾಯಿತಾದರೂ ಉತ್ತಮ ಪ್ರದರ್ಶನ ನೀಡಲು ವಿಫಲವಾದರು. ಆದರೆ ಬಾಬರ್ ಅಜಂ ಅವರ ಭರ್ಜರಿ ಬ್ಯಾಟಿಂಗ್ ಪಾಕಿಸ್ತಾನಕ್ಕೆ ಮತ್ತೊಮ್ಮೆ ಆಸರೆಯಾಗಿದೆ. ಬಾಬರ್ ಅಜಂ ಹೊರತುಪಡಿಸಿದರೆ ಇಫ್ತಿಕಾರ್ ಅಹ್ಮದ್ 31 ರನ್‌ಗಳನ್ನು ಗಳಿಸಿದ್ದಾರೆ. ಅಂತಿಮವಾಗಿ ಪಾಕಿಸ್ತಾನ ತಂಡ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 169 ರನ್‌ಗಳನ್ನು ಗಳಿಸಿದೆ.

ಮುನ್ನಡೆಯಲ್ಲಿ ಪಾಕಿಸ್ತಾನ

ಮುನ್ನಡೆಯಲ್ಲಿ ಪಾಕಿಸ್ತಾನ

ಸರಣಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ತಂಡಕ್ಕೆ ಇಂಗ್ಲೆಂಡ್ ಸೋಲಿನ ರುಚಿ ತೋರಿಸಿದ್ದರೆ ಎರಡನೇ ಪಂದ್ಯದಲ್ಲಿ ಪಾಕಿಸ್ತಾನ ತಂಡ ದಾಖಲೆಯ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಮೂರನೇ ಪಂದ್ಯವನ್ನು ಇಂಗ್ಲೆಂಡ್ 63 ರನ್‌ಗಳನ್ನು ಗಳಿಸಿದ್ದರೆ ನಾಲ್ಕನೇ ಪಂದ್ಯ ಅತ್ಯಂತ ರೋಚಕವಾಗಿ ಅಂತ್ಯವಾಗಿದ್ದು ಪಾಕಿಸ್ತಾನ 3 ರನ್‌ಗಳ ಅಂತರದಿಂದ ಗೆಲುವು ಸಾಧಿಸಿತ್ತು. ಇನ್ನು ಐದನೇ ಪಂದ್ಯ ಕೂಡ ರೋಚಕವಾಗಿ ನಡೆದಿದ್ದು ಈ ಪಂದ್ಯವನ್ನು ಕೂಡ ಪಾಕಿಸ್ತಾನ ತಂಡ ಕೇವಲ 6 ರನ್‌ಗಳ ಅಂತರದಿಂದ ಗೆಲುವು ಸಾಧಿಸಿದೆ. ಈ ಮೂಲಕ ಈ ಸರಣಿಯಲ್ಲಿ ಆತಿಥೇಯ ಪಾಕಿಸ್ತಾನ 3-2 ಅಂತರದಿಂದ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ಇಂದಿನ ಪಂದ್ಯದ ಫಲಿತಾಂಶ ಕುತೂಹಲ ಮೂಡಿಸಿದೆ.

ಇತ್ತಂಡಗಳ ಆಡುವ ಬಳಗ

ಇತ್ತಂಡಗಳ ಆಡುವ ಬಳಗ

ಪಾಕಿಸ್ತಾನ ಆಡುವ ಬಳಗ: ಬಾಬರ್ ಆಜಮ್ (ನಾಯಕ), ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಶಾನ್ ಮಸೂದ್, ಇಫ್ತಿಕರ್ ಅಹ್ಮದ್, ಹೈದರ್ ಅಲಿ, ಶಾದಾಬ್ ಖಾನ್, ಆಸಿಫ್ ಅಲಿ, ಮೊಹಮ್ಮದ್ ನವಾಜ್, ಅಮೀರ್ ಜಮಾಲ್, ಮೊಹಮ್ಮದ್ ವಾಸಿಂ ಜೂನಿಯರ್, ಶಹನವಾಜ್ ದಹಾನಿ
ಬೆಂಚ್: ಮೊಹಮ್ಮದ್ ರಿಜ್ವಾನ್, ಹಾರಿಸ್ ರೌಫ್, ಉಸ್ಮಾನ್ ಖಾದಿರ್, ಖುಷ್ದಿಲ್ ಶಾ, ಮೊಹಮ್ಮದ್ ಹಸ್ನೈನ್, ಅಬ್ರಾರ್ ಅಹ್ಮದ್

ಇಂಗ್ಲೆಂಡ್ ಆಡುವ ಬಳಗ
ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಅಲೆಕ್ಸ್ ಹೇಲ್ಸ್, ಡೇವಿಡ್ ಮಲನ್, ಬೆನ್ ಡಕೆಟ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ (ಸಿ), ಸ್ಯಾಮ್ ಕುರಾನ್, ಡೇವಿಡ್ ವಿಲ್ಲಿ, ಆದಿಲ್ ರಶೀದ್, ರೀಸ್ ಟೋಪ್ಲಿ, ರಿಚರ್ಡ್ ಗ್ಲೀಸನ್
ಬೆಂಚ್: ಕ್ರಿಸ್ ವೋಕ್ಸ್, ಮಾರ್ಕ್ ವುಡ್, ವಿಲ್ ಜ್ಯಾಕ್ಸ್, ಲಿಯಾಮ್ ಡಾಸನ್, ಆಲಿ ಸ್ಟೋನ್, ಟಾಮ್ ಹೆಲ್ಮ್, ಲ್ಯೂಕ್ ವುಡ್, ಜೋರ್ಡಾನ್ ಕಾಕ್ಸ್

Story first published: Friday, September 30, 2022, 22:17 [IST]
Other articles published on Sep 30, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X