For Quick Alerts
ALLOW NOTIFICATIONS  
For Daily Alerts
 

ಏಷ್ಯಾಕಪ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಪಾಕ್ ನಾಯಕ ಬಾಬರ್ ಅಜಂ

ಏಷ್ಯಾ ಕಪ್ ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಪಾಕಿಸ್ತಾನ ತಂಡ ಅಬ್ಬರದ ಪ್ರದರ್ಶನ ನೀಡಿದೆ. ಅದರಲ್ಲೂ ನಾಯಕ ಬಾಬರ್ ಅಜಂ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿ ತಂಡದ ಬೃಹತ್ ಮೊತ್ತಕ್ಕೆ ಕಾರಣವಾಗಿದ್ದಾರೆ. ಅಲ್ಲದೆ ಈ ಪಂದ್ಯದ ಮೂಲಕ ಬಾಬರ್ ಅಜಂ ಏಷ್ಯಾಕಪ್ ಇತಿಹಾಸದಲ್ಲಿ ಅದ್ಭುತ ದಾಖಲೆಯೊಂದನ್ನು ಬರೆದಿದ್ದಾರೆ.

ನೇಪಾಳ ವಿರುದ್ಧದ ಪಂದ್ಯದಲ್ಲಿ ಬಾಬರ್ ಅಜಂ 131 ಎಸೆತಗಳಲ್ಲಿ ಭರ್ಜರಿ 151 ರನ್‌ಗಳನ್ನು ಕಲೆಹಾಕಿ ವಿಕೆಟ್ ಕಳೆದುಕೊಂಡರು. ಈ ಮೂಲಕ ಆರಂಭಿಕ ಆಘಾತದಿಂದ ಪಾಕಿಸ್ತಾನ ತಂಡವನ್ನು ಕಾಪಾಡಿದ್ದಲ್ಲದೆ ಬೃಹತ್ ಮೊತ್ತ ಪೇರಿಸಲು ಕಾರಣವಾದರು. ಬಾಬರ್ ಅಜಂ ಏಷ್ಯಾಕಪ್‌ನಲ್ಲಿ ಬಾರಿಸಿದ ಈ ರನ್ ದಾಖಲೆಗೆ ಕಾರಣವಾಗಿದೆ.

Pakistan skipper Babar Azam record in Asia cup after 151 runs knock against Nepal

ಏಷ್ಯಾಕಪ್ ಟೂರ್ನಿಯಲ್ಲಿ ನಾಯಕನಾಗಿ 150ಕ್ಕೂ ಅಧಿಕ ರನ್ ಬಾರಿಸಿದ ಮೊದಲ ನಾಯಕ ಎಂಬ ದಾಖಲೆಯನ್ನು ಬರೆದಿದ್ದಾರೆ ಬಾಬರ್ ಅಜಂ. ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದು 2014ರ ಏಷ್ಯಾಕಪ್‌ನಲ್ಲಿ ಬಾಂಗ್ಲಾದೇಶದ ವಿರುದ್ಧ 150+ ರನ್ ಬಾರಿಸಿರುವುದು ನಾಯಕನೊಬ್ಬನ ಅತ್ಯುತ್ತಮ ಸ್ಕೋರ್ ಆಗಿತ್ತು.

ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಪಾಕಿಸ್ತಾನ ತಂಡ ಆರಂಭದಲ್ಲಿ ಎರಡು ವಿಕೆಟ್‌ಗಳನ್ನು ಕಳದುಕೊಂಡು ಹಿನ್ನಡೆ ಅನುಭವಿಸಿತ್ತು. ಫಕಾರ್ ಜಮಾನ್ ಹಾಗೂ ಇಮಾಮ್ ಉಲ್ ಹಕ್ ತಂಡದ ಮೊತ್ತ 25 ರನ್‌ಗಳಾಗುವಷ್ಟರಲ್ಲಿಯೇ ವಿಕೆಟ್ ಕಳೆದುಕೊಂಡಿದ್ದರು. ಆದರೆ ನಂತರ ಬಂದ ನಾಯಕ ಬಾಬರ್ ಅಜಂ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು. ರಿಜ್ವಾನ್ ಅವರಿಗೆ ಸಾಥ್ ನೀಡಿದ್ದು ನಂತರ ಇಫ್ತಿಕಾರ್ ಅಹ್ಮದ್ ಕೂಡ ಸ್ಮರಣೀಯ ಇನ್ನಿಂಗ್ಸ್ ಕಟ್ಟಿದರು.

ಈ ಪಂದ್ಯದಲ್ಲಿ ಬಾಬರ್ ಅಜಂ 131 ಎಸೆಗಳಲ್ಲಿ 151 ರನ್‌ಗಳನ್ನು ಬಾರಿಸಿದರೆ ಇಫ್ತಿಕಾರ್ ಅಹ್ಮದ್ ತಮ್ಮ ಚೊಚ್ಚಲ ಏಕದಿನ ಶತಕವನ್ನು ಬಾರಿಸಿದರು. 71 ಎಸೆತಗಳನ್ನು ಎದುರಿಸಿದ ಇಫ್ತಿಕಾರ್ ಅಹ್ಮದ್ 109 ರನ್‌ಗಳನ್ನು ಕಲೆಹಾಕಿದ್ದಾರೆ. ಈ ಬ್ಯಾಟಿಂಗ್ ಪ್ರದರ್ಶನದ ಕಾರಣದಿಂದಾಗಿ ಪಾಕಿಸ್ತಾನ ತಂಡ ಈ ಪಂದ್ಯದಲ್ಲಿ 342 ರನ್‌ಗಳನ್ನು ಕಲೆಹಾಕಿದೆ.

ನೇಪಾಳ (ಪ್ಲೇಯಿಂಗ್ XI): ಕುಶಾಲ್ ಭುರ್ಟೆಲ್, ಆಸಿಫ್ ಶೇಖ್ (ವಿಕೆಟ್ ಕೀಪರ್), ರೋಹಿತ್ ಪೌಡೆಲ್ (ನಾಯಕ), ಆರಿಫ್ ಶೇಖ್, ಕುಶಾಲ್ ಮಲ್ಲಾ, ದೀಪೇಂದ್ರ ಸಿಂಗ್ ಐರಿ, ಗುಲ್ಸನ್ ಝಾ, ಸೋಂಪಾಲ್ ಕಾಮಿ, ಕರಣ್ ಕೆಸಿ, ಸಂದೀಪ್ ಲಮಿಚಾನೆ, ಲಲಿತ್ ರಾಜಬನ್ಶಿ

ಪಾಕಿಸ್ತಾನ (ಪ್ಲೇಯಿಂಗ್ XI): ಫಖರ್ ಜಮಾನ್, ಇಮಾಮ್-ಉಲ್-ಹಕ್, ಬಾಬರ್ ಅಜಮ್(ಸಿ), ಮೊಹಮ್ಮದ್ ರಿಜ್ವಾನ್(ಡಬ್ಲ್ಯೂ), ಅಘಾ ಸಲ್ಮಾನ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಹ್ಯಾರಿಸ್ ರೌಫ್

Story first published: Wednesday, August 30, 2023, 20:44 [IST]
Other articles published on Aug 30, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+