ಟಿ20 ವಿಶ್ವಕಪ್‌ಗಾಗಿ ಪಾಕಿಸ್ತಾನ ತಂಡ ಪ್ರಕಟ: ಬಾಬರ್ ಇನ್, ರಿಜ್ವಾನ್ ಔಟ್
ಭಾರತ ಹಾಗೂ ಶ್ರೀಲಂಕಾ ಜಂಟಿಯಾಗಿ 2026ರ ಟಿ20 ವಿಶ್ವಕಪ್ ಆಯೋಜಿಸುತ್ತಿದೆ. ಈ ಪ್ರತಿಷ್ಠಿತ ಟೂರ್ನಿಗಾಗಿ ಜನವರಿ 25 ರಂದು ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ತಂಡದಲ್ಲಿ ಸ್ಟಾರ್ ಅನುಭವಿ ಆಟಗಾರರಾ ಬಾಬರ್ ಅಜಮ್ ಹಾಗೂ ಮೊಹಮ್ಮದ್ ನವಾಜ್ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ತಂಡದಲ್ಲಿ ಅನುಭವಿ ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಜ್ವಾನ್ ಹಾಗೂ ಹ್ಯಾರಿಸ್ ರೌಫ್ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ ತಂಡವನ್ನು ಮುನ್ನಡೆಸಿದ್ದ ಸಲ್ಮಾನ್ ಅಲಿ ಅಘಾ ಟಿ20 ವಿಶ್ವಕಪ್‌ನಲ್ಲೂ ತಂಡವನ್ನು ಮುನ್ನಡೆಸಲಿದ್ದಾರೆ.
ಲಾಹೋರ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ತಂಡವನ್ನು ಘೋಷಿಸಿತು. ರಾಷ್ಟ್ರೀಯ ಆಯ್ಕೆ ಸಮಿತಿಯ ಸದಸ್ಯ ಆಕಿಬ್ ಜಾವೇದ್, ಪಾಕಿಸ್ತಾನದ ಟಿ20 ನಾಯಕ ಸಲ್ಮಾನ್ ಅಲಿ ಅಘಾ ಮತ್ತು ಸೀಮಿರ ಓವರ್‌ಗಳ ತಂಡದ ಮುಖ್ಯ ತರಬೇತುದಾರ ಮೈಕ್ ಹಸನ್ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಇದೇ ಮೊದಲ ಬಾರಿಗೆ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಕ್ ತಂಡದ ಆರು ಆಟಗಾರರು ಆಡಲಿದ್ದಾರೆ. ಸಲ್ಮಾನ್ ಅಲಿ ಅಘಾ, ಫಹೀಮ್ ಅಶ್ರಫ್, ಖವಾಜಾ ಮೊಹಮ್ಮದ್ ನಫೆ, ಮೊಹಮ್ಮದ್ ಸಲ್ಮಾನ್ ಮಿರ್ಜಾ, ಸಾಹಿಬ್‌ಜಾದಾ ಫರ್ಹಾನ್ ಮತ್ತು ಉಸ್ಮಾನ್ ತಾರಿಕ್ ಮೊದಲ ಬಾರಿಗೆ ಮೆಗಾ ಇವೆಂಟ್‌ನಲ್ಲಿ ಕಣಕ್ಕೆ ಇಳಿಯಲಿದ್ದಾರೆ. ಈ ವಿಶ್ವಕಪ್‌ಗೂ ಮೊದಲು ಪಾಕಿಸ್ತಾನ ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಯನ್ನು ಆಡಲಿದೆ.
ವಿಶ್ವಕಪ್‌ಗೆ ಪಾಕಿಸ್ತಾನ ತಂಡ
ಸಲ್ಮಾನ್ ಅಲಿ ಅಘಾ (ನಾಯಕ), ಅಬ್ರಾರ್ ಅಹ್ಮದ್, ಬಾಬರ್ ಅಜಮ್, ಫಹೀಮ್ ಅಶ್ರಫ್, ಫಖರ್ ಜಮಾನ್, ಮೊಹಮ್ಮದ್ ಖವಾಜಾ (ವಿಕೆಟ್ ಕೀಪರ್), ಮೊಹಮ್ಮದ್ ನವಾಜ್, ಮೊಹಮ್ಮದ್ ಸಲ್ಮಾನ್ ಮಿರ್ಜಾ, ನಸೀಮ್ ಶಾ, ಸಾಹಿಬ್ಜಾದಾ ಫರ್ಹಾನ್ (ವಿಕೆಟ್ ಕೀಪರ್), ಸೈಮ್ ಅಯೂಬ್, ಶಹಬ್ರಿ ಖಾನ್, ಶಹಬ್ರಿ ಖಾನ್ (ವಿಕೆಟ್ ಕೀಪರ್), ಮತ್ತು ಉಸ್ಮಾನ್ ತಾರಿಕ್
ಬಿ ಗುಂಪಿನಲ್ಲಿ ಸ್ಥಾನ ಪಡೆದ ಪಾಕ್
ಟೂರ್ನಿಯಲ್ಲಿ ಒಟ್ಟು 20 ತಂಡಗಳು ಭಾಗವಹಿಸಲಿದ್ದು, 5 ತಂಡಗಳ 4 ಗುಂಪುಗಳನ್ನು ರಚಿಸಲಾಗಿದೆ. ಪಾಕಿಸ್ತಾನ ಬಿ ಗುಂಪಿನಲ್ಲಿ ಸ್ಥಾನ ಪಡೆದಿದೆ. ಪಾಕಿಸ್ತಾನವು ಫೆಬ್ರವರಿ 7 ರಂದು ನೆದರ್ಲ್ಯಾಂಡ್ಸ್ ವಿರುದ್ಧದ ತನ್ನ ಅಭಿಯಾನ ಆರಂಭಿಸಲಿದೆ. ಫೆಬ್ರವರಿ 10 ರಂದು ಯುಎಸ್‌ಎ ವಿರುದ್ಧ, ಫೆಬ್ರವರಿ 15 ರಂದು ಕೊಲಂಬೊದಲ್ಲಿ ಭಾರತದ ವಿರುದ್ಧ, ಫೆಬ್ರವರಿ 18 ರಂದು ನಮೀಬಿಯಾ ವಿರುದ್ಧ ಲೀಗ್ ಹಂತದಲ್ಲಿ ಪಾಕ್ ಹೋರಾಟವನ್ನು ನಡೆಸಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications