PAK vs SA ODI: ದಕ್ಷಿಣ ಆಫ್ರಿಕಾ ಮಣಿಸಿ ಇತಿಹಾಸ ಬರೆದ ಪಾಕ್ ಫೈನಲ್‌ಗೆ
ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೂ ಮುನ್ನ ಪಾಕಿಸ್ತಾನದ ಸ್ಟಾರ್ ಆಟಗಾರರು ಭರ್ಜರಿ ಫಾರ್ಮ್‌ಗೆ ಮರಳಿದ್ದಾರೆ. ಕರಾಚಿಯಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಪಾಕ್ ಆರು ವಿಕೆಟ್‌ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ, ತ್ರಿಕೋನ ಸರಣಿಯ ಫೈನಲ್ ಪ್ರವೇಶಿಸಿದೆ. ಈ ಪಂದ್ಯದಲ್ಲಿ ಪಾಕ್ ಪರ ಭರವಸೆಯ ಬ್ಯಾಟರ್ ಮೊಹಮ್ಮದ್ ರಿಜ್ವಾನ್ ಹಾಗೂ ಸಲ್ಮಾನ್ ಅಘಾ ಅಮೋಘ ಪ್ರದರ್ಶನ ನೀಡಿ ಇತಿಹಾಸ ಬರೆದಿದ್ದಾರೆ.
ಈ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲು ಬ್ಯಾಟಿಂಗ್ ಮಾಡಿತು. ತೆಂಬಾ ಬವುಮಾ, ಮ್ಯಾಥ್ಯೂ ಬ್ರಿಟ್ಜ್‌ಕಿ, ಹೆನ್ರಿಕ್ ಕ್ಲಾಸೆನ್ ಅವರು ಬಾರಿಸಿದ ಅರ್ಧಶತಕದ ಬಲದಿಂದ ದಕ್ಷಿಣ ಆಫ್ರಿಕಾ ಮಹತ್ವದ ಪಂದ್ಯದಲ್ಲಿ 50 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 352 ರನ್ ಕಲೆ ಹಾಕಿತು. ಸವಾಲಿನ ಗುರಿಯನ್ನು ಬೆನ್ನಟ್ಟಿದ ಪಾಕ್ ಇನ್ನು 6 ಎಸೆತ ಬಾಕಿ ಇರುವಂತೆ, 6 ವಿಕೆಟ್‌ಗಳಿಂದ ದಕ್ಷಿಣ ಆಫ್ರಿಕಾವನ್ನು ಮಣಿಸಿತು. ಅಲ್ಲದೆ ಟೂರ್ನಿಯ ಫೈನಲ್‌ಗೆ ಪ್ರವೇಶ ಪಡೆಯಿತು. ತ್ರಿಕೋನ ಸರಣಿಯ ಪ್ರಶಸ್ತಿ ಸುತ್ತಿನ ಕಾದಾಟ ಶುಕ್ರವಾರ ನಡೆಯಲಿದ್ದು, ಆತಿಥೇಯ ಪಾಕ್, ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ.

ಪಾಕ್ ಇತಿಹಾಸ
ಪಾಕ್ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ದೊಡ್ಡ ಸಾಧನೆಯನ್ನು ಮಾಡಿದ ಹೆಗ್ಗಳಿಕೆಗೆ ಪಾತ್ರವಾಗಿದೆ. 353 ರನ್‌ಗಳ ಬೃಹತ್ ಮೊತ್ತ ಚೇಸ್ ಮಾಡಿದ ಹೆಗ್ಗಳಿಕೆಯನ್ನು ಪಾಕಿಸ್ತಾನ ತನ್ನದಾಗಿಸಿಕೊಂಡಿದೆ. ಇದಕ್ಕೂ ಮೊದಲು ಪಾಕ್ 2022ರಲ್ಲಿ ಆಸ್ಟ್ರೇಲಿಯಾ ವಿರುದ್ಧ 349 ರನ್‌ಗಳನ್ನು ಚೇಸ್ ಮಾಡಿದ್ದೇ ದೊಡ್ಡ ಸಾಧನೆ ಆಗಿತ್ತು. ಮೊಹಮ್ಮದ್ ರಿಜ್ವಾನ್ ನಾಯಕತ್ವದಲ್ಲಿ ಪಾಕ್ ಸವಾಲಿನ ಗುರಿಯನ್ನು ಬೆನ್ನಟ್ಟುವ ಮೂಲಕ ಇತಿಹಾಸ ನಿರ್ಮಿಸಿದೆ.
ಕಳಪೆ ಆರಂಭ
ಸವಾಲಿನ ಗುರಿಯನ್ನು ಬೆನ್ನಟ್ಟಿದ ಪಾಕಿಸ್ತಾನ ಆರಂಭ ಉತ್ತಮವಾಗಿರಲಿಲ್ಲ. ಭರವಸೆಯ ಆಟಗಾರ ಬಾಬರ್ ಅಜಮ್ (23 ರನ್) ಹಾಗೂ ಸೌದ್ ಶಕೀಲ್ (15 ರನ್) ಬೇಗನೆ ಆಟ ಮುಗಿಸಿದರು. ಆರಂಭಿಕ ಆಟಗಾರ ಫಖರ್ ಜಮಾನ್ (41) ದೊಡ್ಡ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾದರು. 91 ರನ್‌ಗಳಿಗೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ಮೊಹಮ್ಮದ್ ರಿಜ್ವಾನ್ ಹಾಗೂ ಸಲ್ಮಾನ್ ಅಘಾ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ತಂಡಕ್ಕೆ ಆಧಾರವಾದರು.

ಭರ್ಜರಿ ಜೊತೆಯಾಟ
ನಾಲ್ಕನೇ ವಿಕೆಟ್‌ಗೆ ಮೊಹಮ್ಮದ್ ರಿಜ್ವಾನ್ ಹಾಗೂ ಸಲ್ಮಾನ್ ಅಘಾ ಜೋಡಿ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿ, ತಂಡವನ್ನು ಗೆಲುವಿನ ದಡಕ್ಕೆ ತಂದು ನಿಲ್ಲಿಸಿತು. ಈ ಜೋಡಿ ನೈಜ ಆಟವನ್ನು ಆಡಿ ಅಬ್ಬರಿಸಿತು. ನಾಲ್ಕನೇ ವಿಕೆಟ್‌ಗೆ ಈ ಜೋಡಿ 229 ಎಸೆತಗಳಲ್ಲಿ 260 ರನ್ ಸೇರಿಸಿತು. ಸಲ್ಮಾನ್ 16 ಬೌಂಡರಿ, 2 ಸಿಕ್ಸರ್ ಸಹಾಯದಿಂದ 134 ರನ್ ಸಿಡಿಸಿ ಔಟ್ ಆದರು. ನಾಯಕ ಮೊಹಮ್ಮದ್ ರಿಜ್ವಾನ್ 128 ಎಸೆತಗಳಲ್ಲಿ ಅಜೇಯ 122 ರನ್ ಸಿಡಿಸಿದರು. ಇವರ ಮನಮೋಹಕ ಇನಿಂಗ್ಸ್‌ನಲ್ಲಿ 9 ಬೌಂಡರಿ, 3 ಸಿಕ್ಸರ್‌ಗಳು ಸೇರಿವೆ.
ಮೂವರ ಅರ್ಧಶತಕ
ಇದಕ್ಕೂ ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾದ ಪರ ಮೂವರು ಆಟಗಾರರು ಅರ್ಧಶತಕ ಬಾರಿಸಿ ತಂಡದ ಮೊತ್ತವನ್ನು ಹಿಗ್ಗಿಸಿದರು. ಭರವಸೆಯ ಬ್ಯಾಟರ್ ತೆಂಬಾ ಬವುಮಾ 82, ಮ್ಯಾಥ್ಯೂಸ್ ಬ್ರೀಟ್ಜ್‌ಕಿ 83, ಹೆನ್ರಿಕ್ ಕ್ಲಾಸೆನ್ 87 ರನ್ ಗಳಿಸಿದರು. ಇವರ ಜವಾಬ್ದಾರಿಯುತ ಆಟದ ನೆರವಿನಿಂದ ದಕ್ಷಿಣ ಆಫ್ರಿಕಾ ಸವಾಲಿನ ಮೊತ್ತ ಕಲೆ ಹಾಕಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications