For Quick Alerts
ALLOW NOTIFICATIONS  
For Daily Alerts
 

ಪಾಕಿಸ್ತಾನ ಸೂಪರ್ ಲೀಗ್ ಸೀಸನ್-6 ತಕ್ಷಣದಿಂದಲೇ ಮುಂದೂಡಿಕೆ

Pakistan Super League season 6 postponed with immediate effect

ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಕೊರೊನಾ ವೈರಸ್ ಪ್ರಕರಣಗಳು ಕಾಣಿಸಿಕೊಂಡಿದೆ. ಇದರ ಪರಿಣಾಮವಾಗಿ ಪ್ರಸಕ್ತ ನಡೆಯುತ್ತಿರುವ 6ನೇ ಆವೃತ್ತಿಯ ಪಿಎಸ್‌ಎಲ್ ಅನ್ನು ತಕ್ಷಣದಿಂದಲೇ ಜಾರಿಯಾಗುವಂತೆ ಮುಂದೂಡಿಕೆ ಮಾಡಲಾಗಿದೆ. ಈ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಗುರುವಾರ ತನ್ನ ನಿರ್ಧಾರವನ್ನು ಪ್ರಕಟಿಸಿದೆ.

ಈ ನಿರ್ಧಾರವನ್ನು ಪ್ರಕಟಿಸುವ ಮುನ್ನ ಗುರುವಾರದಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಎರಡು ಪ್ರತ್ಯೇಕ ಫ್ರಾಂಚೈಸಿಗಳ ಮೂವರು ಆಟಗಾರರಿಗೆ ಕೊರೊನಾ ವೈರಸ್ ದೃಢಪಟ್ಟಿರುವುದನ್ನು ಬಹಿರಂಗಪಡಿಸಿತ್ತು. ಆ ಇಬ್ಬರು ಆಟಗಾರರನ್ನು 10 ದಿನಗಳ ಕಾಲ ಪ್ರತ್ಯೇಕವಾಗಿರಿಸಲಾಗುತ್ತದೆ ಎಂದು ಪಿಸಿಬಿ ಮಾಹಿತಿಯನ್ನು ನೀಡಿತ್ತು.

ಪಾಕಿಸ್ತಾನ ಸೂಪರ್ ಲೀಗ್‌ನ ಆಡಳಿತ ಮಂಡಳಿ ಎಲ್ಲಾ ಫ್ರಾಂಚೈಸಿಗಳೊಂದಿಗೆ ಮಾತುಕತೆಯನ್ನು ವರ್ಚುವಲ್ ವೇದಿಕೆಯಲ್ಲಿ ನಡೆಸಿ ನಿರ್ಧಾರವನ್ನು ತೆಗೆದುಕೊಳ್ಳಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ ತಿಳಿಸಿತ್ತು. ಈ ಮೀಟಿಂಗ್‌ನಲ್ಲಿ ತಕ್ಷಣದಿಂದಲೇ ಟೂರ್ನಿಯನ್ನು ಮುಂದೂಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಫೆಬ್ರವರಿ 20ರಿಂದ ಆರಂಭವಾದ ಈ ಟೂರ್ನಿಯಲ್ಲಿ ಈವರೆಗೆ 7 ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿದೆ. ಹೀಗಾಗಿ ಇದನ್ನು ಗಂಭೀರವಾಗಿ ಪರಿಗಣಿಸಿದ ಪಾಕಿಸ್ತಾನ ಸೂಪರ್ ಲೀಗ್ ಈ ನಿರ್ಧಾರಗಳನ್ನು ತೆಗೆದುಕೊಂಡಿದೆ.

ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು "ನಾವು ಎಲ್ಲಾ ಸ್ಪರ್ಧಿಗಳ ಸುರಕ್ಷತೆ ಹಾಗೂ ಭದ್ರತೆಯ ಬಗ್ಗೆ ಗಮನಹರಿಸಲು ಬಯಸುತ್ತೇವೆ. ಎಲ್ಲಾ ಪರೀಕ್ಷೆಗಳನ್ನು ನಡೆಸುವುದರ ಜೊತೆಗೆ ಲಸಿಕೆ ಹಾಗೂ ಐಸೋಲೇಶನ್ ವ್ಯವಸ್ಥೆಗಳನ್ನು ಆಡುವ ಆರು ತಂಡಗಳಿಗೂ ಮಾಡಲಾಗುತ್ತದೆ" ಎಂದು ತಿಳಿಸಿದೆ.

Story first published: Thursday, March 4, 2021, 14:15 [IST]
Other articles published on Mar 4, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+