For Quick Alerts
ALLOW NOTIFICATIONS  
For Daily Alerts
 

Pakistan: ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ಭಾಗವಹಿಸುವ ಬಗ್ಗೆ ಈ ದಿನ ಅಂತಿಮ ತೀರ್ಮಾನ

ಟಿ20 ವಿಶ್ವಕಪ್‌ 2026ರಲ್ಲಿ ಭಾಗವಹಿಸುವಿಕೆಯ ಬಗ್ಗೆ ಪಾಕಿಸ್ತಾನ ಇನ್ನು ತನ್ನ ಅಂತಿಮ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಸೋಮವಾರ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (ಪಿಸಿಬಿ) ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರು ಪ್ರಧಾನಿ ಶೆಹಬಾಜ್ ಷರೀಫ್ ಅವರನ್ನು ಭೇಟಿ ಮಾಡಿದರು. ಈ ಭೇಟಿಯ ಬಳಿಕ ಮಾತನಾಡಿದ ಮೊಹ್ಸಿನ್ ನಖ್ವಿ ಇನ್ನು ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಎಲ್ಲ ಆಯ್ಕೆಗಳು ನಮ್ಮ ಮುಂದಿವೆ. ಈ ಬಗ್ಗೆ ಅಂತಿಮ ನಿರ್ಧಾರವನ್ನು ಶುಕ್ರವಾರ ಅಥವಾ ಮುಂದಿನ ಸೋಮವಾರ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದಿದ್ದಾರೆ.

ಈಗ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಪ್ರಧಾನಿ ಅವರೊಂದಿಗೆ ಚರ್ಚೆ ನಡೆಸಲಾಗಿದೆ. ನಮ್ಮ ಮುಂದೆ ಎಲ್ಲ ಆಯ್ಕೆಗಳು ಇವೆ. ಟೂರ್ನಿಯಲ್ಲಿ ಪಾಕ್ ತಂಡ ಭಾಗವಹಿಸಬೇಕೋ ಬೇಡವೋ ಎಂಬ ಬಗ್ಗೆ ಅಂತಿಮ ನಿರ್ಧಾರವನ್ನು ಶುಕ್ರವಾರ ಅಥವಾ ಮುಂದಿನ ಸೋಮವಾರ ತೆಗೆದುಕೊಳ್ಳಲಾಗುವುದು ಎಂದು ನಖ್ವಿ ಸಾಮಾಜಿಕ ತಾಣದಲ್ಲಿ ಬರೆದುಕೊಂಡಿದ್ದಾರೆ.

Pakistan

ಭಾರತದಲ್ಲಿ ಭದ್ರತಾ ಕಾರಣಗಳನ್ನು ನೀಡಿ ಬಾಂಗ್ಲಾದೇಶ ಟೂರ್ನಿಯಿಂದ ಹೊರ ನಡೆದ ಬಳಿಕ ಪಾಕಿಸ್ತಾನ ಹೊಸ ನಾಟಕವನ್ನು ಆರಂಭಿಸಿದೆ. ಬಾಂಗ್ಲಾದೇಶ ತಂಡವನ್ನು ಟಿ20 ವಿಶ್ವಕಪ್‌ನಿಂದ ಹೊರಗಿಟ್ಟ ಐಸಿಸಿ ಸ್ಕಾಟ್ಲೆಂಡ್ ತಂಡಕ್ಕೆ ಅವಕಾಶ ನೀಡಿದೆ. ಈ ಬಳಿಕವೇ ಪಾಕಿಸ್ತಾನ ಟಿ20 ವಿಶ್ವಕಪ್‌ನಲ್ಲಿ ಆಡುತ್ತದೋ ಇಲ್ಲವೋ ಎಂಬ ಚರ್ಚೆಗಳು ಆರಂಭವಾದವು.

ಐಸಿಸಿ ನಡೆಗೆ ಬೇಸರ

ಬಾಂಗ್ಲಾದೇಶ ಕ್ರಿಕೆಟ್ ತಂಡದ ವಿಚಾರದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ನಡೆದುಕೊಳ್ಳುತ್ತಿರುವ ರೀತಿ ಪಾಕಿಸ್ತಾನಕ್ಕೆ ಇಷ್ಟವಾಗಿಲ್ಲ. ಈ ಅಸಮಾಧಾನದ ಕಾರಣದಿಂದಾಗಿ ಪಾಕಿಸ್ತಾನ ತಂಡವು ಮುಂಬರುವ ಟೂರ್ನಿಯಿಂದ ಹಿಂದೆ ಸರಿಯುವ ಸಾಧ್ಯತೆಯಿದೆ ಎಂದು ವರದಿ ಹೇಳಿದೆ. ಇನ್ನು ಕೆಲವು ವರದಿಗಳ ಪ್ರಕಾರ ಪಾಕ್‌ ಗುಂಪು ಹಂತದಲ್ಲಿ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಪಿಸಿಬಿ, ಬಿಸಿಸಿಐ ಹಾಗೂ ಐಸಿಸಿ ಭಾರತ ಹಾಗೂ ಪಾಕಿಸ್ತಾನ ಪಂದ್ಯವನ್ನು 2027ರ ವರೆಗೆ ತಟಸ್ಥ ಸ್ಥಳದಲ್ಲಿ ನಡೆಸಲು ನಿರ್ಧರಿಸಿವೆ.

ಸಲ್ಮಾನ್ ಅಲಿ ಅಘಾಗೆ ಪಟ್ಟ

ಭಾನುವಾರ ಪಾಕಿಸ್ತಾನ ಟಿ20 ವಿಶ್ವಕಪ್‌ಗೆ ತನ್ನ 15 ಜನರ ತಂಡವನ್ನು ಘೋಷಿಸಿದೆ. ಏಷ್ಯಾ ಕಪ್‌ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಪಾಕ್ ತಂಡವನ್ನು ಮುನ್ನಡೆಸಿದ್ದ ಸಲ್ಮಾನ್ ಅಲಿ ಅಘಾ ಮೆಗಾ ಟೂರ್ನಿಯಲ್ಲಿ ತಂಡದ ಚುಕ್ಕಾಣಿ ಹಿಡಿಯಲಿದ್ದಾರೆ. ತಂಡವನ್ನು ಪ್ರಕಟಿಸಿದ ತಕ್ಷಣ ನಾವು ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸುತ್ತೇವೆ ಎಂದು ಅಲ್ಲ ಎಂದು ಪಿಸಿಬಿ ಮುಖ್ಯಸ್ಥ ನಖ್ವಿ ತಿಳಿಸಿದ್ದಾರೆ. ಟಿ20 ವಿಶ್ವಕಪ್‌ನಲ್ಲಿ ಪಾಕ್ ಆಡುವ ನಿರ್ಧಾರ ಸರ್ಕಾರ ತೆಗೆದುಕೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ. ಪಿಸಿಬಿ, ಪಾಕ್‌ ಸರ್ಕಾರದ ತೀರ್ಮಾನಕ್ಕಾಗಿ ಕಾಯುತ್ತಿದೆ.

ಟಿ20 ವಿಶ್ವಕಪ್‌ ಈ ಬಾರಿ ಭಾರತ ಹಾಗೂ ಶ್ರೀಲಂಕಾದಲ್ಲಿ ಆಯೋಜಿಸಲಾಗಿದೆ. ಈ ಮೆಗಾ ಟೂರ್ನಿ ಫೆಬ್ರವರಿ 7 ರಿಂದ ಆರಂಭವಾಗಲಿದೆ. ಜನವರಿ 30 ರಂದು 20 ದೇಶಗಳಿಗೆ ತಮ್ಮ ಅಂತಿಮ ತಂಡವನ್ನು ನೀಡಲು ಕೊನೆಯ ದಿನವಾಗಿದೆ.

Story first published: Tuesday, January 27, 2026, 0:49 [IST]
Other articles published on Jan 27, 2026
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+