PAK vs SA: ಬಾಬರ್ ಒಳಗೆ ಆಫ್ರಿದಿ ಹೊರಗೆ; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಪಾಕಿಸ್ತಾನ ತಂಡ ಪ್ರಕಟ
ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಡಿಸೆಂಬರ್ 10 ರಿಂದ ಪ್ರಾರಂಭವಾಗುವ ದಕ್ಷಿಣ ಆಫ್ರಿಕಾ ಪ್ರವಾಸಕ್ಕಾಗಿ ಎಲ್ಲಾ ಮೂರು ಸ್ವರೂಪಗಳಿಗೆ ತಂಡವನ್ನು ಪ್ರಕಟಿಸಿದೆ. ಸ್ಟಾರ್ ಬ್ಯಾಟರ್ ಬಾಬರ್ ಆಜಮ್ ಪಾಕಿಸ್ತಾನ ತಂಡಕ್ಕೆ ಮರಳಿದ್ದಾರೆ. ಮತ್ತೊಂದೆಡೆ ವೇಗದ ಬೌಲರ್ ಶಾಹೀನ್ ಅಫ್ರಿದಿ ಅವರನ್ನು ಟೆಸ್ಟ್ ಸರಣಿಯಿಂದ ಕೈಬಿಡುವ ಮೂಲಕ ಪಿಸಿಬಿ ಆಯ್ಕೆ ಸಮಿತಿ ಎಲ್ಲರನ್ನು ಅಚ್ಚರಿಗೊಳಿಸಿದೆ. ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಪಾಕಿಸ್ತಾನ ತಂಡ ಮೂರು ಟಿ20 ಅಂತಾರಾಷ್ಟ್ರೀಯ ಪಂದ್ಯಗಳು, ಮೂರು ಏಕದಿನ ಪಂದ್ಯಗಳು ಮತ್ತು ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ.
ಪಾಕಿಸ್ತಾನದ ಸ್ಟಾರ್ ಆಟಗಾರರ ಪೈಕಿ ಮೊಹಮ್ಮದ್ ರಿಜ್ವಾನ್, ಸ್ಯಾಮ್ ಅಯೂಬ್ ಮತ್ತು ಸಲ್ಮಾನ್ ಅಲಿ ಅಗಾ ಅವರೊಂದಿಗೆ ಬಾಬರ್ ಅಜಮ್ ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಮಾದರಿ ಸರಣಿಗಳನ್ನು ಆಡಲು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ನಸೀಮ್ ಶಾ ಟೆಸ್ಟ್ ಮತ್ತು ಏಕದಿನಕ್ಕೆ ಆಯ್ಕೆಯಾಗಿದ್ದಾರೆ. ಇಂಗ್ಲೆಂಡ್ ವಿರುದ್ಧದ ಕೊನೆಯ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುದಿದ್ದ ಶಾಹೀನ್ ಶಾ ಆಫ್ರಿದಿ ಅವರಿಗೆ ಕೆಲಸದ ಹೊರೆ ಕಡಿಮೆ ಮಾಡುವ ಸಲುವಾಗಿ ಟಿ20 ಮತ್ತು ಏಕದಿನ ಸರಣಿಗಳಿಗೆ ಮಾತ್ರ ಆಯ್ಕೆ ಮಾಡಲಾಗಿದೆ. ಇದರೊಂದಿಗೆ ಅವರು ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ರ ಟೂರ್ನಿಗಾಗಿ ಉತ್ತಮ ಫಿಟ್‌ನೆಸ್ ಮತ್ತು ಫಾರ್ಮ್‌ನಲ್ಲಿರುವುದು ಪಿಸಿಬಿಗೆ ಪ್ರಮುಖವಾಗಿದೆ.

ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಪಾಕಿಸ್ತಾನ ತಂಡ
ಟೆಸ್ಟ್ ತಂಡ: ಶಾನ್ ಮಸೂದ್ (ನಾಯಕ), ಸೌದ್ ಶಕೀಲ್ (ಉಪನಾಯಕ), ಅಮೀರ್ ಜಮಾಲ್, ಅಬ್ದುಲ್ಲಾ ಶಫೀಕ್, ಬಾಬರ್ ಅಜಮ್, ಹಸಿಬುಲ್ಲಾ (ವಿಕೆಟ್‌ಕೀಪರ್), ಕಮ್ರಾನ್ ಗುಲಾಮ್, ಖುರ್ರಂ ಶಹಜಾದ್, ಮೀರ್ ಹಮ್ಜಾ, ಮೊಹಮ್ಮದ್ ಅಬ್ಬಾಸ್, ಮೊಹಮ್ಮದ್ ರಿಜ್ವಾನ್ (ವಿಕೆಟ್‌ಕೀಪರ್), ನಸೀಮ್ ಶಾ , ನೋಮನ್ ಅಲಿ, ಸೈಮ್ ಅಯೂಬ್ ಮತ್ತು ಸಲ್ಮಾನ್ ಅಲಿ ಅಗಾ.
ಏಕದಿನ ತಂಡ: ಮೊಹಮ್ಮದ್ ರಿಜ್ವಾನ್ (ನಾಯಕ ಮತ್ತು ವಿಕೆಟ್‌ಕೀಪರ್), ಅಬ್ದುಲ್ಲಾ ಶಫೀಕ್, ಅಬ್ರಾರ್ ಅಹ್ಮದ್, ಬಾಬರ್ ಅಜಮ್, ಹ್ಯಾರಿಸ್ ರೌಫ್, ಕಮ್ರಾನ್ ಗುಲಾಮ್, ಮೊಹಮ್ಮದ್ ಹಸ್ನೇನ್, ಮೊಹಮ್ಮದ್ ಇರ್ಫಾನ್ ಖಾನ್, ನಸೀಮ್ ಶಾ, ಸಯೀಮ್ ಅಯೂಬ್, ಸಲ್ಮಾನ್ ಅಲಿ ಅಗಾ, ಶಾಹೀನ್ ಶಾಬ್ ಅಫ್ರಿದಿ, ಸುಫ್ಯಾನ್ ಅಫ್ರಿದಿ ತಾಹಿರ್ ಮತ್ತು ಉಸ್ಮಾನ್ ಖಾನ್ (ವಿಕೆಟ್ ಕೀಪರ್).
ಟಿ20 ತಂಡ: ಮೊಹಮ್ಮದ್ ರಿಜ್ವಾನ್ (ನಾಯಕ ಮತ್ತು ವಿಕೆಟ್‌ಕೀಪರ್), ಅಬ್ರಾರ್ ಅಹ್ಮದ್, ಬಾಬರ್ ಅಜಮ್, ಹ್ಯಾರಿಸ್ ರೌಫ್, ಜಹಂದಾದ್ ಖಾನ್, ಮೊಹಮ್ಮದ್ ಅಬ್ಬಾಸ್ ಅಫ್ರಿದಿ, ಮೊಹಮ್ಮದ್ ಹಸ್ನೇನ್, ಮೊಹಮ್ಮದ್ ಇರ್ಫಾನ್ ಖಾನ್, ಒಮೈರ್ ಬಿನ್ ಯೂಸುಫ್, ಸಯೀಮ್ ಅಯೂಬ್, ಸಲ್ಮಾನ್ ಅಲಿ ಅಗಾ, ಸುಫ್ಯಾನ್ ಅಫ್ರಿದಿ,ಶಾಹೀನ್ ಅಲಿ ಅಗಾ , ತಯ್ಯಬ್ ತಾಹಿರ್ ಮತ್ತು ಉಸ್ಮಾನ್ ಖಾನ್ (ವಿಕೆಟ್‌ಕೀಪರ್).
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications