ಭಾರತ-ಪಾಕ್ ಫೈಟ್ ಫಿಕ್ಸ್: ಪಟ್ಟು ಸಡಿಲಿಸಿದ ಪಿಸಿಬಿ
ಪಾಕಿಸ್ತಾನ ಕ್ರಿಕೆಟ್ ತಂಡ ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸುತ್ತದೋ ಇಲ್ಲವೋ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಂತೆ ಆಗಿದೆ. ಪಾಕಿಸ್ತಾನ ಟಿ20 ವಿಶ್ವಕಪ್‌ನಲ್ಲಿ ತಾನು ಭಾಗವಹಿಸುವುದಿಲ್ಲ ಎಂಬ ನಾಟಕ, ದುರಹಂಕಾರವನ್ನು ಬದಿಗಿಟ್ಟಿದೆ. ಹಲವು ಬೆಳವಣಿಗೆಗಳ ಬಳಿಕ ಪಾಕಿಸ್ತಾನ ಅಳೆದು ತೂಗಿ ಟಿ20 ವಿಶ್ವಕಪ್ 2026ರಲ್ಲಿ ಭಾಗವಹಿಸುವುದಾಗಿ ಪ್ರಕಟಿಸಿದೆ. ಅಲ್ಲದೆ ತಂಡ ಯಾವುದೇ ಪಂದ್ಯಗಳನ್ನು ಬಹಿಷ್ಕರಿಸುವುದಿಲ್ಲ. ಪಾಕಿಸ್ತಾನ ಪ್ರಧಾನಿಯನ್ನು ಭೇಟಿಯಾದ ನಂತರ ಪಿಸಿಬಿ ಮುಖ್ಯಸ್ಥರು ಮಹತ್ವದ ತೀರ್ಮಾನವನ್ನು ಪ್ರಕಟಿಸಿದ್ದಾರೆ.
ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ಭಾನುವಾರ ಪ್ರಧಾನಿಯನ್ನು ಭೇಟಿಯಾಗುವುದಾಗಿ ಘೋಷಿಸಿದ್ದರು. ತಂಡವು ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸುತ್ತದೋ ಇಲ್ಲವೋ ಎಂಬ ಬಗ್ಗೆ ಪ್ರಧಾನಿ ಅವರೊಂದಿಗೆ ಮಾತನಾಡಿ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದ್ದರು. ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಸೋಮವಾರ ವಿದೇಶದಿಂದ ಪಾಕ್‌ಗೆ ಬಂದ ಬಳಿಕ ಅವರನ್ನು ನಖ್ವಿ ಭೇಟಿ ಮಾಡಿದರು. ಬಳಿಕ ಪಾಕ್ ತಂಡ ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸುತ್ತದೆ ಎಂದು ಘೋಷಿಸಿದರು ಎಂದು ತಿಳಿದು ಬಂದಿದೆ. ಅಲ್ಲದೆ ಯಾವುದೇ ಪಂದ್ಯವನ್ನು ಬಹಿಷ್ಕರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಭಾರತ ವಿರುದ್ಧದ ಪಂದ್ಯದಿಂದ ಹಿಂದೆ ಸರಿಯಬಹುದು ಎಂದು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿದ್ದವು. ಸಾಂಪ್ರದಾಯಿಕ ಎದುರಾಳಿಗಳಾದ ಭಾರತ, ಪಾಕಿಸ್ತಾನ ನಡುವಣ ಟಿ20 ವಿಶ್ವಕಪ್ ಪಂದ್ಯವು ಫೆಬ್ರವರಿ 15 ರಂದು ಕೊಲಂಬೊದಲ್ಲಿ ನಡೆಯಲಿದೆ. ಈ ಪಂದ್ಯದ ಮೇಲೆ ಇದ್ದ ಕರಿನೆರಳು ಈಗ ಸರಿದಿದೆ. ಭಾರತ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಿಲ್ಲ ಎಂದು ತಿಳಿದು ಬಂದಿದೆ.
ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಮೊಹ್ಸಿನ್ ನಖ್ವಿ ಟಿ20 ವಿಶ್ವಕಪ್‌ಗೆ ಆಯ್ಕೆಯಾದ ಎಲ್ಲ ಆಟಗಾರರನ್ನು ಭೇಟಿ ಮಾಡುವುದಾಗಿ ಜಿಯೋ ನ್ಯೂಸ್ ವರದಿ ಮಾಡಿದೆ.
20 ತಂಡಗಳು ಭಾಗಿ
ಟಿ20 ವಿಶ್ವಕಪ್ ಈ ಬಾರಿ ಭಾರತ ಹಾಗೂ ಶ್ರೀಲಂಕಾ ಆಯೋಜಿಸುತ್ತಿವೆ. ಈ ಪ್ರತಿಷ್ಠಿತ ಟೂರ್ನಿ ಫೆಬ್ರವರಿ 7 ರಿಂದ ಆರಂಭವಾಗಲಿದೆ. ಈ ಮೆಗಾ ಟೂರ್ನಿಯಲ್ಲಿ ಒಟ್ಟು 20 ತಂಡಗಳು ಭಾಗವಹಿಸುತ್ತಿದ್ದು, ಈ ತಂಡಗಳನ್ನು ಒಟ್ಟು 4 ಗುಂಪುಗಳಲ್ಲಿ ವಿಂಗಡಿಸಲಾಗಿದೆ. ಭಾರತ ಹಾಗೂ ಪಾಕಿಸ್ತಾನ ತಂಡಗಳು ಎ ಗುಂಪಿನಲ್ಲಿ ಸ್ಥಾನ ಪಡೆದಿವೆ. ಬಹು ನಿರೀಕ್ಷಿತ ಭಾರತ ಹಾಗೂ ಪಾಕಿಸ್ತಾನ ತಂಡಗಳು ಫೆಬ್ರವರಿ 15 ರಂದು ಕಾದಾಟ ನಡೆಸಲಿವೆ. ಟಿ20 ವಿಶ್ವಕಪ್ ಫೈನಲ್ ಮಾರ್ಚ್ 8 ರಂದು ನಡೆಯಲಿದೆ.
ಟಿ20 ವಿಶ್ವಕಪ್‌ಗೆ ಪಾಕಿಸ್ತಾನ ತಂಡ: ಸಲ್ಮಾನ್ ಅಲಿ ಅಘಾ (ನಾಯಕ), ಅಬ್ರಾರ್ ಅಹ್ಮದ್, ಬಾಬರ್ ಅಜಮ್, ಫಹೀಮ್ ಅಶ್ರಫ್, ಫಖರ್ ಜಮಾನ್, ಖವಾಜಾ ಮೊಹಮ್ಮದ್ ನಫೆ (ವಿಕೆಟ್ ಕೀಪರ್), ಮೊಹಮ್ಮದ್ ನವಾಜ್, ಮೊಹಮ್ಮದ್ ಸಲ್ಮಾನ್ ಮಿರ್ಜಾ, ನಸೀಮ್ ಶಾ, ಸಾಹಿಬ್ಜಾದಾ ಫರ್ಹಾನ್ (ವಿಕೆಟ್ ಕೀಪರ್), ಸೈಮ್ ಅಯೂಬ್, ಶಾಹೀನ್ ಶಾ ಅಫ್ರಿದಿ, ಶಾದಾಬ್ ಖಾನ್, ಉಸ್ಮಾನ್ ಖಾನ್, ಉಸ್ಮಾನ್ ತಾರಿಕ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications