ಏಷ್ಯಾಕಪ್ ಟೂರ್ನಿಯ ಆರಂಭಕ್ಕೆ ಬೆರಳೆಣಿಕೆಯ ದಿನಗಳಿರುವ ಸಂದರ್ಭದಲ್ಲಿ ಈ ಪ್ರತಿಷ್ಟಿತ ಟೂರ್ನಿಗೂ ಮುನ್ನ ಏಷ್ಯಾದ ಎರಡು ತಂಡಗಳಾದ ಪಾಕಿಸ್ತಾನ ಹಾಗೂ ಅಪ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗಿದೆ. ಮೂರು ಪಂದ್ಯಗಳ ಏಕದಿನ ಸರಣಿ ಇದಾಗಿದ್ದು ಈ ಸರಣಿ ಶ್ರೀಲಂಕಾದಲ್ಲಿಯೇ ಆಯೋಜನೆಯಾಗಲಿದೆ. ಮೊದಲ ಪಂದ್ಯ ಶ್ರೀಲಂಕಾದ ಹಂಬಂತೋಟದಲ್ಲಿ ಆರಂಭವಾಗಿದೆ.
ಈ ಪಂದ್ಯದಲ್ಲಿ ಪಾಕಿಸ್ತಾನ ತಂಡ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹಾಗಾಗಿ ಅಫ್ಘಾನಿಸ್ತಾನ ತಂಡ ಆರಂಭದಲ್ಲಿ ಬೌಲಿಂಗ್ ನಡೆಸುವ ಸವಾಲು ಸ್ವೀಕರಿಸಿದೆ. ಏಷ್ಯಾ ಕಪ್ ಟೂರ್ನಿಗೆ ಮುನ್ನವೇ ಈ ಎರಡು ತಂಡಗಳು ಮುಖಾಮುಖಿಯಾಗುತ್ತಿರುವ ಕಾರಣ ಈ ಸರನಿ ಈಗ ಸಾಕಷ್ಟು ಕುತೂಹಲ ಮೂಡಿಸಿದ್ದು ಎರಡು ತಂಡಗಳ ಬಲಾಬಲಗಳ ಬಗ್ಗೆ ಸ್ಪಷ್ಟ ಚಿತ್ರಣ ದೊರೆಯಲಿದೆ.

Live ಸ್ಕೋರ್ ಹೀಗಿದೆ
ಕುತೂಹಲಕಾರಿ ಅಂಶವೆಂದರೆ ಈ ಎರಡು ದೇಶಗಳ ನಡುವಿನ ಪ್ರಪ್ರಥಮ ದ್ವಿಪಕ್ಷೀಯ ಏಕದಿನ ಸರಣಿ ಇದಾಗಿದೆ. ಇನ್ನು ಈ ಎರಡು ತಂಡಗಳು ಕೂಡ ಪೂರ್ಣ ಸಾಮರ್ಥ್ಯದ ತಂಡದೊಂದಿಗೆ ಕಣಕ್ಕಿಳಿಯುತ್ತಿದ್ದು ತೀವ್ರ ಪೈಪೋಟಿ ನಿರೀಕ್ಷಿಸಲಾಗಿದೆ. ಪಾಕಿಸ್ತಾನ ತಂಡ ಬಲಾಢ್ಯ ಆಟಗಾರರನ್ನು ಹೊಂದಿದ್ದರೆ ಅಫ್ಘಾನಿಸ್ತಾನ ತಂಡದಲ್ಲಿಯೂ ಹಲವು ಪ್ರತಿಭಾನ್ವಿತ ಆಟಗಾರರ ಪಡೆಯಿದೆ. ಅಫ್ಘಾಸ್ತಾನ ಇತ್ತೀಚೆಗೆ ಬಾಂಗ್ಲಾದೇಶ ತಂಡವನ್ನು ಅದರದ್ದೇ ತವರಿನಲ್ಲಿ 2-1 ಅಂತರದಿಂದ ಮಣಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಹೀಗಾಗಿ ಪಾಕ್ ಪಡೆಗೂ ಇದು ಎಚ್ಚರಿಕೆ ಗಂಟೆ.
ಅಫ್ಘಾನಿಸ್ತಾನ ಆಡುವ ಬಳಗ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಜದ್ರಾನ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಮೊಹಮ್ಮದ್ ನಬಿ, ಇಕ್ರಮ್ ಅಲಿಖಿಲ್, ಅಜ್ಮತುಲ್ಲಾ ಒಮರ್ಜಾಯ್, ರಶೀದ್ ಖಾನ್, ಅಬ್ದುಲ್ ರಹಮಾನ್, ಮುಜೀಬ್ ಉರ್ ರಹಮಾನ್, ಫಜಲ್ಹಕ್ ಫಾರೂಕಿ
ಬೆಂಚ್: ನಜೀಬುಲ್ಲಾ ಜದ್ರಾನ್, ವಫಾದರ್ ಮೊಮಂಡ್, ರಿಯಾಜ್ ಹಸನ್, ನೂರ್ ಅಹ್ಮದ್, ಮೊಹಮ್ಮದ್ ಸಲೀಮ್ ಸಫಿ
ಪಾಕಿಸ್ತಾನ: ಫಖರ್ ಜಮಾನ್, ಇಮಾಮ್-ಉಲ್-ಹಕ್, ಬಾಬರ್ ಆಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಇಫ್ತಿಕರ್ ಅಹ್ಮದ್, ಅಘಾ ಸಲ್ಮಾನ್, ಶಾದಾಬ್ ಖಾನ್, ಉಸಾಮಾ ಮಿರ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಹ್ಯಾರಿಸ್ ರೌಫ್
ಬೆಂಚ್: ಸೌದ್ ಶಕೀಲ್, ಮೊಹಮ್ಮದ್ ನವಾಜ್, ತಯ್ಯಬ್ ತಾಹಿರ್, ಫಹೀಮ್ ಅಶ್ರಫ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ಹ್ಯಾರಿಸ್, ಮೊಹಮ್ಮದ್ ವಾಸಿಂ ಜೂನಿಯರ್