For Quick Alerts
ALLOW NOTIFICATIONS  
For Daily Alerts
 

Pak vs AFG: ಪಾಕ್ ವಿರುದ್ಧ ಸೋಲಿನ ಸೇಡು ತೀರಿಸಿಕೊಳ್ಳುತ್ತಾ ಅಫ್ಘನ್: Live ಸ್ಕೋರ್

ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನ ತಂಡಗಳ ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯ ಶ್ರೀಲಂಕಾದ ಹಂಬಂತೋಟದಲ್ಲಿರುವ ಮಹಿಂದಾ ರಾಜಪಕ್ಷ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಮೊದಲ ಪಂದ್ಯದಲ್ಲಿ ಬೌಲಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನಿಡಿದ್ದರೂ ಬ್ಯಾಟಿಂಗ್‌ನಲ್ಲಿ ತೀವ್ರ ಹಿನ್ನಡೆ ಕಂಡು ಹೀನಾಯ ಸೋಲು ಅನುಭವಿಸಿದ್ದ ಅಫ್ಘಾನಿಸ್ತಾನ ಈ ಪಂದ್ಯದಲ್ಲಿ ಬ್ಯಾಟಿಂಗ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿದೆ.

ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ ಟಾಸ್ ಗೆದ್ದುಕೊಂಡಿದ್ದು ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ನಿರ್ಧಾರ ತೆಗೆದುಕೊಂಡಿತು. ಹೀಗಾಗಿ ಪಾಕಿಸ್ತಾನ ತಂಡ ಆರಂಭದಲ್ಲಿ ಬೌಲಿಂಗ್ ನಡೆಸುವ ಸವಾಲು ಸ್ವೀಕರಿಸಿದೆ. ಮೊದಲ ಪಂದ್ಯದಲ್ಲಿ ಪಾಕಿಸ್ತಾನ ಗೆದ್ದ ಆತ್ಮವಿಶ್ವಾಸದಲ್ಲಿ ಕಣಕ್ಕಿಳಿದಿದ್ದರೆ ಅಫ್ಘಾನಿಸ್ತಾನ ಮೊದಲ ಪಂದ್ಯದ ಸೋಲಿಗೆ ಸೇಡಿ ತೀರಿಸಿಕೊಳ್ಳುವ ಲೆಕ್ಕಾಚಾರದಲ್ಲಿದೆ.

Pakistan vs Afghanistan ODI series, 2nd match Live score, playing XI

Live ಸ್ಕೋರ್ ಹೀಗಿದೆ

1
58587

ಇನ್ನು ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ನಡೆಸಿದ್ದು ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದೆ. ಅದರಲ್ಲೂ ಆರಂಭಿಕರಿಬ್ಬರು ಭರ್ಜರಿ 227 ರನ್‌ಗಳ ಜೊತೆಯಾಟ ನೀಡಿದ್ದಾರೆ. ರಹ್ಮನುಲ್ಲಾ ಗುರ್ಬಾಜ್ ಭರ್ಜರಿ 151 ರನ್‌ಗಳನ್ನು ಗಳಿಸಿ ವಿಕೆಟ್ ಕಳೆದುಕೊಂಡರೆ ಇಬ್ರಾಹಿಮ್ ಜದ್ರಾನ್ 80 ರನ್‌ಗಳನ್ನು ಗಳಿಸಿ ಔಟಾದರು. ಹೀಗಾಗಿ ಈ ಪಂದ್ಯದಲ್ಲಿ ಪಾಖಿಸ್ತಾನಕ್ಕೆ ಅಫ್ಘನ್ ಪಡೆ ಕಠಿಣ ಸವಾಲು ನೀಡುವತ್ತ ಹೆಜ್ಜೆಯಿಟ್ಟಿದೆ.

ಇನ್ನು ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ ಎರಡು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ರಿಯಾಜ್ ಅಹ್ಮದ್ ಹಾಗೂ ಶಾಹಿದುಲ್ಲಾ ಕಮಲ್ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಮತ್ತೊಂದೆಡೆ ಪಾಕಿಸ್ತಾನ ಯಾವುದೇ ಬದಲಾವಣೆಯಿಲ್ಲದೆ ಈ ಪಂದ್ಯದಲ್ಲಿ ಆಡುತ್ತಿದೆ.

ಅಫ್ಘಾನಿಸ್ತಾನ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಜದ್ರಾನ್, ರಿಯಾಜ್ ಹಸನ್, ಹಶ್ಮತುಲ್ಲಾ ಶಾಹಿದಿ (ನಾಯಕ), ಇಕ್ರಮ್ ಅಲಿಖಿಲ್, ಮೊಹಮ್ಮದ್ ನಬಿ, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ಫಜಲ್ಹಕ್ ಫಾರೂಕಿ, ಅಬ್ದುಲ್ ರಹಮಾನ್, ಶಾಹಿದುಲ್ಲಾ ಕಮಾಲ್
ಬೆಂಚ್: ರಹಮತ್ ಷಾ, ನಜಿಬುಲ್ಲಾ ಝದ್ರಾನ್, ವಫಾದರ್ ಮೊಮಂಡ್, ನೂರ್ ಅಹ್ಮದ್, ಮೊಹಮ್ಮದ್ ಸಲೀಮ್ ಸಫಿ, ಅಜ್ಮತುಲ್ಲಾ ಒಮರ್ಜಾಯ್

ಪಾಕಿಸ್ತಾನ: ಫಖರ್ ಜಮಾನ್, ಇಮಾಮ್-ಉಲ್-ಹಕ್, ಬಾಬರ್ ಆಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಇಫ್ತಿಕರ್ ಅಹ್ಮದ್, ಅಘಾ ಸಲ್ಮಾನ್, ಶಾದಾಬ್ ಖಾನ್, ಉಸಾಮಾ ಮಿರ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಹ್ಯಾರಿಸ್ ರೌಫ್ ಬೆಂಚ್: ಸೌದ್ ಶಕೀಲ್, ಮೊಹಮ್ಮದ್ ನವಾಜ್, ತಯ್ಯಬ್ ತಾಹಿರ್, ಫಹೀಮ್ ಅಶ್ರಫ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ಹ್ಯಾರಿಸ್, ಮೊಹಮ್ಮದ್ ವಾಸಿಂ ಜೂನಿಯರ್

Story first published: Thursday, August 24, 2023, 18:49 [IST]
Other articles published on Aug 24, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+