Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Champions Trophy: ಗೆಲುವಿನ ಖಾತೆ ತೆರೆಯಲು ಪಾಕಿಸ್ತಾನ-ಬಾಂಗ್ಲಾದೇಶ ನಡುವೆ ಪೈಪೋಟಿ

ಇಂದು ಗುರುವಾರ (ಫೆಬ್ರವರಿ 27) ಚಾಂಪಿಯನ್ಸ್ ಟ್ರೋಫಿ 2025ರ ಎ ಗುಂಪಿನ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಹಾಲಿ ಚಾಂಪಿಯನ್ ಮತ್ತು ಆತಿಥೇಯ ಪಾಕಿಸ್ತಾನ ಎದುರಿಸಲಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಉಭಯ ತಂಡಗಳಿಗೆ ಇದು ಕೊನೆಯ ಪಂದ್ಯವಾಗಿದೆ. ಈಗಾಗಲೇ ಎರಡು ತಂಡಗಳು ಆಡಿರುವ 2 ಪಂದ್ಯಗಳನ್ನೂ ಸೋತಿದ್ದು, ಟೂರ್ನಿಯಿಂದ ಹೊರಗುಳಿದಿವೆ. ಹೀಗಾಗಿ ಕೊನೆಯ ಪಂದ್ಯದಲ್ಲಿ ಎರಡು ತಂಡಗಳು ಗೆಲುವಿನ ಖಾತೆ ತೆರೆಯಲು ಪೈಪೋಟಿ ನಡೆಸಲಿವೆ.

ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಚಾಂಪಿಯನ್ಸ್ ಟ್ರೋಫಿ 2025 ಪಂದ್ಯವು ರಾವಲ್ಪಿಂಡಿಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ ಪ್ರಕಾರ ಮಧ್ಯಾಹ್ನ 2.30 ಗಂಟೆಗೆ ಪಂದ್ಯದ ಆರಂಭವಾಗಲಿದೆ. ಪಾಕಿಸ್ತಾನ ತಂಡ 30 ವರ್ಷಗಳ ನಂತರ ಐಸಿಸಿ ಟೂರ್ನಿಯನ್ನು ಆಯೋಜಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಆತಿಥೇಯ ರಾಷ್ಟ್ರ ಪಾಕಿಸ್ತಾನ ಗುಂಪು ಹಂತದಲ್ಲೇ ಹೊರಬಿದ್ದಿರುವುದು ಸಾಕಷ್ಟು ಟೀಕೆಗಳನ್ನು ಎದುರಿಸುವಂತಾಗಿದೆ.

Pakistan vs Bangladesh struggle to open winning account in Champions Trophy 2025

ಪಾಕಿಸ್ತಾನ ತಂಡಕ್ಕೆ ಸ್ಟಾರ್ ಬ್ಯಾಟರ್‌ಗಳಾದ ಬಾಬರ್ ಅಜಮ್ ಮತ್ತು ನಾಯಕ ಮೊಹಮ್ಮದ್ ರಿಜ್ವಾನ್ ಅವರಿಂದ ಯಾವುದೇ ಉಪಯುಕ್ತ ಕೊಡುಗೆ ಸಿಕ್ಕಿಲ್ಲ. ಇಬ್ಬರು ನಿಧನಗತಿ ಬ್ಯಾಟಿಂಗ್ ಮೂಲಕ ರನ್ ಗಳಿಸಿದ್ದು, ತಂಡದ ಸೋಲಿಗೆ ಇದು ಒಂದು ಕಾರಣವಾಗಿದೆ. ಬಾಂಗ್ಲಾದೇಶ ತಂಡದಲ್ಲಿಯೂ ಸಂಘಟಿತ ಪ್ರದರ್ಶನ ಕಾಣಿಸಿಲ್ಲ. ಹೀಗಾಗಿ ಬಾಂಗ್ಲಾದೇಶ ತಂಡ ಸತತ ಎರಡು ಪಂದ್ಯಗಳಲ್ಲಿ ಸೋಲನ್ನು ಎದುರಿಸಿದೆ.

ಹೆಡ್ ಟು ಹೆಡ್‌

ಪಾಕಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳ ನಡುವೆ 39 ಏಕದಿನ ಪಂದ್ಯಗಳು ನಡೆದಿವೆ. ಪಾಕಿಸ್ತಾನ 34 ಪಂದ್ಯಗಳನ್ನು ಗೆದ್ದಿದ್ದರೆ, ಬಾಂಗ್ಲಾದೇಶ ಕೇವಲ ಐದು ಪಂದ್ಯಗಳಲ್ಲಿ ಮಾತ್ರ ಜಯ ಗಳಿಸಿದೆ. 2015 ರ ದ್ವಿಪಕ್ಷೀಯ ಸರಣಿಯಲ್ಲಿ ಪಾಕಿಸ್ತಾನದ ವಿರುದ್ಧ ಬಾಂಗ್ಲಾದೇಶ ಕೊನೆ ಬಾರಿಗೆ ಏಕದಿನ ಸರಣಿ ಗೆಲುವು ಸಾಧಿಸಿದೆ.

ಉಭಯ ತಂಡಗಳು

ಪಾಕಿಸ್ತಾನ: ಮೊಹಮ್ಮದ್ ರಿಜ್ವಾನ್ (ಸಿ), ಬಾಬರ್ ಅಜಮ್, ಇಮಾಮ್-ಉಲ್-ಹಕ್, ಕಮ್ರಾನ್ ಗುಲಾಮ್, ಸೌದ್ ಶಕೀಲ್, ತಯ್ಯಬ್ ತಾಹಿರ್, ಫಹೀಮ್ ಅಶ್ರಫ್, ಖುಷ್ದಿಲ್ ಶಾ, ಸಲ್ಮಾನ್ ಅಲಿ ಅಘಾ, ಉಸ್ಮಾನ್ ಖಾನ್, ಅಬ್ರಾರ್ ಅಹ್ಮದ್, ಹ್ಯಾರಿಸ್ ರೌಫ್, ಮೊಹಮ್ಮದ್ ಹಸ್ನೈನ್, ನಸೀಮ್ ಶಾಫ್ರಿ.

ಬಾಂಗ್ಲಾದೇಶ: ನಜ್ಮುಲ್ ಹೊಸೈನ್ ಶಾಂಟೊ (ಸಿ), ಸೌಮ್ಯ ಸರ್ಕಾರ್, ತಂಝಿದ್ ಹಸನ್, ತೌಹಿದ್ ಹೃದಯೊಯ್, ಮುಶ್ಫಿಕರ್ ರಹೀಮ್, ಎಂಡಿ ಮಹ್ಮದ್ ಉಲ್ಲಾ, ಜೇಕರ್ ಅಲಿ ಅನಿಕ್, ಮೆಹಿದಿ ಹಸನ್ ಮಿರಾಜ್, ರಿಶಾದ್ ಹೊಸೈನ್, ತಸ್ಕಿನ್ ಅಹ್ಮದ್, ಮುಸ್ತಫಿಜುರ್ ರಹಮಾನ್, ತಸ್ಕಿನ್ ಅಹ್ಮದ್, ಪರ್ವೆಜ್ ನಸ್ಸಾನ್, ತಸ್ಕಿನ್ ಎ. ಸಾಕಿಬ್, ನಹಿದ್ ರಾಣಾ.

Story first published: Thursday, February 27, 2025, 7:01 [IST]
Other articles published on Feb 27, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+