ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

Pak vs Eng 1st Test : ಟೆಸ್ಟ್‌ನಲ್ಲಿ ಟಿ20 ಕ್ರಿಕೆಟ್ ಆಡಿದ ಆಂಗ್ಲರು: ನಾಲ್ಕು ಶತಕ, ಪಾಕ್ ಬೌಲಿಂಗ್ ದಾಳಿ ಧ್ವಂಸ

Pakistan vs England, 1st Test, Day 1, England scored 507 runs in 1st day of test, Highlights

ಪಾಕಿಸ್ತಾನ ನೆಲದಲ್ಲಿ 17 ವರ್ಷಗಳ ಬಳಿಕ ಟೆಸ್ಟ ಸರಣಿಯನ್ನು ಆಡುತ್ತಿರುವ ಇಂಗ್ಲೆಂಡ್ ಮೊದಲ ದಿನದಾಟದಲ್ಲಿಯೇ ಕ್ರಿಕೆಟ್ ಅಭಿಮಾನಿಗಲು ಊಹಿಸಲು ಸಾಧ್ಯವಾಗದ ರೀತಿಯ ಪ್ರದರ್ಶನ ನೀಡಿದೆ. ಆರಂಭದಿಂದಲೇ ಸ್ಪೋಟಕ ಪ್ರದರ್ಶನ ನೀಡಿದ ಇಂಗ್ಲೆಂಡ್ ತಂಡ ಅಂತಿಮ ಹಂತದವರೆಗೂ ಒಂದೇ ರೀತಿಯಾಗಿ ರನ್‌ಗಳಿಸುತ್ತಾ ಸಾಗಿದೆ. ಇದು ನಿಜಕ್ಕೂ ಟೆಸ್ಟ್ ಕ್ರಿಕೆಟಾ ಎಂದು ಅನುಮಾನ ಮೂಡುವಂತೆ ಬ್ಯಾಟಿಂಗ್ ನಡೆಸಿರುವ ಇಂಗ್ಲೆಂಡ್ ಪಡೆ ಮೊದಲ ದಿನದಲ್ಲಿಯೇ ಬರೊಬ್ಬರಿ 506 ರನ್‌ಗಳಿಸಿದೆ. ಅದು ಕೂಡ ಮಂದ ಬೆಳಕಿನ ಕಾರಣ ಮೊದಲ ದಿನದಾಟ 15 ಓವರ್‌ಗಳೀಗೆ ಮುನ್ನವೇ ಅಂತ್ಯಗೊಳಿಸಲಾಯಿತು.

ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್ ತಂಡ ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡಿದೆ. ಆರಂಭಿಕರಾದ ಜಾಕ್ ಕ್ರಾವ್ಲೆ ಹಾಗೂ ಬೆನ್ ಡಕ್ಕೆಟ್ ಜೋಡಿ ಮೊದಲ ವಿಕೆಟ್‌ಗೆ 233 ರನ್‌ಗಳನ್ನು ಗಳಿಸಿದರು. ಈ ಇಬ್ಬರು ಕೂಡ ಶತಕ ಸಿಡಿಸಿ ವಿಕೆಟ್ ಕಳೆದುಕೊಂಡರು. ಕ್ರಾವ್ಲೆ 122 ರನ್‌ಗಳಿಸಿದರೆ ಡಕ್ಕೆಟ್ 107 ರನ್‌ಗಳಿಸಿದರು. ಬಳಿಕ ಬಂದ ಒಲ್ಲೀ ಪೋಪ್ ಕೂಡ 108 ರನ್‌ಗಳನ್ನು ಸಿಡಿಸಿದರು. ಜೋ ರೂಟ್ ಒಬ್ಬರೇ 23ರನ್‌ಗಳಿಸಿ ಔಟಾಗುವ ಮೂಲಕ ನಿರಾಸೆ ಅನುಭವಿಸಿದರು.

ರಿಷಭ್ ಮ್ಯಾಚ್ ವಿನ್ನರ್, ಸಂಜು ಸ್ಯಾಮ್ಸನ್ ಕಾಯಲೇ ಬೇಕು: ಶಿಖರ್ ಧವನ್ರಿಷಭ್ ಮ್ಯಾಚ್ ವಿನ್ನರ್, ಸಂಜು ಸ್ಯಾಮ್ಸನ್ ಕಾಯಲೇ ಬೇಕು: ಶಿಖರ್ ಧವನ್

ಬಳಿಕ ಬಂದ ಹ್ಯಾರಿ ಬ್ರೂಕ್ ಕೂಡ ಸ್ಪೋಟಕ ಬ್ಯಾಟಿಂಗ್ ನಡೆಸಿದ್ದು 101 ರನ್‌ಗಳಿಸಿ ಅಜೇಯವಾಗುಳಿದಿದ್ದಾರೆ. ಬೆನ್ ಸ್ಟೋಕ್ಸ್ ಕೂಡ ಕ್ರೀಸ್‌ನಲ್ಲಿದ್ದು 15 ಎಸೆತಗಳಲ್ಲಿ 34 ರನ್ ಸಿಡಿಸಿ ಎರಡನೇ ದಿನಕ್ಕೆ ಆಟವನ್ನು ಕಾಯ್ದಿರಿಸಿದ್ದಾರೆ. ಹೀಗಾಗಿ ಮೊದಲ ದಿನದಾಟದಲ್ಲಿ ಇಂಗ್ಲೆಂಡ್ ತಂಡ ಕೇವಲ 4 ವಿಕೆಟ್ ಕಳೆದುಕೊಂಡಿದ್ದು 506 ರನ್‌ಗಳನ್ನು ಗಳಿಸಿದೆ. ಇಂಗ್ಲೆಂಡ್ ತಂಡದ ಪರವಾಗಿ ಬರೊಬ್ಬರಿ ನಾಲ್ವರು ಆಟಗಾರರು ಮೊದಲ ದಿನೇ ಶತಕ ಸಿಡಿಸಿ ಕ್ರಿಕೆಟ್ ಅಭಿಮಾನಿಗಳು ನಿಬ್ಬೆರಗಾಗುವಂತೆ ಮಾಡಿದ್ದಾರೆ

ಪಾಕಿಸ್ತಾನ ಆಡುವ ಬಳಗ: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಅಜರ್ ಅಲಿ, ಬಾಬರ್ ಅಜಮ್ (ನಾಯಕ), ಸೌದ್ ಶಕೀಲ್, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಅಘಾ ಸಲ್ಮಾನ್, ನಸೀಮ್ ಶಾ, ಹಾರಿಸ್ ರೌಫ್, ಮೊಹಮ್ಮದ್ ಅಲಿ, ಜಾಹಿದ್ ಮಹಮೂದ್
ಬೆಂಚ್: ಶಾನ್ ಮಸೂದ್, ಸರ್ಫರಾಜ್ ಅಹ್ಮದ್, ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ನೌಮನ್ ಅಲಿ, ಫಹೀಮ್ ಅಶ್ರಫ್, ಅಬ್ರಾರ್ ಅಹ್ಮದ್

ಫಿಫಾ ವಿಶ್ವಕಪ್: ಪೊಲಾಂಡ್ ವಿರುದ್ಧ 2-0 ಅಂತರದಿಂದ ಗೆದ್ದು ಬೀಗಿದ ಮೆಸ್ಸಿ ಪಡೆಫಿಫಾ ವಿಶ್ವಕಪ್: ಪೊಲಾಂಡ್ ವಿರುದ್ಧ 2-0 ಅಂತರದಿಂದ ಗೆದ್ದು ಬೀಗಿದ ಮೆಸ್ಸಿ ಪಡೆ

ಇಂಗ್ಲೆಂಡ್ ಆಡುವ ಬಳಗ: ಝಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್ (ವಿಕೆಟ್ ಕೀಪರ್), ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಲಿಯಾಮ್ ಲಿವಿಂಗ್ಸ್ಟೋನ್, ವಿಲ್ ಜ್ಯಾಕ್ಸ್, ಜ್ಯಾಕ್ ಲೀಚ್, ಆಲಿ ರಾಬಿನ್ಸನ್, ಜೇಮ್ಸ್ ಆಂಡರ್ಸನ್
ಬೆಂಚ್: ಕೀಟನ್ ಜೆನ್ನಿಂಗ್ಸ್, ಬೆನ್ ಫೋಕ್ಸ್, ಜೇಮೀ ಓವರ್ಟನ್, ರೆಹಾನ್ ಅಹ್ಮದ್, ಮಾರ್ಕ್ ವುಡ್

Story first published: Thursday, December 1, 2022, 17:58 [IST]
Other articles published on Dec 1, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X