For Quick Alerts
ALLOW NOTIFICATIONS  
For Daily Alerts
 

ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಸೋಲಿಗೆ ಕಾರಣ ನೀಡಿದ ಪಾಕಿಸ್ತಾನ ನಾಯಕ ಬಾಬರ್ ಅಜಂ

Pakistan vs England: Babar Azam reaction after Multan Test defeat against England

ಪಾಕಿಸ್ತಾನ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯ ನಾಲ್ಕನೇ ದಿನಕ್ಕೆ ಅಂತ್ಯವಾಗಿದೆ. ಈ ಪಂದ್ಯದಲ್ಲಿ ಪಾಕಿಸ್ತಾನ ತಂಡ ತೀಓವ್ರ ಪೈಪೋಟಿಯನ್ನು ನೀಡಿತಾದರೂ ಅಂತಿಮ ಹಂತದಲ್ಲಿ ಇಂಗ್ಲೆಂಡ್ ರೋಚಕ ಗೆಲುವು ಸಾಧಿಸಿ ಸರಣಿ ವಶಕ್ಕೆ ಪಡೆದುಕೊಂಡಿದೆ. ಈ ಮೂಲಕ ಐತಿಹಾಸಿಕ ಸರಣಿ ಗೆಲುವು ಸಾಧಿಸಿದೆ ಬೆನ್ ಸ್ಟೋಕ್ಸ್ ನೇತೃತ್ವದ ಇಂಗ್ಲೆಂಡ್ ತಂಡ. ಈ ಸೋಲಿನ ಬಳಿಕ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ ಮಾತನಾಡಿದ್ದು ಬ್ಯಾಟಿಂಗ್ ವಿಭಾಗದ ವೈಫಲ್ಯಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎರಡನೇ ಟೆಸ್ಟ್‌ನಲ್ಲಿ ಪಾಕಿಸ್ತಾನ ತಂಡಕ್ಕೆ ಗೆಲ್ಲುವ ಉತ್ತಮ ಅವಕಾಶವಿತ್ತು. ನಾಲ್ಕನೇ ದಿನದಾಟದಲ್ಲಿ ಪಾಕಿಸ್ತಾನ 6 ವಿಕೆಟ್‌ಗಳಿಂದ 157 ರನ್‌ಗಳನ್ನು ಗಳಿಸುವ ಸವಾಲು ಪಡೆದುಕೊಂಡಿತ್ತು. ಒಂದು ಹಂತದಲ್ಲಿ ಗೆಲುವಿನ ಭರವಸೆ ಮೂಡಿಸಿತ್ತಾದರೂ ಮತ್ತೊಮ್ಮೆ ಹಠಾತ್ ಕುಸಿತಕ್ಕೆ ಒಳಗಾಗಿ 26 ರನ್‌ಗಳ ಅಂತರದಿಂದ ಸೋಲು ಅನುಭವಿಸಿದೆ.

ಪಂದ್ಯದ ಮುಕ್ತಾಯದ ಬಳಿಕ ಮಾತನಾಡಿದ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ ಪಾಕಿಸ್ತಾನ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ ನೀಡಿದ ಕಳಪೆ ಬ್ಯಾಟಿಂಗ್ ಪ್ರದರ್ಶನದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. "ಮೊದಲ ಇನ್ನಿಂಗ್ಸ್‌ನಲ್ಲಿ ನಾವು ನಿರೀಕ್ಷಿತ ಮಟ್ಟದ ಬ್ಯಾಟಿಂಗ್ ಪ್ರದರ್ಶನ ನೀಡಲಿಲ್ಲ. ಕೆಲವೊಂದು ವಿಕೆಟ್‌ಗಳನ್ನು ಸುಲಭವಾಗಿ ಕೈಚೆಲ್ಲಿದೆವು. ಆದರೆ ಎರಡನೇ ಇನ್ನಿಂಗ್ಸ್‌ಮಲ್ಲಿ ನಾವು ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲಿಯೂ ಹೋರಾಟದ ಪ್ರದರ್ಶನ ನೀಡಿದೆವು. ಆದರೆ ಅದು ಸಾಕಾಗಲಿಲ್ಲ. ಕೆಲ ಉತ್ತಮ ಜೊತೆಯಾಟಗಳು ಬಂದವು. ಆದರೆ ಅಂತಿಮವಾಗಿ ನಾವು ತಂಡವಾಗಿ ಪ್ರದರ್ಶನ ನೀಡಲು ವಿಫಲವಾಗಿ ಸೋಲು ಅನುಭವಿಸಿದ್ದೇವೆ" ಎಂದಿದ್ದಾರೆ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ.

ಇನ್ನು ಈ ಸಂದರ್ಭದಲ್ಲಿ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ ಯುವ ಆಟಗಾರ ಅಬ್ರಾರ್ ಅಹ್ಮದ್ ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಈ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ದಾಳಿ ನಡೆಸಿದ ಅಬ್ರಾರ್ ಒಟ್ಟು 11 ವಿಕೆಟ್ ಪಡೆದು ಇಂಗ್ಲೆಂಡ್ ತಂಡಕ್ಕೆ ಆಘಾತ ನೀಡಿದ್ದರು. ಈ ಮೂಲಕ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ಸ್ಮರಣೀಯ ಪದಾರ್ಪಣೆ ಮಾಡಿದ್ದಾರೆ.

ಈ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್ ತಂಡ 281 ರನ್‌ಗಳನ್ನು ಗಳಿಸಿ ಆಲೌಟ್ ಆಗಿತ್ತು. ಇದಕ್ಕೆ ಪ್ರತಿಯಾಗಿ ಬ್ಯಾಟಿಂಗ್ ನಡೆಸಿದ ಪಾಕಿಸ್ತಾನ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ ಗಳಿಸಿದ್ದು 202 ರನ್ ಮಾತ್ರ. ನಂತರ ಎರಡೇ ಇನ್ನಿಂಗ್ಸ್‌ನಲ್ಲಿ 275 ರನ್‌ಗಳಿಗೆ ಇಂಗ್ಲೆಂಡ್ ಆಲೌಟ್ ಆಗಿತ್ತು. ಹೀಗಾಗಿ ಪಾಕಿಸ್ತಾನ ಅಂತಿಮ ಇನ್ನಿಂಗ್ಸ್‌ನಲ್ಲಿ 354 ರನ್‌ಗಳನ್ನು ಗಳಿಸುವ ಸವಾಲು ಸ್ವೀಕರಿಸಿತ್ತು. ಆದರೆ ಪಾಕಿಸ್ತಾನ 328 ರನ್‌ಗಳಿಸಿ ಆಲೌಟ್ ಆಗುವ ಊಲಕ ಸೋಲು ಅನುಭವಿಸಿದೆ.

ಪಾಕಿಸ್ತಾನ ಆಡುವ ಬಳಗ: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಅಘಾ ಸಲ್ಮಾನ್, ಸೌದ್ ಶಕೀಲ್, ಮೊಹಮ್ಮದ್ ನವಾಜ್, ಫಹೀಮ್ ಅಶ್ರಫ್, ಜಾಹಿದ್ ಮಹಮೂದ್, ಮೊಹಮ್ಮದ್ ಅಲಿ, ಅಬ್ರಾರ್ ಅಹ್ಮದ್ ಬೆಂಚ್ ಅಜರ್ ಅಲಿ, ನಸೀಮ್ ಶಾ, ಸರ್ಫರಾಜ್ ಅಹ್ಮದ್, ಶಾನ್ ಮಸೂದ್, ಮೊಹಮ್ಮದ್ ವಾಸಿಂ ಜೂನಿಯರ್, ನೌಮನ್ ಅಲಿ

ಇಂಗ್ಲೆಂಡ್ ಆಡುವ ಬಳಗ: ಝಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್ (ವಿಕೆಟ್ ಕೀಪರ್), ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ವಿಲ್ ಜ್ಯಾಕ್ಸ್, ಆಲಿ ರಾಬಿನ್ಸನ್, ಜ್ಯಾಕ್ ಲೀಚ್, ಮಾರ್ಕ್ ವುಡ್, ಜೇಮ್ಸ್ ಆಂಡರ್ಸನ್
ಬೆಂಚ್: ಕೀಟನ್ ಜೆನ್ನಿಂಗ್ಸ್, ರೆಹಾನ್ ಅಹ್ಮದ್, ಬೆನ್ ಫೋಕ್ಸ್, ಜೇಮೀ ಓವರ್ಟನ್

Story first published: Monday, December 12, 2022, 17:57 [IST]
Other articles published on Dec 12, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+