ಪಾಕಿಸ್ತಾನ vs ನ್ಯೂಜಿಲೆಂಡ್: 2ನೇ ಏಕದಿನ ಟಾಸ್ ರಿಪೋರ್ಟ್, Live ಸ್ಕೋರ್ ಹಾಗೂ ಆಡುವ ಬಳಗ

ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಎರಡನೇ ಪಂದ್ಯ ಆರಂಭವಾಗಿದೆ. ಈ ಪಂದ್ಯದಲ್ಲಿ ಪ್ರವಾಸಿ ನ್ಯೂಜಿಲೆಂಡ್ ತಂಡ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಆತಿಥೇಯ ಪಾಕಿಸ್ತಾನ ತಂಡ ಆರಂಭದಲ್ಲಿ ಬೌಲಿಂಗ್ ನಡೆಸುವ ಸವಾಲು ಸ್ವೀಕರಿಸಿದ್ದಾರೆ.

ಈ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ ತಂಡ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಕಣಕ್ಕಿಳಿದಿದ್ದು ಗೆಲುವಿನ ಸಂಯೋಜನೆಯೊಂದಿಗೆ ಮತ್ತೆ ಕಣಕ್ಕಿಳಿದಿದೆ. ಆದರೆ ನ್ಯೂಜಿಲೆಂಡ್ ತಂಡ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಕಳೆದ ಪಂದ್ಯದಲ್ಲಿ ಆಡಿದ್ದ ಹೆನ್ರಿ ಶಿಪ್ಲಿ ಈ ಪಂದ್ಯದಲ್ಲಿ ಆಡುವ ಬಳಗದಿಂದ ಹೊರಬಿದ್ದಿದ್ದು ಇಶ್ ಸೋಧಿಗೆ ಅವಕಾಶ ದೊರೆತಿದೆ.

Live ಸ್ಕೋರ್‌ ಹೀಗಿದೆ

1
55721

ಇನ್ನು ಈ ಸರಣಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ಭರ್ಜರಿ ಪ್ರದರ್ಶನ ನೀಡಿ ಗೆಲುವು ಸಾಧಿಸಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗದಲ್ಲಿಯೂ ಪಾಕಿಸ್ತಾನ ಪ್ರವಾಸಿ ಕಿವೀಸ್ ವಿರುದ್ಧ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದ್ದು 6 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸಿದೆ. ಹೀಗಾಗಿ ಪಾಕ್ ಸರಣಿ ಗೆಲುವಿನ ಮೇಲೆ ಕಣ್ಣಿಟ್ಟಿದ್ದರೆ ನ್ಯೂಜಿಲೆಂಡ್ ತಂಡ ಸರಣಿ ಸಮಬಲಗೊಳಿಸುವ ಪ್ರಯತ್ನದಲ್ಲಿದೆ.

ಪಾಕಿಸ್ತಾನ ಆಡುವ ಬಳಗ: ಫಖರ್ ಜಮಾನ್, ಇಮಾಮ್-ಉಲ್-ಹಕ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಹಾರಿಸ್ ಸೊಹೈಲ್, ಅಘಾ ಸಲ್ಮಾನ್, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಮ್ ಶಾ, ಹರಿಸ್ ರೌಫ್
ಬೆಂಚ್: ಶಾನ್ ಮಸೂದ್, ಕಮ್ರಾನ್ ಗುಲಾಮ್, ಶಹನವಾಜ್ ದಹಾನಿ, ತಯ್ಯಬ್ ತಾಹಿರ್, ಮೊಹಮ್ಮದ್ ಹಸ್ನೇನ್

ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್ (ನಾಯಕ), ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ಲಾಕಿ ಫರ್ಗುಸನ್
ಬೆಂಚ್: ಬ್ಲೇರ್ ಟಿಕ್ನರ್, ಹೆನ್ರಿ ನಿಕೋಲ್ಸ್, ಹೆನ್ರಿ ಶಿಪ್ಲಿ, ಜಾಕೋಬ್ ಡಫಿ

For Quick Alerts
ALLOW NOTIFICATIONS
For Daily Alerts
Story first published: Wednesday, January 11, 2023, 14:54 [IST]
Other articles published on Jan 11, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X