For Quick Alerts
ALLOW NOTIFICATIONS  
For Daily Alerts
 

ಪಾಕಿಸ್ತಾನ vs ನ್ಯೂಜಿಲೆಂಡ್: ಅಂತಿಮ ಏಕದಿನ ಪಂದ್ಯ, ಟಾಸ್ ರಿಪೋರ್ಟ್, Live ಸ್ಕೋರ್ ಹಾಗೂ ಆಡುವ ಬಳಗ

Pakistan vs New Zealand ODI series 3rd match, Toss report, playing XI and Live score, Karachi

ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಅಂತಿಮ ಪಂದ್ಯ ಆರಂಭವಾಗಿದೆ. ಈ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ ತಂಡ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಪ್ರವಾಸಿ ನ್ಯೂಜಿಲೆಂಡ್ ತಂಡ ಆರಂಭದಲ್ಲಿ ಬೌಲಿಂಗ್ ನಡೆಸುವ ಸವಾಲು ಸ್ವೀಕರಿಸಿದೆ. ಈ ಪಂದ್ಯ ಕೂಡ ಕರಾಚಿಯ ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ.

ಸರಣಿಯ ಮೂರನೇ ಹಾಗೂ ನಿರ್ಣಾಯಕ ಪಂದ್ಯ ಇದಾಗಿದ್ದು ಈ ಪಂದ್ಯದಲ್ಲಿ ಪಾಕಿಸ್ತಾನ ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿದಿದೆ. ಶಾನ್ ಮಸೂದ್ ಹಾಗೂ ಮೊಹಮ್ಮದ್ ಹಸ್ನೈನ್ ಆಡುವ ಬಳಗಕ್ಕೆ ವಾಪಾಸಾಗಿದ್ದಾರೆ. ಇಮಾಮ್ ಉಲ್ ಹಕ್ ಹಾಗೂ ನಸೀಮ್ ಶಾ ಆಡುವ ಬಳಗದಿಂದ ಹೊರಗುಳಿದಿದ್ದಾರೆ. ಇನ್ನು ನ್ಯೂಜಿಲೆಂಡ್ ತಂಡ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಈ ಪಂದ್ಯದಲ್ಲಿ ಕಣಕ್ಕಿಳಿದಿದೆ.

Live ಸ್ಕೋರ್‌ ಹೀಗಿದೆ

1
55722

ಇನ್ನು ಈ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಎರಡು ತಂಡಗಳು ಕೂಡ ತಲಾ ಒಂದು ಗೆಲುವು ಸಾಧಿಸಿದೆ. ಮೊದಲ ಪಂದ್ಯದಲ್ಲಿ ಪಾಕಿಸ್ತಾನ 6 ವಿಕೆಟ್‌ಗಳ ಅಂತರದ ಗೆಲುವು ಸಾಧಿಸಿದ್ದರೆ 2ನೇ ಪಂದ್ಯದಲ್ಲಿ ನ್ಯೂಜಿಲೆಂಡ್ ಭರ್ಜರಿ 79 ರನ್‌ಗಳ ಅಂತರದ ಗೆಲುವು ಸಾಧಿಸಿತ್ತು. ಹೀಗಾಗಿ ಅಂತಿಮ ಸರಣಿ ಸಾಕಷ್ಟು ಕುತೂಹಲ ಮೂಡಿಸಿದೆ.

ಇತ್ತಂಡಗಳ ಆಡುವ ಬಳಗ ಹೀಗಿದೆ

ಪಾಕಿಸ್ತಾನ ಆಡುವ ಬಳಗ: ಫಖರ್ ಜಮಾನ್, ಶಾನ್ ಮಸೂದ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಹಾರಿಸ್ ಸೊಹೈಲ್, ಅಘಾ ಸಲ್ಮಾನ್, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಮೊಹಮ್ಮದ್ ವಾಸಿಮ್ ಜೂನಿಯರ್, ಮೊಹಮ್ಮದ್ ಹಸ್ನೇನ್, ಹರಿಸ್ ರೌಫ್

ಬೆಂಚ್: ಇಮಾಮ್-ಉಲ್-ಹಕ್. ಕಮ್ರಾನ್ ಗುಲಾಮ್, ಶಹನವಾಜ್ ದಹಾನಿ, ತಯ್ಯಬ್ ತಾಹಿರ್, ನಸೀಮ್ ಶಾ
ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್ (ನಾಯಕ), ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ಲಾಕಿ ಫರ್ಗುಸನ್
ಬೆಂಚ್: ಬ್ಲೇರ್ ಟಿಕ್ನರ್, ಹೆನ್ರಿ ನಿಕೋಲ್ಸ್, ಹೆನ್ರಿ ಶಿಪ್ಲಿ, ಜಾಕೋಬ್ ಡಫಿ

Story first published: Friday, January 13, 2023, 14:50 [IST]
Other articles published on Jan 13, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+