ಪಾಕಿಸ್ತಾನ vs ವೆಸ್ಟ್ ಇಂಡೀಸ್: ದ್ವಿತೀಯ ಟೆಸ್ಟ್, Live ಸ್ಕೋರ್, ಆಡುವ ಬಳಗ

ಪಾಕಿಸ್ತಾನ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯ ಶುಕ್ರವಾರ ಆರಂಭವಾಗಿದೆ. ಜಮೈಕಾದ ಕಿಂಗ್‌ಸ್ಟನ್‌ನ ಸಬೀನಾ ಪಾರ್ಕ್‌ನಲ್ಲಿ ಈ ಪಂದ್ಯ ನಡೆಯುತ್ತಿದ್ದು ಟಾಸ್ ಗೆದ್ದಿರುವ ವೆಸ್ಟ್ ಇಂಡೀಸ್ ಪ್ರವಾಸಿ ಪಾಕಿಸ್ತಾನ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ. ಆದರೆ ಪಾಕಿಸ್ತಾನ ತಂಡಕ್ಕೆ ಆರಂಭದಲ್ಲಿಯೇ ಆಘಾತ ಎದುರಾಗಿದ್ದು ಆರಂಭದಲ್ಲಿಯೇ ತನ್ನ ಮೊದಲ ಮೂರು ವಿಕೆಟ್‌ಗಳನ್ನು ಕಳೆದುಕೊಂಡಿದ್ದು ಸಂಕಷ್ಟದಲ್ಲಿದೆ.

ಇನ್ನು ಈ ಪಂದ್ಯದಲ್ಲಿ ಎರಡು ತಂಡಗಳು ಕೂಡ ತಲಾ ಒಂದೊಂದು ಬದಲಾವಣೆಯನ್ನು ಮಾಡಿಕೊಂಡಿದೆ. ವೆಸ್ಟ್ ಇಂಡೀಸ್ ತಂಡದಲ್ಲಿ ಮೊದಲ ಪಂದ್ಯದಲ್ಲಿ ಪರಿಣಾಮಕಾರಿಯಾಗಿ ಪರಿಣಮಿಸದ ಜೋಮೆಲ್ ವಾರಿಕನ್ ಬದಲಿಗೆ ಅಲ್ಜರಿ ಜೋಸೆಫ್ ಆಡುವ ಬಳಗದಲ್ಲಿ ಅವಕಾಶ ಪಡೆದಿದ್ದಾರೆ. ಪಾಕಿಸ್ತಾನ ತಂಡದಲ್ಲಿ ಒಂದು ಬದಲಾವಣೆ ಮಾಡಿಕೊಂಡಿದ್ದು ಯಾಸಿರ್ ಶಾ ಬದಲಿಗೆ ನೌಮನ್ ಅಲಿಯನ್ನು ಆಡುವ ಬಳಗಕ್ಕೆ ಸೇರ್ಪಡೆಗೊಳಿಸುವ ಮೂಲಕ ಸ್ಪಿನ್ ವಿಭಾಗವನ್ನು ಬಲಿಷ್ಠಗೊಳಿಸುವ ಪ್ರಯತ್ನ ಮಾಡಲಾಗಿದೆ.

Live ಸ್ಕೋರ್ ಮಾಹಿತಿ ಇಲ್ಲಿದೆ

1
51071

ಎರಡು ಟೆಸ್ಟ್ ಪಂದ್ಯಗಳ ಈ ಸರಣಿಯಲ್ಲಿ ಪಾಕಿಸ್ತಾನ ಮೊದಲ ಪಂದ್ಯವನ್ನು ಆಘಾತಕಾರಿ ರೀತಿಯಲ್ಲಿ ಸೋಲು ಕಂಡಿತ್ತು. ರೋಮಾಂಚನಕಾರಿಯಾಗಿ ನಡೆದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಕೇವಲ ಒಂದು ವಿಕೆಟ್‌ನಿಂದ ಗೆದ್ದುಕೊಂಡಿತ್ತು. ಈ ಮೂಲಕ ಎರಡು ಪಮದ್ಯಗಳ ಸರಣಿಯಲ್ಲಿ ವೆಸ್ಟ್ ಇಂಡೀಸ್ ತಂಡ ಈಗ 1-0 ಅಂತರದಿಂದ ಮುನ್ನಡೆಯನ್ನು ಸಾಧಿಸಿದೆ. ಹೀಗಾಗಿ ಎರಡನೇ ಪಂದ್ಯದಲ್ಲಿ ಪಾಕಿಸ್ತಾನ ಗೆದ್ದರೆ ಮಾತ್ರ ಸರಣಿಯನ್ನು ಸಮಬಲಗೊಳಿಸಲಿದೆ. ಇಲ್ಲವಾದಲ್ಲಿ ಈ ಸರಣಿ ವೆಸ್ಟ್ ಇಂಡೀಸ್ ಪಾಲಾಗಲಿದೆ.

ವೆಸ್ಟ್ ಇಂಡೀಸ್ ಪ್ಲೇಯಿಂಗ್ ಇಲೆವೆನ್ : ಕ್ರೈಗ್ ಬ್ರಾತ್‌ವೈಟ್ (ನಾಯಕ), ಕೀರನ್ ಪೋವೆಲ್, ಎನ್‌ಕ್ರುಮಾ ಬೋನರ್, ರೋಸ್ಟನ್ ಚೇಸ್, ಜೆರ್ಮೈನ್ ಬ್ಲ್ಯಾಕ್‌ವುಡ್, ಕೈಲ್ ಮೇಯರ್ಸ್, ಜೇಸನ್ ಹೋಲ್ಡರ್, ಜೋಶುವಾ ಸಿಲ್ವಾ (ವಿಕೆಟ್ ಕೀಪರ್), ಅಲ್ಜಾರಿ ಜೋಸೆಫ್, ಕೆಮಾರ್ ರೋಚ್, ಜೇಡೆನ್ ಸೀಲ್ಸ್

ಪಾಕಿಸ್ತಾನ ಪ್ಲೇಯಿಂಗ್ ಇಲೆವೆನ್: ಇಮ್ರಾನ್ ಬಟ್, ಅಬಿದ್ ಅಲಿ, ಅಜರ್ ಅಲಿ, ಬಾಬರ್ ಅಜಮ್ (ನಾಯಕ), ಫವಾದ್ ಆಲಂ, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಫಹೀಮ್ ಅಶ್ರಫ್, ನೌಮಾನ್ ಅಲಿ, ಹಸನ್ ಅಲಿ, ಶಹೀನ್ ಅಫ್ರಿದಿ, ಮೊಹಮ್ಮದ್ ಅಬ್ಬಾಸ್

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 5 - October 19 2021, 03:30 PM
ಸ್ಕಾಟ್ಲೆಂಡ್
ಪಪುವಾ ನ್ಯೂ ಗಿನಿವಾ
Predict Now

For Quick Alerts
ALLOW NOTIFICATIONS
For Daily Alerts
Story first published: Friday, August 20, 2021, 22:12 [IST]
Other articles published on Aug 20, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X