For Quick Alerts
ALLOW NOTIFICATIONS  
For Daily Alerts
 

ಪಾಕ್ vs ವೆಸ್ಟ್ಇಂಡೀಸ್: 2ನೇ ಟಿ20 ಪಂದ್ಯದಲ್ಲೂ ಮುಗ್ಗರಿಸಿರುವ ವಿಂಡೀಸ್; ಸರಣಿ ಪಾಕ್ ವಶಕ್ಕೆ

Pakistan vs West Indies: Pakistan won against West Indies by 9 runs in second t20

ಇತ್ತೀಚೆಗಷ್ಟೇ ಯುಎಇಯಲ್ಲಿ ಮುಕ್ತಾಯಗೊಂಡ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ಹಂತದಲ್ಲಿ ಸೋಲುವುದರ ಮೂಲಕ ಟೂರ್ನಿಯಿಂದ ಹೊರ ಬಿದ್ದಿದ್ದ ಪಾಕಿಸ್ತಾನ ಟೂರ್ನಿ ಮುಗಿದ ಬೆನ್ನಲ್ಲೇ ಬಾಂಗ್ಲಾದೇಶ ಪ್ರವಾಸವನ್ನು ಕೈಗೊಂಡು 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಬಾಂಗ್ಲಾದೇಶದ ವಿರುದ್ಧ ಸೆಣಸಾಟವನ್ನು ನಡೆಸಿತ್ತು. ಹೀಗೆ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳ ನಡುವೆ ನಡೆದಿದ್ದ ಈ ಸರಣಿಗಳಲ್ಲಿ ಪಾಕಿಸ್ತಾನ ಭರ್ಜರಿ ಜಯ ಸಾಧಿಸುವುದರ ಮೂಲಕ ಎರಡೂ ಸರಣಿಗಳಲ್ಲಿಯೂ ಬಾಂಗ್ಲಾದೇಶಕ್ಕೆ ವೈಟ್ ವಾಷ್ ಬಳಿದಿತ್ತು.

ಹೀಗೆ ಬಾಂಗ್ಲಾದೇಶದ ವಿರುದ್ಧ ಟಿ ಟ್ವೆಂಟಿ ಮತ್ತು ಟೆಸ್ಟ್ ಎರಡೂ ಸರಣಿಗಳಲ್ಲಿಯೂ ವೈಟ್ ವಾಷ್ ಸಾಧನೆ ಮಾಡಿದ್ದ ಪಾಕಿಸ್ತಾನ ಇದೀಗ ಕೆರಿಬಿಯನ್ನರ ಮೇಲೂ ಕೂಡ ಜಯದ ಸವಾರಿ ಮಾಡುತ್ತಿದೆ. ಹೌದು, ಬಾಂಗ್ಲಾದೇಶ ವಿರುದ್ಧದ ಸರಣಿ ಮುಕ್ತಾಯವಾದ ಬೆನ್ನಲ್ಲೇ ಪಾಕಿಸ್ತಾನ ಪ್ರವಾಸವನ್ನು ಕೈಗೊಂಡಿರುವ ವೆಸ್ಟ್ ಇಂಡೀಸ್ ವಿರುದ್ಧ ಪಾಕ್ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಮತ್ತು 3 ಪಂದ್ಯಗಳ ಏಕದಿನ ಸರಣಿಗಳಲ್ಲಿ ಸೆಣಸಾಟ ನಡೆಸುತ್ತಿದೆ. ಇತ್ತಂಡಗಳ ನಡುವೆ ಮೊದಲಿಗೆ 3 ಪಂದ್ಯಗಳ ಟ್ವೆಂಟಿ ಸರಣಿ ನಡೆಯುತ್ತಿದ್ದು, ಡಿಸೆಂಬರ್ 13ರಂದು ನಡೆದ ಚೊಚ್ಚಲ ಟಿ ಟ್ವೆಂಟಿ ಪಂದ್ಯದಲ್ಲಿ ಪಾಕಿಸ್ತಾನ ವೆಸ್ಟ್ ಇಂಡೀಸ್ ವಿರುದ್ಧ ಬರೋಬ್ಬರಿ 63 ರನ್‌ಗಳ ಜಯವನ್ನು ಸಾಧಿಸುವುದರ ಮೂಲಕ ಸರಣಿಯಲ್ಲಿ 1-0 ಅಂತರದ ಮುನ್ನಡೆಯನ್ನು ಸಾಧಿಸಿತ್ತು. ಇದೀಗ ಮಾರನೇ ದಿನವೇ ಇತ್ತಂಡಗಳ ನಡುವೆ ದ್ವಿತೀಯ ಟಿ ಟ್ವೆಂಟಿ ಪಂದ್ಯ ನಡೆದಿದ್ದು, ಈ ಪಂದ್ಯದಲ್ಲಿಯೂ ಕೂಡ ಕೆರಿಬಿಯನ್ನರಿಗೆ ಪಾಕಿಸ್ತಾನ ಸೋಲಿನ ರುಚಿಯನ್ನು ತೋರಿಸಿದೆ.

ಕರಾಚಿಯ ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಹೀಗೆ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ಪಾಕಿಸ್ತಾನದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಮಹಮ್ಮದ್ ರಿಜ್ವಾನ್ 38 ಮತ್ತು ನಾಯಕ ಬಾಬರ್ ಅಜಮ್ 7 ರನ್ ಗಳಿಸಿದರು. ಇನ್ನುಳಿದಂತೆ ಹೈದರ್ ಅಲಿ 31, ಇಫ್ತಿಕರ್ ಅಹ್ಮದ್ 32 ಮತ್ತು ಶದಾಬ್ ಖಾನ್ ಅಜೇಯ 28 ರನ್ ಗಳಿಸಿದ್ದು ಬಿಟ್ಟರೆ ತಂಡದ ಉಳಿದ ಯಾವುದೇ ಆಟಗಾರ ಕೂಡ ಎರಡಂಕಿ ಮುಟ್ಟುವ ಪ್ರಯತ್ನವನ್ನೂ ಮಾಡಲಿಲ್ಲ. ಪರಿಣಾಮವಾಗಿ ಪಾಕಿಸ್ತಾನ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 172 ರನ್ ಕಲೆ ಹಾಕುವುದರ ಮೂಲಕ ವೆಸ್ಟ್ ಇಂಡೀಸ್ ತಂಡಕ್ಕೆ ಗೆಲ್ಲಲು 173 ರನ್‌ಗಳ ಪೈಪೋಟಿಯುತ ಗುರಿಯನ್ನು ನೀಡಿತು. ವೆಸ್ಟ್ ಇಂಡೀಸ್ ಪರ ಓಡಿಯನ್ ಸ್ಮಿತ್ 2, ಅಕೈಲ್ ಹುಸೇನ್, ಒಶಾನೆ ಥಾಮಸ್, ರೊಮಾರಿಯೊ ಶೆಫರ್ಡ್ ಮತ್ತು ಹೇಡನ್ ವಾಲ್ಶ್ ತಲಾ 1 ವಿಕೆಟ್ ಪಡೆದರು.

ಇನ್ನು ಪಾಕಿಸ್ತಾನ ನೀಡಿದ 173 ರನ್‌ಗಳ ಗುರಿಯನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡದ ಪರ ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ಬ್ರ್ಯಾಂಡನ್ ಕಿಂಗ್ 43 ಎಸೆತಗಳಲ್ಲಿ 67 ರನ್ ಗಳಿಸುವುದರ ಮೂಲಕ ವೆಸ್ಟ್ ಇಂಡೀಸ್ ತಂಡ ಈ ಪಂದ್ಯದಲ್ಲಿ ರನ್ ಚೇಸ್ ಮಾಡಬಹುದು ಎಂಬ ನಿರೀಕ್ಷೆ ಹುಟ್ಟುಹಾಕಿದರು. ಆದರೆ ಈತನ ಜೊತೆ ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ಶೈ ಹೋಪ್ ಆರಂಭದಲ್ಲಿಯೇ 1 ರನ್ ಗಳಿಸಿ ವಿಕೆಟ್ ಒಪ್ಪಿಸಿದರೆ, ನಂತರ ಬಂದ ಯಾವುದೇ ಆಟಗಾರ ಕೂಡ ಸಾಥ್ ನೀಡಲಿಲ್ಲ. ಇನ್ನು ತಂಡದ ನಾಯಕ ನಿಕೊಲಸ್ ಪೂರನ್ 26 ರನ್ ಗಳಿಸಿದರಾದರೂ 26 ಎಸೆತಗಳನ್ನು ಎದುರಿಸಿದ್ದರು. ಇನ್ನುಳಿದಂತೆ ರೊಮಾರಿಯೊ ಶೆಫರ್ಡ್ ಹೊರತುಪಡಿಸಿ ತಂಡದ ಇನ್ಯಾವುದೇ ಆಟಗಾರ ಕೂಡ ಎರಡಂಕಿ ಮುಟ್ಟುವಲ್ಲಿ ಯಶಸ್ವಿಯಾಗಲಿಲ್ಲ.

ಅಂತಿಮವಾಗಿ ರೊಮಾರಿಯೋ ಶೆಫರ್ಡ್ ಏಕಾಂಗಿ ಹೋರಾಟವನ್ನು ನಡೆಸಿದರೂ ಸಹ ಕೊನೆಯ ಓವರ್‌ನಲ್ಲಿ 23 ರನ್‌ಗಳ ಅಗತ್ಯತೆಯಿತ್ತು. ಈ ಸಂದರ್ಭದಲ್ಲಿ 1 ಸಿಕ್ಸರ್ ಮತ್ತು 1 ಬೌಂಡರಿ ಬಾರಿಸಿದ ರೊಮಾರಿಯೊ ಶೆಫರ್ಡ್ 13 ರನ್ ಗಳಿಸಲಷ್ಟೇ ಶಕ್ತರಾದರು ಮತ್ತು ಅಂತಿಮವಾಗಿ ಅಜೇಯ 35 ರನ್ ಗಳಿಸಿದರು. ಪಂದ್ಯದ ಕೊನೆಯ ಎಸೆತದಲ್ಲಿ ವೆಸ್ಟ್ ಇಂಡೀಸ್ ತಂಡ ತನ್ನ ಕೊನೆಯ ವಿಕೆಟ್‍ನ್ನು ಕಳೆದುಕೊಳ್ಳುವುದರ ಮೂಲಕ 163 ರನ್‌ಗಳಿಗೆ ಆಲ್ ಔಟ್ ಆಯಿತು. ಈ ಮೂಲಕ ಪಾಕಿಸ್ತಾನ 9 ರನ್‌ಗಳ ರೋಚಕ ಜಯವನ್ನು ಸಾಧಿಸಿ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ 2-0 ಅಂತರದ ಮುನ್ನಡೆ ಜತೆಗೆ ಸರಣಿಯನ್ನು ವಶಪಡಿಸಿಕೊಂಡಿದೆ. ಇನ್ನು ಪಾಕಿಸ್ತಾನದ ಪರ ಶಾಹೀನ್ ಅಫ್ರಿದಿ 3, ಮೊಹಮ್ಮದ್ ನವಾಜ್ 2, ಮಹಮ್ಮದ್ ವಾಸಿಂ 2 ಮತ್ತು ಹಸೀನ್ ರೌಫ್ ತಲಾ 2 ವಿಕೆಟ್ ಪಡೆದರು.

Story first published: Tuesday, December 14, 2021, 22:45 [IST]
Other articles published on Dec 14, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+