ಕ್ಷಿಣ ಆಫ್ರಿಕಾ ತಂಡವನ್ನು ತವರಿನಲ್ಲಿ ಮಣಿಸುವ ಮೂಲಕ ಪಾಕಿಸ್ತಾನ ಮೂರು ಪಂದ್ಯಗಳ ಏಕದಿನ ಸರಣಿ ಗೆದ್ದಿದೆ. ಈ ಮೂಲಕ ದಕ್ಷಿಣ ಆಫ್ರಿಕಾ ತಂಡವನ್ನು ತವರಿನಲ್ಲಿ ಸೋಲಿಸಿದ ಏಷ್ಯಾದ ಮೊದಲ ತಂಡ ಎಂಬ ಹೆಗ್ಗಳಿಕೆ ಪಾಕಿಸ್ತಾನ ಪಾತ್ರವಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ದ್ವಿತೀಯ ಏಕದಿನ ಪಂದ್ಯವನ್ನು ಗೆದ್ದಿರುವ ಪಾಕಿಸ್ತಾನ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಏಕದಿನ ಸರಣಿಯನ್ನು ವಶಪಡಿಸಿಕೊಂಡಿದೆ. ಇನ್ನು ಪಾಕಿಸ್ತಾನ ಮೂರನೇ ಏಕದಿನ ಪಂದ್ಯದಲ್ಲಿ ಸೋತರೂ ಸರಣಿಯನ್ನು ಉಳಿಸಿಕೊಳ್ಳಲಿದೆ.
ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ಮಳೆಯಿಂದಾಗಿ 47 ಓವರ್‌ಗಳಲ್ಲಿ 9 ವಿಕೆಟ್‌ಗೆ 309 ರನ್ ಗಳಿಸಿತು. 330 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ 43.1 ಓವರ್‌ಗಳಲ್ಲಿ 248 ರನ್‌ಗಳಿಗೆ ಸರ್ವಪತನವಾಯಿತು. ಹೀಗಾಗಿ ಪಾಕಿಸ್ತಾನದ ಎದುರು ದಕ್ಷಿಣ ಆಫ್ರಿಕಾ ತಂಡ 36 ರನ್‌ಗಳ ಸೋಲನ್ನು ಎದುರಿಸಬೇಕಾಯಿತು.

ದಕ್ಷಿಣ ಆಫ್ರಿಕಾದಲ್ಲಿ ಪಾಕಿಸ್ತಾನ ತಂಡಕ್ಕೆ ಸತತ ಮೂರನೇ ದ್ವಿಪಕ್ಷೀಯ ಸರಣಿ ಜಯವಾಗಿದೆ. ಆಸ್ಟ್ರೇಲಿಯಾ, ಜಿಂಬಾಬ್ವೆ ಮತ್ತು ಇದೀಗ ದಕ್ಷಿಣ ಆಫ್ರಿಕಾ ವಿರುದ್ಧ ಮೊಹಮ್ಮದ್ ರಿಜ್ವಾನ್ ನಾಯಕತ್ವದಲ್ಲಿ ಪಾಕಿಸ್ತಾನ ತಂಡ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಗೆಲುವಿನ ನಗೆ ಬೀರಿದೆ. ಇದಲ್ಲದೆ, ಈ ವರ್ಷ ಪಾಕಿಸ್ತಾನವು ನ್ಯೂಜಿಲೆಂಡ್, ಅಫ್ಘಾನಿಸ್ತಾನ, ಆಸ್ಟ್ರೇಲಿಯಾ ಮತ್ತು ಜಿಂಬಾಬ್ವೆ ತಂಡಗಳನ್ನು ಸೋಲಿಸಿ ಸರಣಿ ಗೆದ್ದಿದೆ.
ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಪಾಕಿಸ್ತಾನ ಎದುರು ದಕ್ಷಿಣ ಆಫ್ರಿಕಾ ತವರಿನಲ್ಲಿ ಮೂರು ಸರಣಿಗಳನ್ನು ಕಳೆದುಕೊಂಡಿದೆ. ಇದರೊಂದಿಗೆ ಪಾಕಿಸ್ತಾನ ತಂಡ ದಕ್ಷಿಣ ಆಫ್ರಿಕಾದಲ್ಲಿ ಮೂರು ಏಕದಿನ ಸರಣಿಗಳನ್ನು ಗೆದ್ದ ಏಷ್ಯಾದ ಮೊದಲ ತಂಡ ಎನಿಸಿಕೊಂಡಿದೆ. ಇದರ ಜೊತೆಗೆ ಭಾರತ ತಂಡದ ದಾಖಲೆಯನ್ನು ಪಾಕಿಸ್ತಾನ ಮುರಿದಿದೆ. ಟೀಮ್ ಇಂಡಿಯಾ ಇದುವರೆಗೆ ದಕ್ಷಿಣ ಆಫ್ರಿಕಾದಲ್ಲಿ ಎರಡು ಏಕದಿನ ಸರಣಿಗಳನ್ನು ಗೆದ್ದತು, ಭಾರತ 2017 ಮತ್ತು 2023ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು ಗೆದ್ದುಕೊಂಡಿತ್ತು.
ಇದಕ್ಕೂ ಮುನ್ನ ಪಾಕಿಸ್ತಾನ ತಂಡ 11 ವರ್ಷಗಳ ಹಿಂದೆ 2013ರಲ್ಲಿ ನಡೆದ ಮೊದಲ ದ್ವಿಪಕ್ಷೀಯ ಏಕದಿನ ಸರಣಿಯಲ್ಲಿ ದಕ್ಷಿಣ ಆಫ್ರಿಕಾವನ್ನು ಮಣಿಸಿತ್ತು. ಇದಾದ ಬಳಿಕ 2021 ರಲ್ಲಿ ಎರಡನೇ ಬಾರಿಗೆ ಏಕದಿನ ಸರಣಿಯನ್ನು ಜಯಿಸುವಲ್ಲಿ ಯಶಸ್ವಿಯಾಗಿತ್ತು. ಇದೀಗ ಸತತ ಮೂರನೇ ಬಾರಿಗೆ ಹರಿಣಗಳ ನಾಡಿನಲ್ಲಿ ಪಾಕಿಸ್ತಾನ ಮತ್ತೊಮ್ಮೆ ಪ್ರಾಬಲ್ಯ ಸಾಧಿಸಿದೆ.
ಪಾಕಿಸ್ತಾನ ಎದುರು ಹೆನ್ರಿಚ್ ಕ್ಲಾಸೆನ್ ಅದ್ಭುತ ಬ್ಯಾಟಿಂಗ್ ಪ್ರದರ್ಶನ ಮಾಡಿದರು. ದಕ್ಷಿಣ ಆಫ್ರಿಕಾ ತಂಡಕ್ಕೆ ಗೆಲುವು ತಂದು ಕೊಡಲು ಏಕಾಂಗಿ ಹೋರಾಟ ನಡೆಸಿದರು. ಆದರೆ ಕ್ಲಾಸೆನ್ ಅವರಿಗೆ ಮತ್ತೊಂದು ಕಡೆಯಿಂದ ಯಾವುದೇ ಬ್ಯಾಟರ್ ಸಾಥ್ ಸಿಗಲಿಲ್ಲ. ಕ್ಲಾಸೆನ್ 43 ಎಸೆತಗಳಲ್ಲಿ 12 ಬೌಂಡರಿ ಮತ್ತು 2 ಸಿಕ್ಸರ್ ನೆವಿನಿಂದ 81 ರನ್ ಗಳಿಸುವ ಮೂಲಕ ತಂಡದ ಪರ ಗರಿಷ್ಠ ಸ್ಕೋರರ್ ಆದರು.