Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs BAN Match: ಭಾರತ ವಿರುದ್ಧ ಗೆದ್ದರೆ ಬಾಂಗ್ಲಾ ಕ್ರಿಕೆಟಿಗನೊಂದಿಗೆ ಡೇಟಿಂಗ್ ಭರವಸೆ ನೀಡಿದ ಪಾಕಿಸ್ತಾನ ನಟಿ

ಗುರುವಾರ, ಅಕ್ಟೋಬರ್ 19ರಂದು ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​(ಎಂಸಿಎ) ಕ್ರೀಡಾಂಗಣದಲ್ಲಿ ನಡೆಯಲಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನ 17ನೇ ಪಂದ್ಯದಲ್ಲಿ ಆತಿಥೇಯ ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಲಿವೆ.

ಭಾರತ ತಂಡ 2023ರ ವಿಶ್ವಕಪ್‌ನಲ್ಲಿ ತಾನು ಆಡಿದ ಮೂರು ಪಂದ್ಯಗಳಲ್ಲಿ ಮೂರನ್ನು ಗೆದ್ದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಬಾಂಗ್ಲಾದೇಶ ತಂಡ ಆಡಿದ ಮೂರು ಪಂದ್ಯಗಳಲ್ಲಿ ಒಂದು ಗೆಲುವು ಮತ್ತು ಎರಡು ಸೋಲುಗಳೊಂದಿಗೆ ಆರನೇ ಸ್ಥಾನದಲ್ಲಿದೆ.

Pakistani Actress Offers a Date with Bangladeshi Men if They Beat India in Todays World Cup Match

ಇದೇ ವೇಳೆ ಬಾಂಗ್ಲಾದೇಶ ವಿರುದ್ಧದ ಭಾರತ ತಂಡದ 2023ರ ಏಕದಿನ ವಿಶ್ವಕಪ್ ಪಂದ್ಯಕ್ಕೂ ಮುನ್ನ ಪಾಕಿಸ್ತಾನಿ ನಟಿ ಸೆಹರ್ ಶಿನ್ವಾರಿ ದೊಡ್ಡ ಸುದ್ದಿಯಾಗಿದ್ದಾಳೆ.

ಗುರುವಾರದ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವನ್ನು ಸೋಲಿಸಿದರೆ, ಬಾಂಗ್ಲಾದೇಶದ ಒಬ್ಬ ಕ್ರಿಕೆಟಿಗನೊಂದಿಗೆ ಡೇಟಿಂಗ್‌ಗೆ ಹೋಗುವುದಾಗಿ ಧೈರ್ಯಶಾಲಿ ಭರವಸೆ ನೀಡಿದ್ದಾಳೆ.

1
1-2023

"ಇನ್ಶಾ ಅಲ್ಲಾಹ್ ನನ್ನ ಬಾಂಗ್ಲಾ ತಂಡ ಮುಂದಿನ ಪಂದ್ಯದಲ್ಲಿ ಸೇಡು ತೀರಿಸಿಕೊಳ್ಳುತ್ತಾರೆ. ಬಾಂಗ್ಲಾದೇಶ ತಂಡವು ಭಾರತವನ್ನು ಸೋಲಿಸುವಲ್ಲಿ ಯಶಸ್ವಿಯಾದರೆ ನಾನು ಢಾಕಾಗೆ ಹೋಗಿ ಬಾಂಗ್ಲಾ ಹುಡುಗನೊಂದಿಗೆ ಮೀನು ಭೋಜನ ಡೇಟ್ ಮಾಡುತ್ತೇನೆ," ಎಂದು ಸೆಹರ್ ಶಿನ್ವಾರಿ ತನ್ನ ಎಕ್ಸ್‌ (ಟ್ವಿಟ್ಟರ್)ನಲ್ಲಿ ಪೋಸ್ಟ್ ಮಾಡಿದ್ದಾಳೆ.

ಎಕ್ಸ್‌ನಲ್ಲಿನ ನಟಿ ಮತ್ತು ಅವರ ಪೋಸ್ಟ್ ಕೆಲವೇ ಸಮಯದಲ್ಲಿ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ವೈರಲ್ ಆಯಿತು ಮತ್ತು ಅಭಿಮಾನಿಗಳಲ್ಲಿ ಕುತೂಹಲ ಹುಟ್ಟುಹಾಕಿದೆ.

ಅಕ್ಟೋಬರ್ 14ರಂದು ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ 7 ವಿಕೆಟ್‌ಗಳ ಅಮೋಘ ಗೆಲುವು ಸಾಧಿಸಿತು. ಅದಕ್ಕೂ ಮುನ್ನ ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ತಂಡಗಳ ವಿರುದ್ಧ ಜಯಭೇರಿ ಬಾರಿಸಿತ್ತು.

Story first published: Thursday, October 19, 2023, 13:39 [IST]
Other articles published on Oct 19, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+