For Quick Alerts
ALLOW NOTIFICATIONS  
For Daily Alerts
 

ಬಿಗ್‌ ಫೈಟ್‌ಗೂ ಮುನ್ನ ಶುರುವಾದ ಮಾತಿನ ಸಮರ: ಟೀಮ್ ಇಂಡಿಯಾಕ್ಕೆ ಎಚ್ಚರಿಕೆ ನೀಡಿದ ಪಾಕ್‌ ಓಪನರ್

ಭಾರತ ಹಾಗೂ ಶ್ರೀಲಂಕಾದಲ್ಲಿ ಟಿ20 ವಿಶ್ವಕಪ್‌ ಪಂದ್ಯವಾಳಿಗಳು ನಡೆಯುತ್ತಿವೆ. ಈಗಾಗಲೇ ಚಾಂಪಿಯನ್ ಪಟ್ಟದ ಮೇಲೆ ಕಣ್ಣು ನೆಟ್ಟಿರುವ ತಂಡಗಳು ಭರ್ಜರಿ ಆರಂಭವನ್ನು ಮಾಡಿವೆ. ಆದರೆ ಎಲ್ಲ ಕ್ರಿಕೆಟ್‌ ಅಭಿಮಾನಿಗಳ ಕಣ್ಣು ಫೆಬ್ರವರಿ 15 ರಂದು ನಡೆಯಲಿರುವ ಭಾರತ ಹಾಗೂ ಪಾಕಿಸ್ತಾನ ಪಂದ್ಯದ ಮೇಲೆ ನೆಟ್ಟಿದೆ. ಕೆಲ ದಿನಗಳ ಹಿಂದೆ ಭಾರತದ ವಿರುದ್ಧದ ಪಂದ್ಯವನ್ನು ಬಾಯ್ಕಟ್‌ ಮಾಡುವುದಾಗಿ ಹೇಳಿದ್ದ ಪಾಕಿಸ್ತಾನ ಈಗ ತನ್ನ ನಿರ್ಧಾರದಿಂದ ಹಿಂದೆ ಸರಿದಿದ್ದು ಪಂದ್ಯವನ್ನು ಆಡುವುದಾಗಿ ತಿಳಿಸಿದೆ. ಇದರಿಂದ ರೋಚಕತೆ ಹೆಚ್ಚಿದೆ.

ಲೀಗ್‌ ಹಂತದಲ್ಲಿ ಆಡಿದ ಎರಡೂ ಪಂದ್ಯಗಳನ್ನು ಗೆದ್ದಿರುವ ಪಾಕಿಸ್ತಾನ ಭರ್ಜರಿ ಆರಂಭವನ್ನು ಮಾಡಿದೆ. ಟೀಮ್ ಇಂಡಿಯಾ ಸಹ ಸ್ಥಿರ ಪ್ರದರ್ಶನ ನೀಡುತ್ತಿದೆ. ಭಾನುವಾರ ಕೊಲೊಂಬೊದಲ್ಲಿ ನಡೆಯಲಿರುವ ಹೈವೋಲ್ಟೇಜ್‌ ಫೈಟ್‌ ಎಲ್ಲರ ಚಿತ್ತ ಕದ್ದಿದೆ. ಈ ಫೈಟ್‌ಗೂ ಮುನ್ನ ಪಾಕಿಸ್ತಾನ ಆರಂಭಿಕ ಆಟಗಾರ ಸಾಹಿಬ್‌ಜಾದಾ ಫರ್ಹಾನ್ ಭಾರತಕ್ಕೆ ಎಚ್ಚರಿಕೆ ನೀಡಿದ್ದಾರೆ.

Pakistan s Sahibzada Farhan

ಫರ್ಹಾನ್‌ ಹೇಳಿದ್ದೇನು?

ಭಾನುವಾರ ನಡೆಯಲಿರುವ ಹೈವೋಲ್ಟೇಜ್‌ ಪಂದ್ಯಕ್ಕೂ ಮುನ್ನ ಸಾಹಿಬ್‌ಜಾದಾ ಫರ್ಹಾನ್ ದೊಡ್ಡ ಹೇಳಿಕೆ ನೀಡಿದ್ದಾರೆ. ಈ ಮೂಲಕ ನಾವು ಭಾರತದ ವಿರುದ್ಧ ಪಾಸಿಟಿವ್ ಹಾಗೂ ಅಟ್ಯಾಕಿಂಗ್ ಕ್ರಿಕೆಟ್ ಆಡುವುದಾಗಿ ತಿಳಿಸಿದ್ದಾರೆ. ಭಾರತದ ವಿರುದ್ಧ ಏಷ್ಯಾ ಕಪ್‌ನಲ್ಲಿ ಯಾವ ಮೈಂಡ್‌ಸೆಟ್‌ನಲ್ಲಿ ಅಂಗಳಕ್ಕೆ ಇಳಿದಿದ್ದೇವೋ ಅದೇ ರೀತಿ ಈ ಬಾರಿಯೂ ಅಂಗಳಕ್ಕೆ ಇಳಿಯಲಿದ್ದೇವೆ. ಈ ಪಂದ್ಯದಲ್ಲಿ ನಾವು ಉತ್ತಮ ಪ್ರದರ್ಶನ ನೀಡುವ ಬಗ್ಗೆ ಗಮನ ಹರಿಸಿದ್ದು, ಆಕ್ರಮಣಕಾರಿ ಆಟ ನಮ್ಮ ಉದ್ದೇಶ ಆಗಿರಲಿದೆ ಎಂದು ತಿಳಿಸಿದ್ದಾರೆ.

ಅಮೆರಿಕಾ ವಿರುದ್ಧದ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ 73 ರನ್‌ ಬಾರಿಸಿದ್ದ ಸಾಹಿಬ್‌ಜಾದಾ ಫರ್ಹಾನ್ ಪಾಕ್‌ ತಂಡ 190 ರನ್‌ಗಳ ಗುರಿಯನ್ನು ತಲುಪಲು ನೆರವಾಗಿದ್ದರು. ಇವರ ಸ್ಥಿರ ಪ್ರದರ್ಶನದ ಫಲವಾಗಿ ಇವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಲಭಿಸಿತು. ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಫರ್ಹಾನ್, ಅಭ್ಯಾಸ ಪಂದ್ಯದಲ್ಲಿ ಚೆನ್ನಾಗಿ ಬೆವರು ಹರಿಸಿದೆ. ಯುಎಸ್‌ಎ ಪಂದ್ಯಕ್ಕೂ ಮುನ್ನ ಅಭ್ಯಾಸದಲ್ಲಿ ಬ್ಯಾಟಿಂಗ್ ಮಾಡಿದ ಧಾಟಿ ಆತ್ಮವಿಶ್ವಾಸ ಹೆಚ್ಚಿಸಿತು. ಹೀಗಾಗಿ ಈ ಪಂದ್ಯದಲ್ಲಿ ದೊಡ್ಡ ಇನಿಂಗ್ಸ್‌ ಕಟ್ಟಲು ನೆರವಾಯಿತು.

Pakistan s Sahibzada Farhan

ನನ್ನ ಮೇಲೆ ನನಗೆ ಅತಿಯಾದ ಆತ್ಮವಿಶ್ವಾಸವಿತ್ತು. ಅಲ್ಲದೆ ಪಂದ್ಯದಲ್ಲಿ ಕೊನೆಯವರೆಗೂ ಆಡುವುದೇ ನನ್ನ ಗುರಿಯಾಗಿತ್ತು. ಅದಕ್ಕೆ ಫಲ ಲಭಿಸಿದೆ. ಟಿ20 ವಿಶ್ವಕಪ್‌ನಲ್ಲಿ ನಾನು ಕನಿಷ್ಠ ಎರಡರಿಂದ ಮೂರು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆಯುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಪಂದ್ಯದ ಫಲಿತಾಂಶ

ಕೊಲಂಬೊದಲ್ಲಿ ನಡೆದ "ಎ" ಗುಂಪಿನ ಪಂದ್ಯದಲ್ಲಿ ಟಾಸ್‌ ಸೋತರೂ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 190 ರನ್ ಸೇರಿಸಿತು. ಸಾಹಿಬ್‌ಜಾದಾ ಫರ್ಹಾನ್ 41 ಎಸೆತಗಳಲ್ಲಿ 6 ಬೌಂಡರಿ, 5 ಸಿಕ್ಸರ್‌ ಸಹಾಯದಿಂದ 73 ರನ್‌ ಸಿಡಿಸಿ ಮಿಂಚಿದರು. ಬಾಬರ್ ಅಜಮ್ 46, ಶಹಬಾದ್ ಖಾನ್‌ 30 ರನ್‌ ಸಿಡಿಸಿ ತಂಡದ ಮೊತ್ತವನ್ನು ಹಿಗ್ಗಿಸಿದರು.

191 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಅಮೆರಿಕ ತಂಡದ ಪರ ಶಯಾನ್ ಜಹಾಂಗೀರ್ 5 ಬೌಂಡರಿ, 2 ಸಿಕ್ಸರ್ ಸಹಾಯದಿಂದ 49 ರನ್‌ ಸಿಡಿಸಿದರೆ, ನಾಯಕ ಮೊನಾಂಕ್ ಪಟೇಲ್ (3) ರನ್‌ ಕಲೆ ಹಾಕುವಲ್ಲಿ ವಿಫಲರಾದರು. ಮಿಲಿಂದ್ ಕುಮಾರ್ 29 ರನ್‌ ಬಾರಿಸಿ ಯುಎಸ್‌ಎಗೆ ಕೊಂಚ ಆಧಾರವಾದರು. ಶುಭಂ ರಂಜನೆ ಸೋಲಿನ ಅಂತರವನ್ನು ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದರು. ಇವರು 30 ಎಸೆತಗಳಲ್ಲಿ 3 ಬೌಂಡರಿ, 3 ಸಿಕ್ಸರ್ ಸಹಾಯದಿಂದ 51 ರನ್‌ ಸಿಡಿಸಿದರು. ಅಂತಿಮವಾಗಿ ಯುಎಸ್‌ಎ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 158 ರನ್‌ ಕಲೆ ಹಾಕಿತು.

Story first published: Wednesday, February 11, 2026, 10:45 [IST]
Other articles published on Feb 11, 2026
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+