IND vs SA T20: ಒಂದೇ ದಾಖಲೆ ಮೇಲೆ ಟೀಮ್ ಇಂಡಿಯಾ ಆಟಗಾರರ ಕಣ್ಣು
ಡರ್ಬನ್‌ನಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಶುಕ್ರವಾರ ಕಾದಾಟ ನಡೆಸಲಿವೆ. ಈ ಸರಣಿಯ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಬಾರ್ಬಿರ್ಡೋಸ್‌ನಲ್ಲಿ ಟೀಮ್ ಇಂಡಿಯಾ ವಿರುದ್ಧ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಸೋತ ಬಳಿಕ ಇದೇ ಮೊದಲ ಬಾರಿಗೆ ಕಾದಾಟ ನಡೆಸಲಿವೆ. ಉಭಯ ತಂಡಗಳ ನಡುವಿನ ಕಾಳಗ ರೋಚಕತೆ ಹೆಚ್ಚಿಸಿದೆ.
ದಕ್ಷಿಣ ಆಫ್ರಿಕಾ ತವರಿನಲ್ಲಿ ಟಿ20 ಸರಣಿಯನ್ನು ಗೆಲ್ಲುವ ಗುರಿಯನ್ನು ಹೊಂದಿದೆ. ಈ ಸರಣಿಯ ಮೇಲೆ ಟೀಮ್ ಇಂಡಿಯಾದ ಹಲವು ಸ್ಟಾರ್ ಆಟಗಾರರ ಮೇಲೆ ಕಣ್ಣು ನೆಟ್ಟಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರರು ದಾಖಲೆಗಾಗಿ ಫೈಟ್ ನಡೆಸಲಿದ್ದಾರೆ.

ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಬೌಲರ್ ಅರ್ಷದೀಪ್ ಸಿಂಗ್ ಹಾಗೂ ಹಾರ್ದಿಕ್ ಪಾಂಡ್ಯ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿರುವ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಈ ಸರಣಿಯ ಮೊದಲ ಪಂದ್ಯ ಶುಕ್ರವಾರ ನಡೆಯಲಿದೆ. ಚುಟುಕು ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಇಬ್ಬರೂ ಸಮನಾದ ದಾಖಲೆ ಹೊಂದಿದ್ದಾರೆ. ಹಾರ್ದಿಕ್ ಪಾಂಡ್ಯ ಆಡಿದ 105 ಪಂದ್ಯಗಳಲ್ಲಿ 87 ವಿಕೆಟ್ ಪಡೆದರೆ, ಟೀಮ್ ಇಂಡಿಯಾದ ಯಂಗ್ ಪೇಸ್ ಬೌಲರ್ ಅರ್ಷದೀಪ್ ಸಿಂಗ್ 56 ಪಂದ್ಯಗಳಲ್ಲೇ ಇಷ್ಟು ವಿಕೆಟ್ ಪಡೆದು ಬೀಗಿದ್ದಾರೆ.
ಒಂದೇ ಸರಣಿಯಲ್ಲಿ ಹಲವು ದಾಖಲೆ
ಒಂದೇ ಸರಣಿಯಲ್ಲಿ ಇಬ್ಬರೂ ಸೂಪರ್ ಸ್ಟಾರ್ ಆಟಗಾರರಿಗೆ ಹಲವು ದಾಖಲೆಗಳನ್ನು ನಿರ್ಮಿಸುವ ಅವಕಾಶ ಇದೆ. ಟೀಮ್ ಇಂಡಿಯಾದ ಯಾರ್ಕರ್ ಸ್ಪೆಷಲಿಸ್ಟ್ ಜಸ್ಪ್ರಿತ್ ಬುಮ್ರಾ, ಭುವನೇಶ್ವರ್ ಕುಮಾರ್, ಯುಜುವೇಂದ್ರ ಚಹಾಲ್ ಅವರ ದಾಖಲೆಗಳ ಮೇಲೆ ಹಾರ್ದಿಕ್ ಹಾಗೂ ಅರ್ಷದೀಪ್ ಸಿಂಗ್ ಕಣ್ಣು ನೆಟ್ಟಿದ್ದಾರೆ.

ಈ ಇಬ್ಬರೂ ಆಟಗಾರರಲ್ಲಿ ಒಬ್ಬರು ಮೊದಲ ಪಂದ್ಯದಲ್ಲಿ ನಾಲ್ಕು ವಿಕೆಟ್ ಪಡೆದಲ್ಲಿ, ಒಂದೇ ಸ್ಟ್ರೋಕ್‌ನಲ್ಲಿ ಜಸ್ಪ್ರೀತ್ ಬುಮ್ರಾ ಮತ್ತು ಭುವನೇಶ್ವರ್ ಕುಮಾರ್ ಅವರ ದಾಖಲೆಯನ್ನು ಅಳಿಸಿ ಹಾಕುತ್ತಾರೆ. ಟೀಮ್ ಇಂಡಿಯಾದ ಯಾರ್ಕರ್ ಸ್ಪೇಷಲಿಸ್ಟ್ ಜಸ್ಪ್ರಿತ್ ಬುಮ್ರಾ ಟಿ20 ಕ್ರಿಕೆಟ್‌ನಲ್ಲಿ 89, ಸ್ವಿಂಗ್ ಬೌಲರ್ ಭುವನೇಶ್ವರ್ ಕುಮಾರ್ 90 ವಿಕೆಟ್ ಪಡೆದು ಬೀಗಿದ್ದಾರೆ.
ನಂಬರ್ 1 ಸ್ಥಾನಕ್ಕೆ ಏರಲು ಅವಕಾಶ
ಈ ಸರಣಿಯಲ್ಲಿ ಟೀಮ್ ಇಂಡಿಯಾದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ, ಪೇಸರ್ ಅರ್ಷದೀಪ್ ಸಿಂಗ್ ಹೊಸ ದಾಖಲೆ ನಿರ್ಮಿಸುವ ಹೊಸ್ತಿಲಲ್ಲಿ ನಿಂತಿದ್ದಾರೆ. ಇಬ್ಬರಿಗೂ ಭಾರತದ ಪರ ಟಿ20 ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದ ಭಾರತೀಯ ಬೌಲರ್‌ಗಳಾಗುವ ಅವಕಾಶ ಇದೆ.
ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ನಡೆಯುವ ನಾಲ್ಕು ಟಿ20 ಪಂದ್ಯಗಳ ಸರಣಿಯಲ್ಲಿ ಉಭಯ ಆಟಗಾರರು 10 ವಿಕೆಟ್ ಮೇಲೆ ಕಣ್ಣು ನೆಟ್ಟಿದ್ದಾರೆ. ಇವರಿಬ್ಬರಲ್ಲಿ ಯಾರಾದರೂ ಈ ಸಾಧನೆ ಮಾಡಿದರೆ, ಟೀಮ್ ಇಂಡಿಯಾ ಪರ ಚುಟುಕು ಕ್ರಿಕೆಟ್‌ನಲ್ಲಿ ಗರಿಷ್ಠ ವಿಕೆಟ್ ಪಡೆದ ಬೌಲರ್ ಎಂಬ ಹ್ಗೆಗಳಿಕೆ ತಮ್ಮದಾಗಿಸಿಕೊಳ್ಳಲಿದ್ದಾರೆ.
ಟೀಮ್ ಇಂಡಿಯಾದ ಸ್ಪಿನ್ ಬೌಲರ್ ಯುಜುವೇಂದ್ರ ಚಹಾಲ್ ಆಡಿದ 80 ಪಂದ್ಯಗಳಲ್ಲಿ 96 ವಿಕೆಟ್ ಕಬಳಿಸಿದ್ದಾರೆ. ಇವರ ದಾಖಲೆಯನ್ನು ಮೀರಿ ನಿಲ್ಲುವ ಪ್ಲ್ಯಾನ್‌ನ್ನು ಹಾರ್ದಿಕ್ ಪಾಂಡ್ಯ, ಅರ್ಷದೀಪ್ ಸಿಂಗ್ ಮಾಡಿಕೊಂಡಿದ್ದಾರೆ. ಇವರ ಕನಸು ಯಾವ ಪಂದ್ಯದಲ್ಲಿ ಕೈ ಗೂಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications