ಕನಸು ನನಸಾಗುವ ಮುನ್ನವೇ ದುರಂತ ಅಂತ್ಯ: ಪ್ಯಾರಾ ಅಥ್ಲೀಟ್ ಚಿರಾಗ್ ತ್ಯಾಗಿ ಹತ್ಯೆ
ರಾಷ್ಟ್ರ ಮಟ್ಟದ ಪ್ಯಾರಾ ಅಥ್ಲೀಟ್ ಅವರನ್ನು ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಉತ್ತರ ಪ್ರದೇಶದ ಮುರಾದ್‌ನಗರದ ಚಿರಾಗ್ ತ್ಯಾಗಿ ಮೃತಪಟ್ಟ ಅಥ್ಲೀಟ್. ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಪ್ಯಾರಾ ಗೇಮ್ಸ್‌ಗೆ ಅರ್ಹತೆ ಪಡೆದ ಕೆಲವೇ ದಿನಗಳಲ್ಲಿ ಈ ದುರಂತ ಸಂಭವಿಸಿದೆ. ಶನಿವಾರ ಗಾಜಿಯಾಬಾದ್‌ನ ಸಾಯಿ ಉಪವನ್ ಎಂಬ ನಿರ್ಜನ ಪ್ರದೇಶದಲ್ಲಿ ಮೃತದೇಹ ಪತ್ತೆಯಾಗಿದೆ.
ಪ್ಯಾರಾ ಅಥ್ಲೀಟ್ ಚಿರಾಗ್ ತ್ಯಾಗಿ ರಾಷ್ಟ್ರೀಯ ಮಟ್ಟದಲ್ಲಿ ಭರವಸೆ ಮೂಡಿಸಿದ್ದ ಅಥ್ಲೀಟ್. ಇವರು ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನ 400 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಬೀಗಿದ್ದರು. ಈ ಅಮೋಘ ಪ್ರದರ್ಶನದ ಫಲವಾಗಿ ಅವರಿಗೆ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಅವಕಾಶ ಲಭಿಸಿತು.

ಚಿರಾಗ್ ತ್ಯಾಗಿ 100 ಮತ್ತು 400 ಮೀಟರ್ ಓಟಗಳಲ್ಲಿ ಸ್ಪರ್ಧಿಸಿದ್ದರು. ಚಿರಾಗ್ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ತಮ್ಮ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ದೇಶಕ್ಕೆ ಕೀರ್ತಿ ತಂದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಪಿ ಉಪಾಸನ ಪಾಂಡೆ ಚಿರಾಗ್‌ನ ಗೆಳತಿ, ತರಬೇತುದಾರ ಮತ್ತು ಕುಟುಂಬ ಸದಸ್ಯರನ್ನು ವಿಚಾರಿಸಿದರು. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ, ಪೊಲೀಸರು ಯಶ್ ಖಾಟಿಕ್‌ನನ್ನು ಬಂಧಿಸಿದರು. ವಿಚಾರಣೆಯ ಸಮಯದಲ್ಲಿ ಅವನು ಕೊಲೆಯನ್ನು ಒಪ್ಪಿಕೊಂಡಿದ್ದಾನೆ.
ಘಟನೆ ನಡೆಯಲು ಕಾರಣ ಏನು?
ಪೊಲೀಸ್ ತನಿಖೆ ಮತ್ತು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಚಿರಾಗ್ ಮತ್ತು ಆತನ ಸ್ನೇಹಿತ ದೆಹಲಿಯಿಂದ ಹಿಂಡನ್‌ಗೆ ಓಲಾ ಕ್ಯಾಬ್‌ನಲ್ಲಿ ಪ್ರಯಾಣಿಸಿರುವುದು ತಿಳಿದು ಬಂದಿದೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ, ಪೊಲೀಸರು ಮುರಾದ್‌ನಗರ ನಿವಾಸಿ ಯಶ್ ಖಾಟಿಕ್‌ನನ್ನು ಬಂಧಿಸಿದರು. ವಿಚಾರಣೆಯ ವೇಳೆ ಯಶ್ ಖಾಟಿಕ್ ಕೂಡ ಪ್ಯಾರಾ-ಅಥ್ಲೀಟ್ ಎಂದು ತಿಳಿಸಿದ್ದಾರೆ.
ಸಾಮಾನ್ಯವಾಗಿ ಯಶ್ ಖಾಟಿಕ್ ಹಾಗೂ ಚಿರಾಗ್ ತ್ಯಾಗಿ ಇಬ್ಬರೂ ಒಟ್ಟಾಗಿ ಸ್ಪರ್ಧೆಗಳಲ್ಲಿಯೂ ಭಾಗವಹಿಸುತ್ತಿದ್ದರು. ದಾಖಲೆ ಪರಿಶೀಲನೆಯ ಸಮಯದಲ್ಲಿ, ಚಿರಾಗ್ ತ್ಯಾಗಿ ಯಶ್ ವಿರುದ್ಧ ದೂರು ದಾಖಲಿಸಿದ್ದರು ಎಂದು ತಿಳಿದು ಬಂದಿದೆ. ಅಲ್ಲದೆ ಚಿರಾಗ್ ದೂರು ನೀಡಿದ ಪರಿಣಾಮವೇ ಯಶ್ ಅರ್ಹತೆ ರದ್ದಾಗಿತ್ತು. ಇದರಿಂದ ಯಶ್ ಕೋಪಿತರಾಗಿದ್ದರು. ಸೇಡು ತೀರಿಸಿಕೊಳ್ಳಲು, ಯಶ್ ಚಿರಾಗ್ ತ್ಯಾಗಿಯನ್ನು ಪಿಸ್ತೂಲಿನಿಂದ ಗುಂಡು ಹಾರಿಸಿ ಕೊಂದರು. ಕುಟುಂಬದ ದೂರಿನ ಆಧಾರದ ಮೇಲೆ, ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ.
ಸದ್ಯ ಚಿರಾಗ್ ತ್ಯಾಗಿ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪೊಲೀಸರು ಅವರ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications