ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ನಿವೃತ್ತಿ ನಂತರ ಮುಂಬೈ ಇಂಡಿಯನ್ಸ್ ತಂಡದಲ್ಲಿ ಪಾರ್ಥಿವ್ ಪಟೇಲ್‌ಗೆ ಹೊಸ ಜವಾಬ್ಧಾರಿ

vParthiv Patel joins Mumbai Indians as talent scout

ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿಯನ್ನು ಪಡೆದುಕೊಂಡ ನಂತರ ಅನುಭವಿ ಕ್ರಿಕೆಟಿಗ ಪಾರ್ಥಿವ್ ಪಟೇಲ್ ಹೊಸ ಜವಾಬ್ಧಾರಿಯೊಂದನ್ನು ವಹಿಸಿಕೊಂಡಿದ್ದಾರೆ. ಐಪಿಎಲ್‌ನ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ಪ್ರತಿಭಾ ಅನ್ವೇಶಕನಾಗಿ ಸೇರಿಕೊಂಡಿದ್ದಾರೆ. ಈ ಮೂಲಕ ನಿವೃತ್ತಿಯ ಬಳಿಕ ತಮ್ಮ ಹೊಸ ಇನ್ನಿಂಗ್ಸ್ ಆರಂಭಿಸಲಿದ್ದಾರೆ.

ಗುರುವಾರ ಈ ಬಗ್ಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಮಾಧ್ಯಮ ಹೇಳಿಕೆಯನ್ನು ಬಿಡುಗಡೆಗೊಳಿಸಿದ್ದು "ಪಾರ್ಥಿವ್ ಎರಡು ದಶಕಗಳಲ್ಲಿ ವ್ಯಾಪಕವಾದ ದೇಶೀಯ ಮತ್ತು ಅಂತರಾಷ್ಟ್ರೀಯ ಕ್ರಿಕೆಟ್‌ನ ಅನುಭವವನ್ನು ಹೊಂದಿದ್ದಾರೆ. ಜೊತೆಗೆ ಐಪಿಎಲ್‌ನ ಅನುಭವವೂ ಅವರಲ್ಲಿ ಇದೆ" ಎಂದು ಹೇಳಿದೆ.

ಇಂಗ್ಲೆಂಡ್ ವಿರುದ್ಧ ಮೊಟೆರಾದಲ್ಲಿ ಡೇ-ನೈಟ್ ಟೆಸ್ಟ್: ಬೃಹತ್ ಸ್ಟೇಡಿಯಂನಲ್ಲಿ ಪಂದ್ಯ ನಡೆಯವ ಬಗ್ಗೆ ಜಯ್ ಶಾ ಮಾಹಿತಿಇಂಗ್ಲೆಂಡ್ ವಿರುದ್ಧ ಮೊಟೆರಾದಲ್ಲಿ ಡೇ-ನೈಟ್ ಟೆಸ್ಟ್: ಬೃಹತ್ ಸ್ಟೇಡಿಯಂನಲ್ಲಿ ಪಂದ್ಯ ನಡೆಯವ ಬಗ್ಗೆ ಜಯ್ ಶಾ ಮಾಹಿತಿ

ಪಾರ್ಥೀವ್ ಪಟೇಲ್ ಕಳೆದ 2018ರ ಐಪಿಎಲ್ ಆವೃತ್ತಿಯಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರನಾಗಿದ್ದರು. ಆದರೆ ಈ ಬಾರಿಯ ಆವೃತ್ತಿಯಲ್ಲಿ ಒಂದು ಪಂದ್ಯದಲ್ಲೂ ಆಡುವ ಬಳಗದಲ್ಲಿ ಪಾರ್ಥಿವ್ ಪಟೇಲ್ ಅವಕಾಶವನ್ನು ಪಡೆದುಕೊಂಡಿರಲಿಲ್ಲ. ಆರ್‌ಸಿಬಿಗೆ ಸೇರ್ಪಡೆಗೊಳ್ಳುವ ಮುನ್ನ 2016 ಹಾಗೂ 2017ನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸಿದ ಅನುಭವ ಹೊಂದಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡದ ಮಾಲೀಕ ಆಕಾಶ್ ಅಂಬಾನಿ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. "ಪಾರ್ಥಿವ್ ನಮ್ಮನ್ನು ಸೇರಿಕೊಳ್ಳುತ್ತಿರುವುದಕ್ಕೆ ನಾನು ತುಂಬಾ ಸಂತಸಗೊಂಡಿದ್ದೇನೆ. ಪಾರ್ಥಿವ್ ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಆಡುವ ಸಂದರ್ಭದಲ್ಲಿ ಕ್ರಿಕೆಟ್ ಪ್ರತಿಭೆಗಳನ್ನು ಆಯ್ಕೆ ಮಾಡಲು ಅವಕಾಶ ದೊರೆತಿತ್ತು. ಅವರಲ್ಲಿರುವ ಜ್ಞಾನದಿಂದಾಗಿ ನಾವು ಮತ್ತಷ್ಟು ಕ್ರಿಕೆಟ್ ಪ್ರತಿಭೆಗಳನ್ನು ಅನ್ವೇಶಿಸಲು ಸಾಧ್ಯವಾಗಲಿದೆ ಎಂಬ ಭರವಸೆಯನ್ನು ಹೊಂದಿದ್ದೇವೆ. ನಮ್ಮ ಸಿದ್ದಾಂತವನ್ನು ಅರ್ಥ ಮಾಡಿಕೊಳ್ಳುತ್ತಾರೆ. ನಮ್ಮ ಒಂದು ಕುಟುಂಬಕ್ಕೆ ಪಾರ್ಥಿವ್ ಅವರನ್ನು ಸ್ವಾಗತಿಸುತ್ತೇವೆ" ಎಂದು ಆಕಾಶ್ ಅಂಬಾನಿ ಹೇಳಿದ್ದಾರೆ.

Story first published: Friday, December 11, 2020, 9:53 [IST]
Other articles published on Dec 11, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X