Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಆಸ್ಟ್ರೇಲಿಯಾ ಟೆಸ್ಟ್ ಕ್ರಿಕೆಟ್ ತಂಡದ ನಾಯಕನಾಗಿ ಪ್ಯಾಟ್ ಕಮಿನ್ಸ್ ಆಯ್ಕೆ, ಸ್ಮಿತ್‌ ಉಪನಾಯಕ

Pat cummins

ಪ್ರತಿಷ್ಠಿತ ಆ್ಯಷಸ್ ಟೆಸ್ಟ್ ಸರಣಿಗೂ ಮುನ್ನ ಸೆಕ್ಸ್ಟಿಂಗ್ ವಿವಾದದ ಮೂಲಕ ನಾಯಕತ್ವದಿಂದ ಕೆಳಗಿಳಿದಿದ್ದ ನಾಯಕ ಟಿಮ್ ಪೈನ್ ಬದಲಿಗೆ ಆಲ್‌ರೌಂಡರ್ ಪ್ಯಾಟ್ ಕಮಿನ್ಸ್‌ ಆಸ್ಟ್ರೇಲಿಯಾದ ಟೆಸ್ಟ್‌ ತಂಡದ ನಾಯಕನಾಗಿ ಆಯ್ಕೆಯಾಗಿದ್ದಾರೆ.

ಪ್ಯಾಟ್ ಕಮಿನ್ಸ್ ನಾಯಕನಾಗಿ ಆಯ್ಕೆಗೊಂಡರೆ, ಬಾಲ್ ಟೆಂಪರಿಂಗ್ ವಿವಾದದಿಂದ ನಾಯಕತ್ವ ಕಳೆದುಕೊಂಡಿದ್ದ ಸ್ವೀವನ್ ಸ್ಮಿತ್‌ರನ್ನ ಉಪನಾಯಕನಾಗಿ ಆಯ್ಕೆ ಮಾಡಲಾಗಿದೆ.

2017-18ರ ಆ್ಯಷಸ್​ ಸರಣಿ ಆರಂಭಕ್ಕೂ ಮುನ್ನ ಕ್ರಿಕೆಟ್ ಆಸ್ಟ್ರೇಲಿಯಾದ ಮಾಜಿ ಸಹದ್ಯೋಗಿಗೆ ಅಶ್ಲೀಲ ಚಿತ್ರಗಳ ಸಂದೇಶ ರವಾನೆ ಮತ್ತು ಸೆಕ್ಸ್ಟಿಂಗ್ ಸಂದೇಶದ ಆರೋಪ ಟಿಮ್ ಪೇನ್ ಮೇಲೆ ಕೇಳಿ ಬಂದಿತ್ತು. ಆದರೆ ಈ ಪ್ರಕರಣವು ತಡವಾಗಿ ಹೊರಬಂದಿದ್ದು, ಈ ಪ್ರಕರಣದ ಬಗ್ಗೆ ತನಿಖೆಗೆ ನಡೆಯುತ್ತಿರುವ ಆಸ್ಟ್ರೇಲಿಯಾ ಟೆಸ್ಟ್ ತಂಡದ ನಾಯಕತ್ವಕ್ಕೆ ರಾಜೀನಾಮೆ ಘೋಷಿಸಿದ್ದರು. ಸದ್ಯ ಮಾನಸಿಕ ಆರೋಗ್ಯ ಸುಧಾರಣೆಗೆ ಕ್ರಿಕೆಟ್​ನಿಂದ ಕೊಂಚ ವಿರಾಮ ಪಡೆದುಕೊಳ್ಳುವುದಾಗಿ ಹೇಳಿದ್ದಾರೆ.

ಆಸ್ಟ್ರೇಲಿಯಾದ 47ನೇ ಟೆಸ್ಟ್ ನಾಯಕನಾಗಿ ಆಯ್ಕೆಯಾಗಿರುವ ಪ್ಯಾಟ್ ಕಮಿನ್ಸ್‌ ಆ್ಯಶಸ್ ಸರಣಿಯಲ್ಲಿ ಆಸ್ಟ್ರೇಲಿಯಾವನ್ನು ಮುನ್ನಡೆಸಲಿದ್ದಾರೆ. ಈ ಮೂಲಕ 65 ವರ್ಷಗಳ ನಂತರ ಆಸ್ಟ್ರೇಲಿಯಾ ತಂಡವನ್ನು ವೇಗದ ಬೌಲರ್ ಒಬ್ಬರು ತಂಡಕ್ಕೆ ನಾಯಕನಾಗಿ ಆಯ್ಕೆಯಾಗಿದ್ದಾರೆ. ಬಾಲ್ ಟ್ಯಾಂಪರಿಂಗ್ ವಿವಾದದಿಂದ ನಾಯಕತ್ವದಿಂದ ಕೆಳಗಿಳಿದ ಬಳಿಕ ಸ್ಟೀವನ್ ಸ್ಮಿತ್ ಮೊದಲ ಬಾರಿಗೆ ಉಪನಾಯಕರಾಗಿ ಆಯ್ಕೆಗೊಂಡಿದ್ದಾರೆ.

ಇನ್ನು ವಿವಾದದಿಂದಲೇ ನಾಯಕತ್ವ ಕಳೆದುಕೊಂಡ ಟಿಮ್ ಪೈನ್ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ದೂರ ಉಳಿದಿದ್ದಾರೆ. ಮುಂದಿನ ಆ್ಯಷನ್ ಸರಣಿಯಲ್ಲಿ ಆಡುವುದು ಬಹುತೇಕ ಅನುಮಾನವಾಗಿದೆ. ಹೀಗಾಗಿ 36 ವರ್ಷದ ಟಿಮ್ ಪೈನ್ ಅವರ ಮುಂದಿನ ಕ್ರಿಕೆಟ್ ಭವಿಷ್ಯದ ಕುರಿತು ಯಾವುದೇ ಸ್ಪಷ್ಟತೆ ತಿಳಿದುಬಂದಿಲ್ಲ.

ಆ್ಯಷಸ್ ಸರಣಿಗೆ ಆಸ್ಟ್ರೇಲಿಯಾ ಸ್ಕ್ವಾಡ್
ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಟೀವ್ ಸ್ಮಿತ್ (ಉಪ ನಾಯಕ) ಕ್ಯಾಮೆರಾನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ನಾಥನ್ ಲಿಯಾನ್, ಮೈಕೆಲ್ ನೆಸರ್, ಝೇ ರಿಚರ್ಡ್‌ಸನ್, ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್.

Story first published: Friday, November 26, 2021, 12:36 [IST]
Other articles published on Nov 26, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+