Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Melbourne Test: ರೋಹಿತ್ ಶರ್ಮಾ ವಿರುದ್ಧ ಪ್ಯಾಟ್ ಕಮ್ಮಿನ್ಸ್ ದಾಖಲೆ

ಭಾರತ ತಂಡದ ನಾಯಕ ರೋಹಿತ್ ಶರ್ಮಾ ತಮ್ಮ ಅಬ್ಬರವನ್ನು ನಿಲ್ಲಿಸಿದಂತೆ ಕಾಣಿಸುತ್ತಿದೆ. ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ರೋಹಿತ್ ಶರ್ಮಾ ಅವರಿಂದ ನಿರೀಕ್ಷಿತ ಪ್ರದರ್ಶನ ಬಂದಿಲ್ಲ. ರೋಹಿತ್ ಅವರು ಕಳೆದ 15 ಇನ್ನಿಂಗ್ಸ್‌ಗಳಲ್ಲಿ ಕೇವಲ ಒಂದು ಅರ್ಧಶತಕವನ್ನು ಗಳಿಸುವಲ್ಲಿ ಮಾತ್ರ ಯಶಸ್ವಿಯಾಗಿದ್ದಾರೆ. ಇದರ ಹೊರತಾಗಿ ರೋಹಿತ್ ಅವರು ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಮೆಲ್ಬೋರ್ನ್ ಸ್ಟೇಡಿಯಂನಲ್ಲಿ ನಡೆದ ನಾಲ್ಕನೇ ಪಂದ್ಯದಲ್ಲಿ ರೋಹಿತ್ ಶರ್ಮಾ ವಿಕೆಟ್ ಪಡೆಯುವ ಮೂಲಕ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ತಮ್ಮ ಹೆಸರಿನಲ್ಲಿ ದಾಖಲೆ ಸೃಷ್ಟಿಸಿದ್ದಾರೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬಾರಿ ಎದುರಾಳಿ ತಂಡದ ನಾಯಕನನ್ನು ಔಟ್ ಮಾಡಿದ ಹೊಸ ದಾಖಲೆಯನ್ನು ಪ್ಯಾಟ್ ಕಮ್ಮಿನ್ಸ್ ನಿರ್ಮಿಸಿದ್ದಾರೆ. ರೋಹಿತ್ ಶರ್ಮಾ ಅವರನ್ನು ಪ್ಯಾಟ್ ಕಮ್ಮಿನ್ಸ್ ಆರು ಬಾರಿ ಔಟ್ ಮಾಡಿದ್ದಾರೆ. ಇಬ್ಬರು ನಾಯಕರ ನಡುವಿನ ಯುದ್ಧದಲ್ಲಿ ರೋಹಿತ್‌ ವಿರುದ್ಧ ಕಮ್ಮಿನ್ ಮೇಲುಗೈ ಸಾಧಿಸಿದ್ದಾರೆ. ಇದಕ್ಕೂ ಮೊದಲ ಈ ದಾಖಲೆಯನ್ನು ಟೆಡ್ ಡೆಕ್ಸ್ಟರ್ ವಿರುದ್ಧ ರಿಚಿ ಬೆನಾಡ್ ಮಾಡಿದ್ದರು.

Pat Cummins creates record against Rohit Sharma

ಪ್ರಸ್ತುತ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ರೋಹಿತ್ ವಿರುದ್ಧ ಕಮ್ಮಿನ್ಸ್ ಅದ್ಭುತ ಪ್ರದರ್ಶನ ನೀಡಿದ್ದು, ನಾಲ್ಕು ಬಾರಿ ಔಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಕಮ್ಮಿನ್ಸ್ ಬೌಲಿಂಗ್‌ನಲ್ಲಿ ರೋಹಿತ್ 44 ಎಸೆತಗಳಲ್ಲಿ ಕೇವಲ 11 ರನ್ ಗಳಿಸಿದರು. ಆದರೆ ಕಮ್ಮಿನ್ಸ್ ನಾಲ್ಕನೇ ಬಾರಿಗೆ ಅವರ ವಿಕೆಟ್ ಪಡೆದು ಮಿಂಚಿದ್ದಾರೆ. ಮೆಲ್ಬೋರ್ನ್ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ ರೋಹಿತ್ ಶರ್ಮಾ ಉತ್ತಮ ಆರಂಭ ನೀಡುವ ಭರವಸೆ ಇಟ್ಟುಕೊಂಡಿದ್ದರು. ಆದರೆ 17ನೇ ಓವರ್‌ನ ಕಮಿನ್ಸ್ ಮೊದಲ ಎಸೆತವನ್ನು ರೋಹಿತ್ ಅವರು ಫ್ಲಿಕ್ ಮಾಡಲು ಪ್ರಯತ್ನಿಸುವಲ್ಲಿ ವಿಫವಾಗಿ ವಿಕೆಟ್ ಕಳೆದುಕೊಂಡರು.

ಆಸರೆಯಾಗದ ರೋಹಿತ್

ರೋಹಿತ್ ಶರ್ಮಾ ಅವರು ತಂಡಕ್ಕೆ ಆಸರೆಯಾಗಬೇಕಿದ್ದ ಸಂದರ್ಭಗಳಲ್ಲಿ ವಿಕೆಟ್ ಕಳೆದುಕೊಂಡಿರುವುದು ಭಾರತೀಯ ಕ್ರಿಕೆಟ್ ಅಭಿಮಾನಿಗಳು ಬೇಸರ ತರಿಸಿದೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ರೋಹಿತ್ ಶರ್ಮಾ ಆಡಿರುವ ಮೂರು ಟೆಸ್ಟ್ ಪಂದ್ಯಗಳ 6 ಇನ್ನಿಂಗ್ಸ್‌ಗಳಲ್ಲಿ ರನ್ ಗಳಿಸುವಲ್ಲಿ ಹಿಂದೆ ಉಳಿದಿದ್ದಾರೆ. ಎರಡನೇ ಮಗುವಿನ ಜನನದಿಂದಾಗಿ ರೋಹಿತ್ ಶರ್ಮಾ ಅವರು ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಭಾಗವಾಗಿರಲಿಲ್ಲ. ನಂತರ ಅಡಿಲೇಡ್‌ನಲ್ಲಿ ನಡೆದ ಪಿಂಕ್ ಬಾಲ್ ಟೆಸ್ಟ್ ಪಂದ್ಯ ರೋಹಿತ್ ಎರಡೂ ಇನ್ನಿಂಗ್ಸ್‌ಗಳಿಂದ 3 ಮತ್ತು 6 ಕಲೆ ಹಾಕಿದ್ದರು.

ಇನ್ನೂ ಬ್ರಿಸ್ಪೇನ್ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಮೊದಲ ಇನ್ನಿಂಗ್ಸ್‌ನಲ್ಲಿ 10 ರನ್ ಗಳಿಸಿದ್ದರು. ಬಳಿಕ ಭಾರತದ ಎರಡನೇ ಇನ್ನಿಂಗ್ಸ್‌ ವೇಳೆ ಮಳೆ ಆರಂಭವಾಗಿತ್ತು. ಹೀಗಾಗಿ ರೋಹಿತ್ ಶರ್ಮಾ ಅವರಿಗೆ ಬ್ಯಾಟಿಂಗ್ ಮಾಡಲು ಅವಕಾಶ ಸಿಕ್ಕಿರಲಿಲ್ಲ. ಇದೀಗ ಮೆಲ್ಬೋರ್ನ್ ಟೆಸ್ಟ್ ಪಂದ್ಯದಲ್ಲಿ ರೋಹಿತ್ ತಮ್ಮ ಕಳಪೆ ಫಾರ್ಮ್ ಮುಂದುವರೆಸಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲ 3 ರನ್ ಗಳಿಸಿದರೆ, ಎರಡನೇ ಇನ್ನಿಂಗ್ಸ್‌ನಲ್ಲಿ 9 ರನ್‌ಗಳಿಗೆ ಔಟಾಗಿದ್ದಾರೆ. ‌

Story first published: Monday, December 30, 2024, 13:25 [IST]
Other articles published on Dec 30, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+