Pat Cummins ruled out: ಟಿ20 ವಿಶ್ವಕಪ್‌ಗೂ ಮುನ್ನ ಆಸ್ಟ್ರೇಲಿಯಾಕ್ಕೆ ಪೆಟ್ಟು
ಟಿ20 ವಿಶ್ವಕಪ್‌ಗೆ ದಿನಗಣನೆ ಆರಂಭವಾಗಿದೆ. ಈ ವೇಳೆ ಆಸ್ಟ್ರೇಲಿಯಾ ತಂಡಕ್ಕೆ ದೊಡ್ಡ ಪೆಟ್ಟು ಬಿದ್ದಿದೆ. ಆಸ್ಟ್ರೇಲಿಯಾದ ಅನುಭವಿ ವೇಗದ ಬೌಲರ್ ಪ್ಯಾಟ್ ಕಮಿನ್ಸ್ ಟೂರ್ನಿಯಿಂದ ಹೊರ ನಡೆದಿದ್ದಾರೆ. ಇವರು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇವರು ಚೇತರಿಸಿಕೊಳ್ಳದ ಕಾರಣ ಪ್ಯಾಟ್ ಕಮಿನ್ಸ್ ಟಿ20 ವಿಶ್ವಕಪ್‌ನಿಂದ ಹೊರ ನಡೆದಿದ್ದಾರೆ.
ಪ್ಯಾಟ್ ಕಮಿನ್ಸ್ ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಆಷಸ್ ಟೆಸ್ಟ್ ಸರಣಿಯ ವೇಳೆಯೂ ತಂಡಕ್ಕೆ ಅಲಭ್ಯರಾಗಿದ್ದರು. ಅಲ್ಲದೆ ಇವರು 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕೇವಲ 1 ಪಂದ್ಯದಲ್ಲಿ ಆಡಿದ್ದರು. ಶನಿವಾರ ಆಸ್ಟ್ರೇಲಿಯಾ ತನ್ನ 15 ಜನರ ತಂಡವನ್ನು ಪ್ರಕಟಿಸಿದೆ. ಮಿಚೆಲ್ ಮಾರ್ಷ್ ಮುಂದಾಳತ್ವದ ಆಸ್ಟ್ರೇಲಿಯಾ ತಂಡದಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ. ಆಸ್ಟ್ರೇಲಿಯಾ ಟಿ20 ವಿಶ್ವಕಪ್‌ನ್ನು ಎರಡನೇ ಬಾರಿ ಎತ್ತುವ ಕನಸಿನಲ್ಲಿದೆ.

ಅನುಭವಿ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್ ಮತ್ತು ಸ್ಫೋಟಕ ಆಲ್‌ರೌಂಡರ್ ಮ್ಯಾಟ್ ಶಾರ್ಟ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಆಯ್ಕೆ ಸಮಿತಿ ತಂಡದ ಸಮತೋಲನದ ಬಗ್ಗೆ ಹೆಚ್ಚಿನ ಗಮನ ಹರಿಸಿತ್ತು. ಅಲ್ಲದೆ ತಂಡದ ಬೌಲಿಂಗ್ ಬಗ್ಗೆ ಹೆಚ್ಚಿನ ಒತ್ತು ನೀಡಲಾಗಿದೆ. ಆಯ್ಕೆದಾರ ಟೋನಿ ಡೋಡೆಮೈಡ್ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಪ್ಯಾಟ್ ಕಮಿನ್ಸ್ ಇನ್ನು ಚೇತರಿಸಿಕೊಳ್ಳದಿಂದ ತಂಡದಿಂದ ಹೊರಗುಳಿದಿದ್ದಾರೆ. ಅಲ್ಲದೆ ಇವರ ಬದಲಿಗೆ ಎಡಗೈ ವೇಗಿ ಬೆನ್ ದ್ವಾರಶುಯಿಸ್ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ.
ಆಸ್ಟ್ರೇಲಿಯಾಕ್ಕೆ ಪೆಟ್ಟು
ಪ್ಯಾಟ್ ಕಮಿನ್ಸ್ ಅವರ ಗಾಯ ಗುಣಮುಖರಾಗಲು ಇನ್ನು ಸಮಯ ಹಿಡಿಯುತ್ತದೆ. ಇವರ ಬದಲಿಗೆ ಬೆನ್ ತಂಡ ಸೇರಿದ್ದು, ಇವರು ಎದುರಾಳಿಗಳನ್ನು ಕಾಡಬಲ್ಲರು. ಇವರು ಬೌಲಿಂಗ್‌ನಲ್ಲಿ ಮಿಶ್ರಣದಿಂದ ಎದುರಾಳಿಗೆ ಕಾಟ ನೀಡಬಲ್ಲರು. ಇವರು ತಂಡ ಸೇರಿದರಿಂದ ತಂಡದ ಸಮತೋಲನಕ್ಕೆ ಅನುಕೂಲವಾಗುತ್ತದೆ ಎಂದು ಟೋನಿ ಡೋಡೆಮೈಡ್ ತಿಳಿಸಿದ್ದಾರೆ.

ಗಾಯದ ಕಾರಣದಿಂದ ಪ್ಯಾಟ್ ಕಮಿನ್ಸ್ ಅವರು ಆಷಸ್ ಟೆಸ್ಟ್ ಸರಣಿಯ ಎಲ್ಲ ಪಂದ್ಯಗಳನ್ನು ಆಡಿರಲಿಲ್ಲ. ಪ್ಯಾಟ್ ಕಮಿನ್ಸ್ ಅವರ ಅನುಭವ ನಿಶ್ಚಿತವಾಗಿ ಆಸ್ಟ್ರೇಲಿಯಾ ತಂಡ ಮಿಸ್ ಮಾಡಿಕೊಳ್ಳಲಿದೆ. ಇವರು ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಮುನ್ನಡೆಸುತ್ತಿದ್ದು ಈ ತಂಡದ ಚಿಂತೆಯೂ ಸಹ ಹೆಚ್ಚಾಗಿದೆ.
ಟಿ20 ವಿಶ್ವಕಪ್‌ಗೆ ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ಸಿ), ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕಾನೊಲಿ, ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್, ಕ್ಯಾಮರೂನ್ ಗ್ರೀನ್, ನಾಥನ್ ಎಲ್ಲಿಸ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಟ್ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ರೆನ್‌ಶಾ, ಮಾರ್ಕಸ್ ಸ್ಟೊಯಿನಿಸ್, ಆಡಮ್ ಜಂಪಾ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications