Pat Cummins: ಪ್ಯಾಟ್ ಕಮಿನ್ಸ್ ಮಹತ್ವದ ಟೆಸ್ಟ್ ಸರಣಿಗೆ ಅಲಭ್ಯ
ಬಹು ನಿರೀಕ್ಷಿತ ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಕಾದಾಟ ನಡೆಸಲಿವೆ. ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲು ಟೀಮ್ ಇಂಡಿಯಾ ಆಸೀಸ್ ಪ್ರವಾಸ ಬೆಳೆಸಲಿದೆ. ಈ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ಸರಣಿಯ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.
ಈ ಸರಣಿಯ ಬಳಿಕ ಆಸ್ಟ್ರೇಲಿಯಾ ಮತ್ತೊಂದು ಟೆಸ್ಟ್ ಸರಣಿಯನ್ನು ಆಡಲು ಲಂಕಾ ಪ್ರವಾಸವನ್ನು ಕೈಗೊಳ್ಳಲಿದೆ. ಪ್ರವಾಸದಲ್ಲಿ ಆಸ್ಟ್ರೇಲಿಯಾ 2 ಟೆಸ್ಟ್ ಪಂದ್ಯ ಹಾಗೂ ಒಂದು ಏಕದಿನ ಪಂದ್ಯವನ್ನು ಆಡಲಿದೆ. ಇನ್ನು ದ್ವೀಪರಾಷ್ಟ್ರಕ್ಕೆ ಪ್ರವಾಸ ಬೆಳೆಸುವ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ತಂಡದ ಭಾಗವಾಗುವುದಿಲ್ಲ ಎಂಬುದು ತಿಳಿದು ಬಂದಿದೆ.

ಲಂಕಾ ಪ್ರವಾಸಕ್ಕೆ ಕಮಿನ್ಸ್ ಮಿಸ್ ಏಕೆ?
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಮೇಲೆ ಕಣ್ಣು ನೆಟ್ಟಿವೆ. ಭಾರತ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದು, ಆಸ್ಟ್ರೇಲಿಯಾ ತಂಡ ಎರಡನೇ ಸ್ಥಾನದಲ್ಲಿದೆ. ಉಭಯ ತಂಡಗಳಿಗೂ ಮುಂದಿನ ಎಲ್ಲ ಸರಣಿಗಳು ಮಹತ್ವದಾಗಿವೆ. ಈಗ ಬರುತ್ತಿರುವ ಮಾಹಿತಿಯ ಪ್ರಕಾರ ಪ್ಯಾಟ್ ಕಮಿನ್ಸ್ ಪ್ರವಾಸದ ಭಾಗವಾಗುವುದಿಲ್ಲ.
ಪ್ಯಾಟ್ ಕಮ್ಮಿನ್ಸ್ ಮತ್ತು ಅವರ ಪತ್ನಿ ಬೆಕಿ ಬೋಸ್ಟನ್ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಆಸ್ಟ್ರೇಲಿಯಾದ ಮುಖ್ಯ ಕೋಚ್ ಆಂಡ್ರ್ಯೂ ಮೆಕ್‌ಡೊನಾಲ್ಡ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ತಂಡವು ಕಮ್ಮಿನ್ಸ್ ನಿರ್ಧಾರವನ್ನು ಗೌರವಿಸುತ್ತದೆ ಎಂದು ತಿಳಿಸಿದ್ದಾರೆ.

ಪ್ಯಾಟ್ ಕಮ್ಮಿನ್ಸ್ ತನ್ನ ಗೆಳತಿ ಬೆಕಿ ಬೋಸ್ಟನ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಅಲ್ಲದೆ 2022 ರಲ್ಲಿ, ಇಬ್ಬರೂ ಮದುವೆಯಾದರು. ಇಬ್ಬರಿಗೂ ಅಲ್ಬಿ ಎಂಬ ಮಗನಿದ್ದಾನೆ. ಇತ್ತೀಚಿಗೆ ಸಾಮಾಜಿಕ ತಾಣದಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿದ್ದರು.
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ವೇಳಾಪಟ್ಟಿಯನ್ನು ನವೆಂಬರ್ 1 ರಂದು ಪ್ರಕಟಿಸಿದೆ. ಮೊದಲ ಟೆಸ್ಟ್ ಪಂದ್ಯ ಜನವರಿ 29 ರಿಂದ ಫೆಬ್ರವರಿ 2 ರ ನಡುವೆ ನಡೆಯಲಿದ್ದು, ಎರಡನೇ ಟೆಸ್ಟ್ ಫೆಬ್ರವರಿ 6 ರಿಂದ 10 ರ ನಡುವೆ ನಡೆಯಲಿದೆ. ಫೆಬ್ರವರಿ 13 ರಂದು ಏಕೈಕ ಏಕದಿನ ಪಂದ್ಯ ನಡೆಯಲಿದೆ. ಚಾಂಪಿಯನ್ಸ್ ಟ್ರೋಫಿಗೆ ತಯಾರಿ ನಡೆಸಲು ಈ ಸರಣಿಯ ಏಕದಿನ ಪಂದ್ಯ ಸಹಾಯಕವಾಗಲಿದೆ.
ಪ್ಯಾಟ್ ಕಮಿನ್ಸ್ ಭಾರತ ವಿರುದ್ಧದ ಟೆಸ್ಟ್ ಸರಣಿಗೆ ಸಿದ್ಧತೆ ನಡೆಸಿದ್ದಾರೆ. ಅಲ್ಲದೆ ಈ ಬಾರಿ ತವರಿನ ಅಭಿಮಾನಿಗಳ ಸಮ್ಮುಖದಲ್ಲಿ ಭರ್ಜರಿ ಪ್ರದರ್ಶನ ನೀಡುವ ಸೂಚನೆ ನೀಡಿದ್ದಾರೆ. ಅಲ್ಲದೆ ಭಾರತದ ಹ್ಯಾಟ್ರಿಕ್ ಟ್ರೋಫಿ ಗೆಲುವಿನ ಕನಸಿಗೆ ಪೆಟ್ಟು ನೀಡುವ ಇರಾದೆಯನ್ನು ಹೊಂದಿರುವುದಾಗಿ ತಿಳಿಸಿದ್ದಾರೆ. ಭಾರತ ಬಲಿಷ್ಠ ತಂಡವಾಗಿದ್ದು, ಕಳೆದ ಪ್ರವಾಸದ ವೇಳೆ ಟೀಮ್ ಇಂಡಿಯಾ ಗೆಲುವು ಸಾಧಿಸಿದ್ದು. ಆದರೆ ಈ ಬಾರಿ ನಮ್ಮ ತಂಡ ಸ್ಥಿರ ಪ್ರದರ್ಶನ ನೀಡಿ ಗೆಲುವು ಸಾಧಿಸುವ ಗುರಿಯನ್ನು ಹೊಂದಲಾಗಿದೆ ಎಂದು ತಿಳಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications