Pat Cummins: ಚಾಂಪಿಯನ್ಸ್ ಟ್ರೋಫಿಯಲ್ಲಿ ಪ್ಯಾಟ್ ಕಮಿನ್ಸ್ ಆಡುವುದು ಅನುಮಾನ!
ಫೆಬ್ರವರಿ 19 ರಿಂದ ಪಾಕಿಸ್ತಾನ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಗೂ ಮುನ್ನ ಆಸ್ಟ್ರೇಲಿಯಾ ತಂಡ ದೊಡ್ಡ ಹಿನ್ನಡೆ ಅನುಭವಿಸಿದೆ. ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಪ್ರಕಟವಾಗಿರುವ ಆಸ್ಟ್ರೇಲಿಯಾ ತಂಡದಿಂದ ನಾಯಕ ಪ್ಯಾಟ್ ಕಮ್ಮಿನ್ಸ್ ಹೊರಗುಳಿದಿದ್ದಾರೆ. ಇತ್ತೀಚೆಗೆ ಮುಕ್ತಾಯವಾದ ಭಾರತ ವಿರುದ್ದದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಗೆಲುವಿನಲ್ಲಿ ಪ್ಯಾಟ್ ಕಮ್ಮಿನ್ಸ್ ಪ್ರಮುಖ ಪಾತ್ರವಹಿಸಿದ್ದರು. ಇದೀಗ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಕಮ್ಮಿನ್ಸ್ ಬದಲಿಗೆ ಸ್ಟೀವ್ ಸ್ಮಿತ್ ನಾಯಕರಾಗಿ ಮುನ್ನಡೆಸಲಿದ್ದಾರೆ.
ಚಾಂಪಿಯನ್ಸ್ ಟ್ರೋಫಿ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಟೂರ್ನಿಗಳು ಸಮೀಪಿಸುತ್ತಿರುವಾಗ ಪ್ಯಾಟ್ ಕಮ್ಮಿನ್ಸ್ ಗಾಯಗೊಂಡಿದ್ದು, ಅವರು ಈ ಐಸಿಸಿ ಟೂರ್ನಿಗಳಲ್ಲಿ ಆಡುತ್ತಾರಾ? ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಈ ಬಗ್ಗೆ ಕ್ರಿಕೆಟ್ ಆಸ್ಟ್ರೇಲಿಯಾ ಹೆಚ್ಚಿನ ಮಾಹಿತಿಯನ್ನು ಹಂಚಿಕೊಂಡಿಲ್ಲ.

ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಸಂದರ್ಭದಲ್ಲಿ ಪ್ಯಾಟ್ ಕಮ್ಮಿನ್ಸ್ ಪಾದದ ಗಾಯದ ಸಮಸ್ಯೆಯನ್ನು ಎದುರಿಸಬೇಕಾಯಿತು. ಕಮ್ಮಿನ್ಸ್ ಪ್ರಸ್ತುತ ಪಿತೃತ್ವ ರಜೆಯಲ್ಲಿದ್ದಾರೆ. ಅವರ ಎರಡನೇ ಮಗುವಿನ ಜನನಕ್ಕಾಗಿ ಕಾಯುತ್ತಿದ್ದಾರೆ. ಹೀಗಾಗಿ ಮುಂಬರುವ ಶ್ರೀಲಂಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಗೆ ಕಮ್ಮಿನ್ಸ್ ಅವರನ್ನು ತಂಡದಿಂದ ಹೊರಗಿಡಲಾಗಿದೆ. ಅವರ ಬದಲಿಗೆ ತಂಡದ ನಾಯಕತ್ವವನ್ನು ಸ್ಟೀವ್ ಸ್ಮಿತ್‌ಗೆ ವಹಿಸಲಾಗಿದೆ.
ಜಾರ್ಜ್ ಬೈಲಿ ಹೇಳಿದ್ದೇನು?
ಕಮ್ಮಿನ್ಸ್ ಅವರ ಗಾಯದ ಬಗ್ಗೆ ಆಸ್ಟ್ರೇಲಿಯಾದ ಆಯ್ಕೆ ಸಮಿತಿಯ ಅಧ್ಯಕ್ಷ ಜಾರ್ಜ್ ಬೈಲಿ ಮಾತನಾಡಿದ್ದಾರೆ. ಮುಂಬರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಮ್ಮಿನ್ಸ್ ಆಡುವ ಬಗ್ಗೆ ಇನ್ನೂ ಅನುಮಾನವಿದೆ. ಸದ್ಯ ಪ್ಯಾಟ್ ಪ್ರಸ್ತುತ ಪಿತೃತ್ವ ರಜೆಯಲ್ಲಿದ್ದಾರೆ. ಅವರ ಪಾದಕ್ಕೆ ಸ್ವಲ್ಪ ಗಾಯವಾಗಿದೆ. ಅವರು ಮುಂದಿನ ವಾರ ಸ್ಕ್ಯಾನ್ ಮಾಡಿಸಿಕೊಳ್ಳುತ್ತಿದ್ದಾರೆ. ನಂತರ ನಾವು ಅವರ ಸ್ಥಿತಿಯ ಬಗ್ಗೆ ನಿಖರವಾದ ಮಾಹಿತಿ ನೀಡುತ್ತೇವೆ ಎಂದಿದ್ದಾರೆ.
ಗಾಯದ ಸುಳಿಯಲ್ಲಿ ಆಸೀಸ್
ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರರು ಗಾಯಗಳಿಂದ ಬಳಲುತ್ತಿದ್ದಾರೆ. ಬಾರ್ಡರ್-ಗವಾಸ್ಕರ್ ಟ್ರೋಫಿ ಸಮಯದಲ್ಲಿ ಕಮ್ಮಿನ್ಸ್ ನೋವಿನ ನಡುವೆಯೂ ಆಡಿದ್ದರು. ಆದರೆ ಮಿಚೆಲ್ ಸ್ಟಾರ್ಕ್ ನಾಲ್ಕನೇ ಟೆಸ್ಟ್‌ನಲ್ಲಿ ಗಾಯಗೊಂಡು, ಸಿಡ್ನಿ ಟೆಸ್ಟ್‌ನಲ್ಲಿ ಆಡುವಲ್ಲಿ ಯಶಸ್ವಿಯಾದರು. ಬಲಗೈ ವೇಗದ ಬೌಲರ್ ಜೋಶ್ ಹ್ಯಾಜಲ್‌ವುಡ್ ಗಾಯದ ಕಾರಣ ಗಬ್ಬಾ ಟೆಸ್ಟ್ ನಂತರ ಹೊರಗುಳಿದಿದ್ದರು. ಇದೀಗ ಶ್ರೀಲಂಕಾ ಪ್ರವಾಸದ ತಂಡದಲ್ಲಿ ಅವರಿಗೆ ಸ್ಥಾನ ನೀಡಿಲ್ಲ. ಈ ಬಗ್ಗೆ ಮಾತನಾಡಿರುವ ಜಾರ್ಜ್ ಬೈಲಿ, ಜೋಶ್ ಹ್ಯಾಜಲ್‌ವುಡ್ ಅವರು ಚಾಂಪಿಯನ್ಸ್ ಟ್ರೋಫಿ ಟೂರ್ನಿ ವೇಳೆ ತಂಡಕ್ಕೆ ಸೇರಿಕೊಳ್ಳಲಿದ್ದಾರೆ ಎಂಬ ಭರವಸೆಯನ್ನು ನೀಡಿದ್ದಾರೆ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications