PBKS beat SRH: ಸನ್ ಸವಾಲನ್ನು ಮೀರಿ ನಿಂತ ಪಂಜಾಬ್ ಕಿಂಗ್ಸ್
ನ್ಯೂ ಚಂಡೀಗಢ: ಭರವಸೆಯ ಬ್ಯಾಟರ್ ಪ್ರಿಯಾಂಶ್ ಆರ್ಯ, ನಾಯಕ ಶ್ರೇಯಸ್ ಅಯ್ಯರ್ ಅವರು ಬಾರಿಸಿದ ಅರ್ಧಶತಕದ ಬಲದಿಂದ ಪಂಜಾಬ್ ಕಿಂಗ್ಸ್ 19ನೇ ಆವೃತ್ತಿ ಐಪಿಎಲ್ 17ನೇ ಪಂದ್ಯದಲ್ಲಿ 6 ವಿಕೆಟ್‌ಗಳಿಂದ ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್) ತಂಡವನ್ನು ಮಣಿಸಿತು. ಈ ಮೂಲಕ ಪಂಜಾಬ್ ಆಡಿದ 4 ಪಂದ್ಯಗಳಲ್ಲಿ 3 ಜಯದೊಂದಿಗೆ 7 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.
ಸವಾಲಿನ ಮೊತ್ತವನ್ನು ಹಿಂಬಾಲಿಸಿದ ಪಂಜಾಬ್ ಕಿಂಗ್ಸ್ ತಂಡದ ಆರಂಭ ಭರ್ಜರಿಯಾಗಿತ್ತು. ಯುವ ಆರಂಭಿಕ ಆಟಗಾರರಾದ ಪ್ರಿಯಾಂಶ್ ಆರ್ಯ, ಪ್ರಭಸಿಮ್ರನ್ ಸಿಂಗ್ ಜೋಡಿ ಅಮೋಘ ಜೊತೆಯಾಟವನ್ನು ನೀಡಿತು. ಈ ಜೋಡಿ 99 ರನ್‌ಗಳ ಜೊತೆಯಾಟವನ್ನು ನೀಡಿತು. ಪ್ರಿಯಾಂಶ್ ಆರ್ಯ 5 ಬೌಂಡರಿ, 5 ಸಿಕ್ಸರ್ ಸಹಾಯದಿಂದ 57 ರನ್ ಸಿಡಿಸಿದರು. ಇನ್ನೊಬ್ಬ ಆರಂಭಿಕ ಆಟಗಾರ ಪ್ರಭ್‌ಸಿಮ್ರನ್ ಸಿಂಗ್ 25 ಎಸೆತಗಳಲ್ಲಿ 4 ಬೌಂಡರಿ, 4 ಸಿಕ್ಸರ್ ಸಹಾಯದಿಂದ 51 ರನ್ ಸಿಡಿಸಿದರು.

ಶ್ರೇಯಸ್ ಅಯ್ಯರ್ ಅಬ್ಬರ
ನಾಯಕ ಶ್ರೇಯಸ್ ಅಯ್ಯರ್ ಅಮೋಘ ಬ್ಯಾಟಿಂಗ್ ನಡೆಸಿದರು. ಇವರು 33 ಎಸೆತಗಳಲ್ಲಿ ಅಜೇಯ 69 ರನ್ ಸಿಡಿಸಿದರು. ಇವರ ಮನಮೋಹಕ ಇನಿಂಗ್ಸ್‌ನಲ್ಲಿ 5 ಬೌಂಡರಿ, 5 ಸಿಕ್ಸರ್ ಸೇರಿವೆ. ಉಳಿದಂತೆ ನೇಹಲ್ ವಧೇರಾ 14, ಶಶಾಂಕ್ ಸಿಂಗ್ ಅಜೇಯ 16 ರನ್ ಸಿಡಿಸಿದರು. ಅಂತಿಮವಾಗಿ ಪಂಜಾಬ್ 18.5 ಓವರ್‌ಗಳಲ್ಲಿ 4 ವಿಕೆಟ್‌ಗೆ 223 ರನ್ ಸೇರಿಸಿತು.
ಅಭಿಷೇಕ್, ಹೆಡ್ ಜೊತೆಯಾಟದ ಸೊಬಗು
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ತಂಡದ ಆರಂಭ ಭರ್ಜರಿಯಾಗಿತ್ತು. ಆರಂಭಿಕರಾದ ಟ್ರಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ ಮನಮೋಹಕ ಜೊತೆಯಾಟದ ಕಾಣಿಕೆ ನೀಡಿದರು. ಮೊದಲ ವಿಕೆಟ್‌ಗೆ ಈ ಜೋಡಿ ಅಬ್ಬರ ನಡೆಸಿತು. ಪವರ್ ಪ್ಲೇನಲ್ಲಿ ಬೌಂಡರಿ ಹಾಗೂ ಸಿಕ್ಸರ್‌ಗಳನ್ನು ಬಾರಿಸಿ ರನ್ ವೇಗಕ್ಕೆ ಚುರುಕು ಮುಟ್ಟಿಸಿತು. ಇನ್ನು ಮೊದಲ ವಿಕೆಟ್‌ಗೆ ಅಭಿಷೇಕ್, ಹೆಡ್ ಜೋಡಿ 8.1 ಓವರ್‌ಗಳಲ್ಲಿ 120 ರನ್ ಸೇರಿಸಿತು. ಈ ಹಂತದಲ್ಲಿ ಟ್ರಾವಿಸ್ ಹೆಡ್ 38 ರನ್ ಸಿಡಿಸಿದರು.

ಸ್ಫೋಟಕ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ 28 ಎಸೆತಗಳಲ್ಲಿ 5 ಬೌಂಡರಿ, 8 ಸಿಕ್ಸರ್ ಸಹಾಯದಿಂದ 74 ರನ್ ಬಾರಿಸಿ ಅಬ್ಬರಿಸಿದರು. ಪರಿಣಾಮ ಎಸ್‌ಆರ್‌ಎಚ್ ದೊಡ್ಡ ಮೊತ್ತದ ಕನಸು ಕಾಣಲು ನೆರವಾದರು.
ನಾಯಕ ಇಶಾನ್ ಕಿಶನ್ 27, ಹೆನ್ರಿಕ್ ಕ್ಲಾಸೆನ್ 39, ಅನಿಕೆತ್ ವರ್ಮಾ 18 ರನ್ ಬಾರಿಸಿ ತಂಡದ ಮೊತ್ತವನ್ನು ಕೊಂಚ ಹಿಗ್ಗಿಸಿದರು. ಉಳಿದ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ಹಿಂದೆ ಬಿದ್ದರು. ಪರಿಣಾಮ ಎಸ್‌ಆರ್‌ಎಚ್ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 219 ರನ್ ಸಿಡಿಸಿತು. ಮಧ್ಯಮ ಕ್ರಮಾಂಕದಲ್ಲಿ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದರಿಂದ ತಂಡದ ಮೊತ್ತ ಹಿಗ್ಗಿಸುವಲ್ಲಿ ಸಫಲವಾಗಲಿಲ್ಲ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications