ಕುಂಬ್ಳೆ ಮಾಸ್ಟರ್‌ಮೈಂಡ್: ಮೆಗಾ ಹರಾಜಿನ ಬಳಿಕ ಸಿಕ್ಕಾಪಟ್ಟೆ ಬಲಿಷ್ಠವಾಗಿದೆ ಪಂಜಾಬ್ ಕಿಂಗ್ಸ್

ಮುಂಬರುವ ಮಾರ್ಚ್ ಕೊನೆಯ ವಾರ ಅಥವಾ ಏಪ್ರಿಲ್ ತಿಂಗಳಿನಲ್ಲಿ ಆರಂಭವಾಗಲಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ದಿನಗಣನೆ ಆರಂಭವಾಗಿವೆ. ಟೂರ್ನಿ ಸಮೀಪಿಸುತ್ತಿದ್ದಂತೆ ಟೂರ್ನಿಯ ಕುರಿತಾದ ಹಲವಾರು ಚಟುವಟಿಕೆಗಳು ಗರಿಗೆದರಿದ್ದು, ಕಳೆದ ಹಲವಾರು ತಿಂಗಳುಗಳಿಂದಲೂ ದೊಡ್ಡ ಮಟ್ಟದ ಸದ್ದು ಮಾಡುತ್ತಾ ಬಂದಿದೆ.
ಇದರ ನಡುವೆಯೇ ಕಳೆದ ಶನಿವಾರ ಹಾಗೂ ಭಾನುವಾರದಂದು ನಡೆದ ಮೆಗಾ ಹರಾಜು ಪ್ರಕ್ರಿಯೆ ಸದ್ಯ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಕುರಿತಾದ ಕುತೂಹಲ ಹಾಗೂ ನಿರೀಕ್ಷೆಯ ಮಟ್ಟವನ್ನು ತುಂಬಾ ದೊಡ್ಡ ಮಟ್ಟಕ್ಕೆ ಕೊಂಡೊಯ್ದಿದೆ. ಹೌದು, ಫೆಬ್ರವರಿ 12 ಹಾಗೂ 13ರಂದು ಬೆಂಗಳೂರಿನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿನಲ್ಲಿ ಒಟ್ಟು 590 ಆಟಗಾರರು ಭಾಗವಹಿಸಿದ್ದು, 203 ಆಟಗಾರರು ಯಶಸ್ವಿಯಾಗಿ ಬಿಕರಿಯಾಗಿದ್ದಾರೆ. ಹೀಗೆ ಯಶಸ್ವಿಯಾಗಿ ಹರಾಜಾದ ಆಟಗಾರರ ಪೈಕಿ 66 ವಿದೇಶಿ ಆಟಗಾರರಿದ್ದರೆ, ಇನ್ನುಳಿದ 137 ಆಟಗಾರರು ಭಾರತೀಯರಾಗಿದ್ದಾರೆ. ಹೀಗೆ ಯಶಸ್ವಿಯಾಗಿ ನಡೆದ ಐಪಿಎಲ್ ಮೆಗಾ ಹರಾಜು ಮುಕ್ತಾಯಗೊಂಡ ನಂತರ ಅಭಿಮಾನಿಗಳಲ್ಲಿ ತುಂಬಾ ದಿನಗಳಿಂದ ಇದ್ದ ಯಾವ ಆಟಗಾರರನ್ನು ಯಾವ ಫ್ರಾಂಚೈಸಿ ಖರೀದಿಸಲಿದೆ ಎಂಬ ಪ್ರಶ್ನೆಗಳಿಗೆ ಉತ್ತರ ಸಿಕ್ಕಂತಾಗಿದೆ.
ಇನ್ನು ಈ ಐಪಿಎಲ್ ಮೆಗಾ ಹರಾಜಿನಲ್ಲಿ ಎಲ್ಲಾ ಹತ್ತು ಫ್ರಾಂಚೈಸಿಯ ಸದಸ್ಯರು ತಮ್ಮ ತಂಡಕ್ಕೆ ಅಗತ್ಯವಿರುವ ಹಾಗೂ ಸೂಕ್ತವಾದ ಆಟಗಾರರನ್ನು ಖರೀದಿಸುವತ್ತ ಚಿತ್ತ ನೆಟ್ಟಿದ್ದರು. ಕೆಲ ಫ್ರಾಂಚೈಸಿಗಳು ನಿರ್ದಿಷ್ಟ ಆಟಗಾರರನ್ನು ಟಾರ್ಗೆಟ್ ಮಾಡಿ ಬಿಡ್ ಮಾಡಿದರೆ, ಇನ್ನೂ ಕೆಲ ಫ್ರಾಂಚೈಸಿಗಳು ಹರಾಜಿನಲ್ಲಿ ಭಾಗವಹಿಸಿದ್ದ ಉತ್ತಮ ಪ್ರದರ್ಶನ ನೀಡಬಲ್ಲ ಪ್ರತಿಭಾವಂತ ಆಟಗಾರರನ್ನು ಗುರಿಯನ್ನಾಗಿಸಿ ಬಿಡ್ ಮಾಡಿ ತಮ್ಮ ತೆಕ್ಕೆಗೆ ಹಾಕಿಕೊಂಡವು. ಹೀಗೆ ಜಾಣ್ಮೆಯಿಂದ ಆಟಗಾರರನ್ನು ಖರೀದಿಸಿದ ಫ್ರಾಂಚೈಸಿಗಳಲ್ಲಿ ಪಂಜಾಬ್ ಕಿಂಗ್ಸ್ ಕೂಡ ಒಂದು. ಪಂಜಾಬ್ ಕಿಂಗ್ಸ್ ಹರಾಜಿನ ಟೇಬಲ್‌ನಲ್ಲಿ ಅನಿಲ್ ಕುಂಬ್ಳೆ ಇದ್ದ ಕಾರಣ ಉತ್ತಮ ಆಟಗಾರರನ್ನು ಆಯ್ಕೆ ಮಾಡಿಕೊಳ್ಳುವಲ್ಲಿ ಪಂಜಾಬ್ ಕಿಂಗ್ಸ್ ಯಶಸ್ವಿಯಾಗಿದೆ. ಇನ್ನು ಮೆಗಾ ಹರಾಜು ಪ್ರಕ್ರಿಯೆ ಮುಕ್ತಾಯಗೊಂಡ ನಂತರ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಎಷ್ಟು ಆಟಗಾರರನ್ನು ಹೊಂದಿದೆ ಎಂಬುದರ ಕುರಿತಾದ ಸಂಪೂರ್ಣ ವಿವರ ಈ ಕೆಳಕಂಡಂತಿದೆ..

ಮೆಗಾ ಹರಾಜಿನ ನಂತರ ಪಂಜಾಬ್ ಕಿಂಗ್ಸ್ ತಂಡ
ಮೆಗಾ ಹರಾಜು ಪ್ರಕ್ರಿಯೆ ಮುಕ್ತಾಯಗೊಂಡ ನಂತರ ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯ ಪಾಲಾಗಿರುವ ಆಟಗಾರರ ಪಟ್ಟಿ: ಮಯಾಂಕ್ ಅಗರ್ವಾಲ್, ಅರ್ಶ್ದೀಪ್ ಸಿಂಗ್, ಶಿಖರ್ ಧವನ್, ಕಗಿಸೊ ರಬಾಡ, ಜಾನಿ ಬೈರ್‌ಸ್ಟೋವ್, ರಾಹುಲ್ ಚಾಹರ್, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ಪ್ರಭಾಸಿಮ್ರಾನ್ ಸಿಂಗ್, ಜಿತೇಶ್ ಶರ್ಮಾ, ಇಶಾನ್ ಪೊರೆಲ್, ಲಿಯಾಮ್ ಲಿವಿಂಗ್‌ಸ್ಟೋನ್, ಓಡಿಯನ್ ಸ್ಮಿತ್, ಸಂದೀಪ್ ಶರ್ಮಾ, ರಾಜ್ ಬಾವಾ, ಪ್ರೀರಾಕ್ ಮಾನ್ಕಾ , ವೈಭವ್ ಅರೋರಾ, ರಿಟಿಕ್ ಚಟರ್ಜಿ, ಬಲ್ತೇಜ್ ಧಂಡಾ, ಅನ್ಶ್ ಪಟೇಲ್, ನಾಥನ್ ಎಲ್ಲಿಸ್, ಅಥರ್ವ ಟೈಡೆ, ಭಾನುಕಾ ರಾಜಪಕ್ಸೆ, ಬೆನ್ನಿ ಹೋವೆಲ್

ಹೆಚ್ಚು ಹಣ ಹೊಂದಿದ್ದು ಪಂಜಾಬ್ ಕಿಂಗ್ಸ್ ಪಾಲಿಗೆ ಪ್ಲಸ್ ಪಾಯಿಂಟ್
ಕಳೆದ ರಿಟೆನ್ಷನ್ ಪ್ರಕ್ರಿಯೆಯಲ್ಲಿ ಮಯಾಂಕ್ ಅಗರ್ವಾಲ್ ಮತ್ತು ಅರ್ಶದೀಪ್ ಸಿಂಗ್ ಈ ಇಬ್ಬರು ಆಟಗಾರರನ್ನು ಮಾತ್ರ ಉಳಿಸಿಕೊಂಡಿದ್ದ ಪಂಜಾಬ್ ಕಿಂಗ್ಸ್ 72 ಕೋಟಿಯ ದೊಡ್ಡ ಮೊತ್ತದೊಂದಿಗೆ ಮೆಗಾ ಹರಾಜಿನಲ್ಲಿ ಭಾಗವಹಿಸಿತು. ಹೀಗೆ ಹೆಚ್ಚು ಹಣ ಹೊಂದಿದ್ದ ಪಂಜಾಬ್ ಕಿಂಗ್ಸ್ ಮೆಗಾ ಹರಾಜಿನಲ್ಲಿ ಹಣ ಉಳಿಸುವ ಕುರಿತು ಯೋಚಿಸದೇ ಉತ್ತಮ ಆಟಗಾರರನ್ನು ಆರಂಭದಿಂದಲೇ ಖರೀದಿಸುತ್ತಾ ಬಂತು. ಕೈನಲ್ಲಿ ಹೆಚ್ಚು ಹಣ ಮತ್ತು ಅನಿಲ್ ಕುಂಬ್ಳೆ ಮಾರ್ಗದರ್ಶನವಿದ್ದ ಪಂಜಾಬ್ ಕಿಂಗ್ಸ್ ಈ ಬಾರಿಯ ಮೆಗಾ ಹರಾಜಿನಲ್ಲಿ ಒಳ್ಳೆಯ ತಂಡವನ್ನು ಕಟ್ಟಿದೆ ಎಂಬ ಅಭಿಪ್ರಾಯಗಳು ಹೆಚ್ಚಾಗಿ ವ್ಯಕ್ತವಾಗುತ್ತಿವೆ.

18 ಭಾರತೀಯ ಆಟಗಾರರನ್ನು ಖರೀದಿಸಿದ ಪಂಜಾಬ್ ಕಿಂಗ್ಸ್
ಹೀಗೆ ಹೆಚ್ಚು ಹಣದೊಂದಿಗೆ ಮೆಗಾ ಹರಾಜಿನಲ್ಲಿ ಭಾಗವಹಿಸಿದ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಒಟ್ಟು 25 ಆಟಗಾರರನ್ನು ಸದ್ಯ ತಂಡದಲ್ಲಿ ಹೊಂದಿದೆ. ಈ 25 ಆಟಗಾರರ ಪೈಕಿ 18 ಭಾರತೀಯ ಆಟಗಾರರಿದ್ದರೆ, 7 ವಿದೇಶಿ ಆಟಗಾರರಿದ್ದಾರೆ. ಇನ್ನು ಹರಾಜಿನಲ್ಲಿ ವೇಗಿ ಕಗಿಸೊ ರಬಾಡಗೆ 9.25 ಕೋಟಿ ಹೂಡಿದ ಪಂಜಾಬ್ ಕಿಂಗ್ಸ್ ಆರಂಭಿಕ ಆಟಗಾರ ಶಿಖರ್ ಧವನ್ ಅವರನ್ನು 8.25 ಕೋಟಿಗೆ ತನ್ನ ತೆಕ್ಕೆಗೆ ಹಾಕಿಕೊಂಡಿತು. ಇನ್ನುಳಿದಂತೆ ವಿಕೆಟ್ ಕೀಪರ್ ಜಾನಿ ಬೈರ್ ಸ್ಟೋ 6.75 ಕೋಟಿ, ರಾಹುಲ್ ಚಾಹರ್ 5.25 ಕೋಟಿ, ಓಡಿಯನ್ ಸ್ಮಿತ್ 6 ಕೋಟಿ ಪಡೆದರೆ, ಮತ್ತೆ ಪಂಜಾಬ್ ಕಿಂಗ್ಸ್ ಸೇರಿದ ಶಾರುಖ್ ಖಾನ್ 9 ಕೋಟಿ ಮತ್ತು ಆಲ್ ರೌಂಡರ್ ಲಿಯಾಮ್ ಲಿವಿಂಗ್‌ಸ್ಟನ್ ಬರೋಬ್ಬರಿ 11.5 ಕೋಟಿ ಬಾಚಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications