Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

PBKS vs DC: ಗೆಲುವಿನ ಟ್ರ್ಯಾಕ್‌ಗೆ ಮರಳಲು ಕಿಂಗ್ಸ್‌,ಕ್ಯಾಪಿಟಲ್ಸ್‌ ಪ್ಲ್ಯಾನ್

ಧರ್ಮಶಾಲಾ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್‌) 19ನೇ ಆವೃತ್ತಿಯ 55ನೇ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ (ಡಿಸಿ) ತಂಡಗಳು ಕಾದಾಟ ನಡೆಸಲಿವೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಪ್ಲೇ ಆಫ್‌ಗೆ ಹತ್ತರವಾಗುವ ಕನಸು ಉಭಯ ತಂಡಗಳದ್ದಾಗಿದೆ. ಉಭಯ ತಂಡಗಳು ಹಿಂದಿನ ಪಂದ್ಯದಲ್ಲಿ ಸೋಲು ಕಂಡಿದ್ದು ಗೆಲುವಿನ ಟ್ರ್ಯಾಕ್‌ಗೆ ಮರಳುವ ಪ್ಲ್ಯಾನ್ ಮಾಡಿಕೊಂಡಿದೆ.

ಉಭಯ ತಂಡಗಳು ಈಗಾಗಲೇ ಐಪಿಎಲ್‌ನಲ್ಲಿ 36 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಡೆಲ್ಲಿ 17 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಪಂಜಾಬ್ ಕಿಂಗ್ಸ್‌ 18 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಎರಡೂ ತಂಡಗಳಲ್ಲಿ ಸ್ಟಾರ್ ಆಟಗಾರರು ಇದ್ದು ರೋಚಕತೆ ಹೆಚ್ಚಿಸಿದೆ.

PBKS vs DC

ಲೀಗ್‌ನ ಆರಂಭದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಪಂಜಾಬ್‌ ತಂಡ ರಾಯಲ್ಸ್‌, ಟೈಟಾನ್ಸ್‌, ಹೈದರಾಬಾದ್ ವಿರುದ್ಧ ಸೋಲು ಕಂಡಿದ್ದು, ಹ್ಯಾಟ್ರಿಕ್ ಸೋಲಿನ ಕಹಿಯನ್ನು ಕಂಡಿದೆ. ಅಲ್ಲದೆ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿ ಗೆಲುವಿನ ಲಯಕ್ಕೆ ಮರಳಲು ಪ್ಲ್ಯಾನ್ ಮಾಡಿಕೊಂಡಿದೆ. ಪಂಜಾಬ್ ತಂಡದಲ್ಲಿ ಯುವ ಆಟಗಾರರ ದಂಡೇ ಇದೆ. ಪ್ರಿಯಾಂಶ್ ಆರ್ಯ, ಪ್ರಭ್‌ ಸಿಮ್ರನ್‌ ಸಿಂಗ್ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡುವ ಅನಿವಾರ್ಯತೆ ಇದೆ. ಕೂಪರ್ ಕಾನೋಲಿ, ಶ್ರೇಯಸ್ ಅಯ್ಯರ್‌, ಮಾರ್ಕಸ್‌ ಸ್ಟೋಯ್ನಿಸ್‌ ಮಧ್ಯಮ ಕ್ರಮಾಂಕದಲ್ಲಿ ಬಲ ತುಂಬ ಬಲ್ಲ ಆಟಗಾರರು. ಉಳಿದ ಆಟಗಾರರು ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ 2 ಅಂಕದ ಕನಸು ನನಸಾಗುತ್ತದೆ.

ಚಹಾಲ್ ಆಕರ್ಷಣೆ

ವೇಗದ ಬೌಲಿಂಗ್ ವಿಭಾಗದಲ್ಲಿ ಅರ್ಷದೀಪ್ ಸಿಂಗ್, ಮಾರ್ಕೊ ಜಾನ್ಸನ್‌, ಲಾಕಿ ಫಾರ್ಗ್ಯೂಸನ್‌ ಬಿಗುವಿನ ದಾಳಿಯನ್ನು ನಡೆಸಿ ತಂಡಕ್ಕೆ ಆಧಾರವಾಗಬೇಕಿದೆ. ಮಧ್ಯದ ಓವರ್‌ಗಳಲ್ಲಿ ವಿಜಯ್‌ಕುಮಾರ್ ವೈಶಾಖ್ ಹಾಗೂ ಸ್ಪಿನ್ ಬೌಲರ್ ಯುಜುವೇಂದ್ರ ಚಹಾಲ್‌ ಕಮಾಲ್‌ ಬೌಲಿಂಗ್ ನಡೆಸಬೇಕಿದೆ ಅಂದಾಗ ಗೆಲುವಿನ ದಾರಿ ಸುಗಮವಾಗುತ್ತದೆ.

ಒತ್ತಡದಲ್ಲಿ ಆರಂಭಿಕ ಆಟಗಾರರು

ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೆಕೆಆರ್ ವಿರುದ್ಧ ಸೋಲಿನ ಆಘಾತ ಅನುಭವಿಸಿತ್ತು. ಡೆಲ್ಲಿ ತಂಡದ ಪರ ಆರಂಭಿಕರಾಗಿ ಕಾಣಸಿಕೊಳ್ಳುವ ಪತುಮ್ ನಿಸ್ಸಾಂಕ ಹಾಗೂ ಕೆಎಲ್ ರಾಹುಲ್ ಸಮಯೋಚಿತ ಬ್ಯಾಟಿಂಗ್ ಜೊತೆಯಾಟದ ಕಾಣಿಕೆ ನೀಡಿದಬೇಕಿದೆ. ಕೆಎಲ್ ರಾಹುಲ್ ಮತ್ತೆ ಲಯಕ್ಕೆ ಮರಳುವುದು ಅವಶ್ಯಕವಾಗಿದೆ. ಮಧ್ಯದ ಕ್ರಮಾಂಕದಲ್ಲಿ ನಿತೀಶ್ ರಾಣಾ, ಸಮೀರ್ ರಿಜ್ವಿ, ಟ್ರಿಸ್ಟನ್‌ ಸ್ಟಬ್ಸ್‌, ಆಶುತೋಶ್ ಶರ್ಮಾ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿ ತಂಡಕ್ಕೆ ಆಧಾರವಾಗಬೇಕಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬೌಲಿಂಗ್ ವಿಭಾಗವನ್ನು ಅನುಭವಿ ಮಿಚೆಲ್‌ ಸ್ಟಾರ್ಕ್‌ ಮುನ್ನಡೆಸಲಿದ್ದಾರೆ. ಇವರಿಗೆ ಲುಂಗಿ ಎನ್‌ಗಿಡಿ, ಮುಕೇಶ್ ಕುಮಾರ್ ಉತ್ತಮ ಸಾಥ್ ನೀಡುವ ಅನಿವಾರ್ಯತೆ ಇದೆ. ಸ್ಪಿನ್ ಬೌಲಿಂಗ್ ಭಾರವನ್ನು ಅಕ್ಷರ್ ಪಟೇಲ್‌, ಕುಲ್‌ದೀಪ್ ಯಾದವ್ ಹೊರಲಿದ್ದಾರೆ. ಕುಲ್‌ದೀಪ್‌ ಕೆಲವು ಪಂದ್ಯಗಳಲ್ಲಿ ಬಿಗುವಿನ ದಾಳಿ ನಡೆಸುವಲ್ಲಿ ವಿಫಲವಾಗಿದ್ದು, ಒತ್ತಡದಲ್ಲಿದ್ದಾರೆ.

ಪಂದ್ಯದ ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌ ನೆಟ್‌ವರ್ಕ್
ಪಂದ್ಯದ ಸಮಯ: ಸಂಜೆ 7.30ಕ್ಕೆ

Story first published: Sunday, May 10, 2026, 18:10 [IST]
Other articles published on May 10, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+