Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

PBKS vs GT IPL 2024: ಗುಜರಾತ್ ಟೈಟನ್ಸ್ ಆಲ್‌ರೌಂಡ್ ಪ್ರದರ್ಶನ; ಪಂಜಾಬ್ ಕಿಂಗ್ಸ್‌ಗೆ ಸೋಲುಣಿಸಿದ ಗಿಲ್ ಪಡೆ

ಭಾನುವಾರ, ಏಪ್ರಿಲ್ 21ರಂದು ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 37ನೇ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್ ತಂಡದ ವಿರುದ್ಧ ಗುಜರಾತ್‌ ಟೈಟನ್ಸ್ ತಂಡ ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.

ಈ ಮೂಲಕ ಗುಜರಾತ್‌ ಟೈಟನ್ಸ್ ತಂಡವು ಐಪಿಎಲ್ 2024ರಲ್ಲಿ ಆಡಿದ 8 ಪಂದ್ಯಗಳಲ್ಲಿ 4 ಗೆಲುವು ಮತ್ತು 4 ಸೋಲು ಕಂಡಿದ್ದು, 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಜಿಗಿದಿದೆ. ಇನ್ನು ಪಂಜಾಬ್ ಕಿಂಗ್ಸ್ ತಂಡ ಆಡಿದ 8 ಪಂದ್ಯಗಳಲ್ಲಿ 2 ಗೆಲುವು ಮತ್ತು 6 ಸೋಲು ಅನುಭವಿಸಿದಂತಾಗಿದ್ದು, ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲೇ ಮುಂದುವರೆದಿದೆ.

PBKS vs GT IPL 2024 Gujarat Titans Beat Punjab Kings By 3 Wickets In 37th Match

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ ಯಾವುದೇ ಅರ್ಧಶತಕ ಗಳಿಸದ ಹೊರತಾಗಿಯೂ, ನಿಗದಿತ 20 ಓವರ್‌ಗಳಲ್ಲಿ 142 ರನ್‌ಗಳಿಗೆ ಸರ್ವಪತನ ಕಂಡಿತು. ಶುಭ್ಮನ್ ಗಿಲ್ ಪಡೆಯ ಸಂಘಟಿತ ಬೌಲಿಂಗ್‌ ದಾಳಿಗೆ ಪತರಗುಟ್ಟಿದ ಪಂಜಾಬ್‌ ಬ್ಯಾಟರ್ಸ್, ಸಾಲು ಸಾಲು ವಿಕೆಟ್‌ ಕಳೆದುಕೊಂಡು ಪೆವಿಲಿಯನ್ ಕಡೆ ಹೆಜ್ಜೆ ಹಾಕಿದರು.

ಇನ್ನು 143 ರನ್‌ಗಳ ಸಾಧಾರಣ ಗುರಿ ಬೆನ್ನಟ್ಟಿದ ಗುಜರಾತ್‌ ತಂಡ ತನ್ನ ಆಲ್‌ರೌಂಡ್ ಪ್ರದರ್ಶನ ನೆರವಿನಿಂದ 19.1 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 146 ರನ್‌ಗಳ ಗುರಿ ತಲುಪಿ ಗೆಲುವಿನ ಕೇಕೆ ಹಾಕಿತು.

ಗುಜರಾತ್‌ ತಂಡದ ಪರ ಇನ್ನಿಂಗ್ಸ್ ಆರಂಭಿಸಿದ ನಾಯಕ ಶುಭ್ಮನ್ ಗಿಲ್ ಮತ್ತು ವೃದ್ಧಮಾನ್ ಸಹಾ ಉತ್ತಮ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 9.3 ಓವರ್‌ಗಳಲ್ಲಿ 66 ರನ್‌ಗಳ ಜೊತೆಯಾಟ ನೀಡಿದರು. ಈ ವೇಳೆ 29 ಎಸೆತಗಳಲ್ಲಿ 5 ಬೌಂಡರಿ ಸಮೇತ 35 ರನ್ ಗಳಿಸಿ ಔಟಾದರು.

PBKS vs GT IPL 2024 Gujarat Titans Beat Punjab Kings By 3 Wickets In 37th Match

ನಂತರ ಬಂದ ಸಾಯಿ ಸುದರ್ಶನ್ ತಮ್ಮ ಆಲ್‌ರೌಂಡ್ ಪ್ರದರ್ಶನವನ್ನು ಮುಂದುವರೆಸಿದರು ಮತ್ತು 34 ಎಸೆತಗಳನ್ನು ಎದುರಿಸಿ 3 ಬೌಂಡರಿ ಮೂಲಕ 31 ರನ್ ಗಳಿಸಿ ಪೆವಿಲಿಯನ್ ಸೇರಿದರು. ಡೇವಿಡ್ ಮಿಲ್ಲರ್, ಅಜ್ಮತುಲ್ಲಾ ಓಮರ್ಜಾಯಿ 13 ರನ್, ರಾಹುಲ್ ತೇವಾಟಿಯಾ 18 ಎಸೆತಗಳಲ್ಲಿ 7 ಬೌಂಡರಿಗಳ ನೆರವಿನಿಂದ 36 ರನ್ ಗಳಿಸಿದರು. ಇನ್ನು ಶಾರೂಕ್ ಖಾನ್ 8 ರನ್ ಗಳಿಸಿದರೆ, ರಶೀದ್ ಖಾನ್ 3 ರನ್ ಗಳಿಸಿ ತಂಡದ ಗೆಲುವಿಗೆ ಕಾಣಿಕೆ ನೀಡಿದರು.

ಇನ್ನು ಬೌಲಿಂಗ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪರ ಹರ್ಷಲ್ ಪಟೇಲ್ ಓವರ್‌ಗಳಲ್ಲಿ 3 ಓವರ್‌ಗಳಲ್ಲಿ 15 ರನ್ ನೀಡಿ 3 ವಿಕೆಡ್ ಪಡೆದರು. ಲಿಯಾಮ್ ಲಿವಿಂಗ್‌ಸ್ಟೋನ್ 2 ವಿಕೆಟ್ ಪಡೆದರೆ, ಅರ್ಶ್‌ದೀಪ್ ಸಿಂಗ್ ಮತ್ತು ಸ್ಯಾಮ್ ಕರ್ರಾನ್ ತಲಾ ಒಂದೊಂದು ವಿಕೆಟ್ ಪಡೆದರು.

ಇದಕ್ಕೂ ಮುನ್ನ ಪಂಜಾಬ್ ಕಿಂಗ್ಸ್ ತಂಡದ ಪರ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಹಂಗಾಮಿ ನಾಯಕ ಸ್ಯಾಮ್ ಕರ್ರಾನ್ ಮತ್ತು ಪ್ರಭ್‌ಸಿಮ್ರಾನ್ ಸಿಂಗ್ ಉತ್ತಮ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 5.3 ಓವರ್‌ಗಳಲ್ಲಿ 52 ರನ್ ಗಳಿಸಿದರು. ಈ ವೇಳೆ 21 ಎಸೆತಗಳಲ್ಲಿ 3 ಬೌಂಡರಿ ಹಾಗೂ 3 ಸಿಕ್ಸರ್‌ಗಳ ಮೂಲಕ 35 ರನ್ ಗಳಿಸಿದ್ದ ಪ್ರಭ್‌ಸಿಮ್ರಾನ್ ಸಿಂಗ್ ಔಟಾದರು.

ನಂತರ ಬಂದ ರಿಲೀ ರುಸ್ಸೌ 9 ರನ್, ಜಿತೇಶ್ ಶರ್ಮಾ 13 ರನ್, ಲಿಯಾಮ್ ಲಿವಿಂಗ್‌ಸ್ಟೋನ್ 6 ರನ್, ಶಶಾಂಕ್ ಸಿಂಗ್ 8 ರನ್, ಅಶುತೋಷ್ ಶರ್ಮಾ 3 ರನ್, ಹರ್‌ಪ್ರೀತ್ ಸಿಂಗ್ 14 ರನ್, ಹರ್‌ಪ್ರೀತ್ ಬ್ರಾರ್ 12 ಎಸೆತಗಳಲ್ಲಿ 4 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 29 ರನ್ ಗಳಿಸಿದರು.

ಬೌಲಿಂಗ್‌ನಲ್ಲಿ ಗುಜರಾತ್ ಟೈಟನ್ಸ್ ತಂಡದ ಪರ ಸಾಯಿ ಕಿಶೋರ್ 4 ಓವರ್‌ಗಳಲ್ಲಿ 33 ರನ್ ನೀಡಿ 4 ವಿಕೆಟ್ ಪಡೆದರೆ, ನೂರ್ ಅಹ್ಮದ್ 2 ವಿಕೆಟ್ ಮತ್ತು ಮೋಹಿತ್ ಶರ್ಮಾ 2 ವಿಕೆಟ್ ಪಡೆದರು.

Story first published: Sunday, April 21, 2024, 23:15 [IST]
Other articles published on Apr 21, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+