For Quick Alerts
ALLOW NOTIFICATIONS  
For Daily Alerts
 

IPL 2022: ಟಿ20 ಕ್ರಿಕೆಟ್‌ನಲ್ಲಿ ಭಾರತೀಯ ಆಟಗಾರರ ಪೈಕಿ ಶಿಖರ್ ಧವನ್ ದಾಖಲೆ

PBKS vs GT: Shikhar Dhawan new record, becomes 1st Indian to hit 1000 boundaries in T20s

ಶುಕ್ರವಾರ ನಡೆದ ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ನಡುವಿನ ಪಂದ್ಯ ಅತ್ಯಂತ ರೋಚಕವಾಗಿ ಅಂತ್ಯಕಂಡಿದೆ. ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ ಅಂತಿಮ ಎಸೆತದಲ್ಲಿ ಸಿಕ್ಸರ್ ಬಾರಿಸಿ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ಆರಂಭಿಕ ಆಟಗಾರ ಶಿಖರ್ ಧವನ್ ವಿಶೇಷ ದಾಖಲೆಯೊಂದನ್ನು ಮಾಡಿದ್ದಾರೆ. ಭಾರತೀಯ ಆಟಗಾರರ ಪೈಕಿ ಟಿ20 ಕ್ರಿಕೆಟ್‌ನಲ್ಲಿ 1000 ಬೌಂಡರಿ ಸಿಡಿಸಿದ ಆಟಗಾರ ಎಂಬ ದಾಖಲೆಯನ್ನು ಧವನ್ ತಮ್ಮ ಹೆಸರಿಗೆ ಬರೆದಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ಈ ಸಾಧನೆಯನ್ನು ಮಾಡಿದ ವಿಶ್ವದ ಕೇವಲ 5ನೇ ಕ್ರಿಕೆಟಿಗ ಎನಿಸಿದ್ದಾರೆ ಶಿಖರ್ ಧವನ್. ಈ ಮೂಲಕ ಟಿ20 ಕ್ರಿಕೆಟ್‌ನ ದಿಗ್ಗಜ ವೆಸ್ಟ್ ಇಂಡೀಸ್ ಕ್ರಿಕೆಟಿಗ ಕ್ರಿಸ್ ಗೇಲ್ ಅವರಿರುವ ವಿಶೇಷ ಎಲೈಟ್ ಪಟ್ಟಿಗೆ ಧವನ್ ಸೇರ್ಪಡೆಯಾಗಿದ್ದಾರೆ.

ಶುಕ್ರವಾರ ಪಂಜಾಬ್ ಕಿಂಗ್ಸ್ ಪರವಾಗಿ ಕಣಕ್ಕಿಳಿಯುವ ಮೂಲಕ ಧವನ್ 307ನೇ ಟಿ20 ಕ್ರಿಕೆಟ್ ಆಡಿದಂತಾಗಿದೆ. ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಧವನ್ 35 ರನ್‌ಗಳ ಕೊಡುಗೆ ನೀಡಿದ್ದಾರೆ. ಇದರಲ್ಲಿ 4 ಬೌಂಡರಿ ಸಿಡಿಸಿದ್ದರು. ಈ ಪಂದ್ಯದಲ್ಲಿ ಈ ವಿಶೇಷ ದಾಖಲೆ ಬರೆಯಲು ಧವನ್ 3 ಬೌಂಡರಿ ಗಳಿಸಬೇಕಿತ್ತು.

ಭಾರತದ ಪರವಾಗಿ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬೌಂಡರಿ ಗಳಿಸಿದ ಆಟಗಾರರ ಪಟ್ಟಿ

ಶಿಖರ್ ಧವನ್- 1001
ವಿರಾಟ್ ಕೊಹ್ಲಿ-917
ರೋಹಿತ್ ಶರ್ಮಾ- 875
ಸುರೇಶ್ ರೈನಾ-779

ಗುಜರಾತ್ ಟೈಟನ್ಸ್: ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಅಭಿನವ್ ಮನೋಹರ್, ರಶೀದ್ ಖಾನ್, ಲಾಕಿ ಫರ್ಗುಸನ್, ಮೊಹಮ್ಮದ್ ಶಮಿ, ದರ್ಶನ್ ನಲ್ಕಂಡೆ

ಬೆಂಚ್: ವಿಜಯ್ ಶಂಕರ್, ವರುಣ್ ಆರೋನ್, ವೃದ್ಧಿಮಾನ್ ಸಹಾ, ಪ್ರದೀಪ್ ಸಾಂಗ್ವಾನ್, ಜಯಂತ್ ಯಾದವ್, ಗುರುಕೀರತ್ ಸಿಂಗ್ ಮಾನ್, ಅಲ್ಜಾರಿ ಜೋಸೆಫ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ರಹಮಾನುಲ್ಲಾ ಗುರ್ಬಾಜ್, ಡೊಮಿನಿಕ್ ಡ್ರೇಕ್ಸ್, ಯಶ್ ದಯಾಳ್, ನೂರ್ ಅಹ್ಮದ್

ರಸ್ತೆಯಲ್ಲೇ ಬಸ್ ನಿಲ್ಲಿಸಿದ ಧೋನಿ ಜಾಹೀರಾತು ಬ್ಯಾನ್? ಏನಿದು ಕಿರಿಕ್?? | Oneindia Kannada

ಪಂಜಾಬ್ ಕಿಂಗ್ಸ್: ಮಯಾಂಕ್ ಅಗರ್ವಾಲ್ (ನಾಯಕ), ಶಿಖರ್ ಧವನ್, ಲಿಯಾಮ್ ಲಿವಿಂಗ್ಸ್ಟೋನ್, ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ, ಶಾರುಖ್ ಖಾನ್, ಓಡಿಯನ್ ಸ್ಮಿತ್, ಕಗಿಸೊ ರಬಾಡ, ರಾಹುಲ್ ಚಾಹರ್, ವೈಭವ್ ಅರೋರಾ, ಅರ್ಶ್‌ದೀಪ್ ಸಿಂಗ್
ಬೆಂಚ್: ಭಾನುಕಾ ರಾಜಪಕ್ಸೆ, ಬೆನ್ನಿ ಹೋವೆಲ್, ಸಂದೀಪ್ ಶರ್ಮಾ, ರಿಷಿ ಧವನ್, ಬಲ್ತೇಜ್ ಸಿಂಗ್, ರಿಟಿಕ್ ಚಟರ್ಜಿ, ಪ್ರೇರಕ್ ಮಂಕಡ್, ಇಶಾನ್ ಪೊರೆಲ್, ಅಥರ್ವ ಟೈಡೆ, ಪ್ರಭ್‌ಸಿಮ್ರಾನ್ ಸಿಂಗ್, ಹರ್‌ಪ್ರೀತ್ ಬ್ರಾರ್, ಅನ್ಶ್ ಪಟೇಲ್, ರಾಜ್ ಬಾವಾ

Story first published: Saturday, April 9, 2022, 9:33 [IST]
Other articles published on Apr 9, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+